Mysuru Royal Family Property: ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರ ಆಸ್ತಿ: ತಕರಾರು ಅರ್ಜಿ ಸಲ್ಲಿಕೆ
Mysuru Royal Family Property: ಇತ್ತೀಚಿನ ದಿನಗಳಲ್ಲಿ ಆಸ್ತಿ ವಿಚಾರಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಹಾಗೆಯೇ ಇದೀಗ ಮೈಸೂರು ಮಹಾರಾಜರಿಗೆ ಸೇರಿರುವ ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಮತ್ತು ಖಾತೆ ಆಗುವವರೆಗೂ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ಯಾವುದೇ ವಹಿವಾಟುಗಳನ್ನ ನಡೆಸದಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಜಿಲ್ಲಾಧಿಕಾರಿ, ಕೊಳ್ಳೇಗಾಲ ಉಪವಿಭಾಗಾಧಿಕಾರಿ ಮತ್ತು ಚಾಮರಾಜನಗರ ತಹಶೀಲ್ದಾರ್ಗೆ ಮಾರ್ಚ್ 21ರಂದು ರಾಜವಂಶಸ್ಥೆ ಪ್ರಮೋದಾದೇವಿ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಮೈಸೂರು ಮಹಾರಾಜರು ಮತ್ತು ಭಾರತ ಸರ್ಕಾರದ ನಡುವೆ 1950ರ ಜನವರಿ 6ರಲ್ಲಿ ನಡೆದ ಒಪ್ಪಂದದ ಪ್ರಕಾರ, ಚಾಮರಾಜನಗರ ಜಿಲ್ಲೆಯಲ್ಲಿನ ಸ್ವತ್ತುಗಳು ಮೈಸೂರು ಮಹಾರಾಜರ ಖಾಸಗಿ ಸ್ವತ್ತು ಎಂದು ಒಪ್ಪಂದವಾಗಿರುತ್ತದೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಚಾಮರಾಜನಗರ ತಾಲೂಕಿನ ವಿವಿಧೆಡೆ 4,500 ಎಕರೆಗೂ ಹೆಚ್ಚು ಭೂಮಿ ಮೈಸೂರು ಮಹಾರಾಜರ ಖಾಸಗಿ ಸ್ವತ್ತಾಗಿದೆ. ಚಾಮರಾಜನಗರ ತಾಲೂಕಿನ ಅಟ್ಟುಗುಳಿಪುರ, ಉಮ್ಮತ್ತೂರು ಬೂದಿತಿಟ್ಟು, ಹರದನಹಳ್ಳಿ, ಚಾಮರಾಜನಗರ, ಕನ್ನಿಕೆರೆ ಬಸವಾಪುರ, ಕರಡಿಹಳ್ಳ್ಳ ಸರ್ವೆ ನಂಬರ್ ಗಳಲ್ಲಿರುವ 4,500 ಎಕರೆಗೂ ಹೆಚ್ಚು ಭೂಮಿ 1950ರ ಒಪ್ಪಂದದ ಪ್ರಕಾರ ಇದು ಮೈಸೂರು ಮಹಾರಾಜರ ಖಾಸಗಿ ಸ್ವತ್ತಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಅಲ್ಲದೆ ಖಾತೆ ಆಗುವವರೆಗೂ ದುರಸ್ತಿ, ಬೇರೆಯವರಿಗೆ ಖಾತೆ ಹಾಗೂ ಯಾವುದೇ ರೀತಿಯ ವಹಿವಾಟು ನಡೆಸಬಾರದು. ಈ ಭೂಮಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಪ್ರಮೋದಾದೇವಿಯವರು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಸ್ವತ್ತುಗಳಲ್ಲಿ ಯಾವುದೇ ರೀತಿಯ ಖಾತೆ, ದುರಸ್ತಿ ಮತ್ತು ಯಾವುದೇ ರೀತಿಯ ವಹಿವಾಟುಗಳನ್ನು ನಡೆಸದಂತೆ ಈ ಮನವಿಯನ್ನೇ ತಕರಾರು ಮನವಿ ಎಂದು ಪರಿಗಣಿಸಿಕೊಂಡು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿದ್ದಾರೆ.
ಇತ್ತೀಚಿನ ಮಾಹಿತಿಯಂತೆ ಈ ಗ್ರಾಮಗಳಲ್ಲಿ ಕಂದಾಯ ಗ್ರಾಮಗಳಾಗಿ ರಚನೆ ಮಾಡುತ್ತಿರುವುದು ಕಂಡು ಬಂದಿದೆ.
ಸದರಿ ಸ್ವತ್ತುಗಳು ಮಹಾರಾಜರ ಖಾಸಗಿ ಸ್ವತ್ತಾಗಿರುವುದರಿಂದ ಯಾವುದೇ ರೀತಿಯ ಕಂದಾಯ ಗ್ರಾಮವನ್ನಾಗಿ ಪರಿವರ್ತಿಸದಂತೆಯೂ ಕೂಡ ಈ ತಕರಾರು ಅರ್ಜಿಯನ್ನು ಸಲ್ಲಿಸುತ್ತಿದ್ದು, ಈ ಮನವಿಯನ್ನು ಪರಿಗಣಿಸುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮಾಡಿದ್ದಾರೆ.












Click it and Unblock the Notifications