Get Updates
Get notified of breaking news, exclusive insights, and must-see stories!

Lok Sabha Election 2024: ಚಾಮರಾಜನಗರ ಕ್ಷೇತ್ರದಿಂದ ಕೆ.ಶಿವರಾಂ ಪತ್ನಿಗೆ ಬಿಜೆಪಿ ಟಿಕೆಟ್?

ಚಾಮರಾಜನಗರ, ಮಾರ್ಚ್‌, 11: ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ರಾಜ್ಯದ್ಯಂತ ಬಿಜೆಪಿ, ಕಾಂಗ್ರೆಸ್‌, ಮೈತ್ರಿ ಜೆಡಿಎಸ್‌ ಪಕ್ಷಗಳ ನಾಯಕರು ಗೆಲುವಿಗಾಗಿ ಭಾರೀ ಪೈಪೋಟಿ ನಡೆಸಿತ್ತಿದ್ದಾರೆ. ಇನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ ಕೊಡಬೇಕು ಎನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಹಾಗೂ ಈ ಕ್ಷೇತ್ರದ ಇತಿಹಾಸ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಲೇ ಇದೆ. ಹಳೇ ಮೈಸೂರು ಭಾಗದ ಜಾನಪದ ಕಲೆಗಳ ತವರೂರು, ಮಲೆ ಮಹದೇಶ್ವರ, ಬಿಳಿಗಿರಿರಂಗನಾಥ, ಹಿಮವದ್ ಗೋಪಾಲಸ್ವಾಮಿ ಕ್ಷೇತ್ರ ಜೊತೆಗೆ ನಾಡು-ನುಡಿಯ ಹೋರಾಟದ ನೆಲ ಎನ್ನುವ ಕಿರೀಟವೂ ಗಡಿಜಿಲ್ಲೆ ಚಾಮರಾಜನಗರಕ್ಕಿದೆ. ಇದು ಪ್ರವಾಸಿ ತಾಣಗಳನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿರುವ ಜಿಲ್ಲೆಯೂ ಹೌದು. ಇನ್ನು ಈ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಹೇಗಿವೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

Lok Sabha Election 2024 BJP ticket for K Shivaram s wife from Chamarajanagar constituency

ಚಾಮರಾಜನಗರ ಲೋಕಸಭೆ ಕ್ಷೇತ್ರ, ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್. ಧ್ರುವನಾರಾಯಣ ಅವರು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಎ.ಆರ್. ಕೃಷ್ಣ ಮೂರ್ತಿ ಅವರನ್ನು 1,41,182 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಳೆದ ಚುನಾವಣೆಯಲ್ಲಿ ಶೇಕಡಾ 73ರಷ್ಟು ಜನರು ಮತ ಚಲಾವಣೆ ಮಾಡಿದ್ದರು. ಈ ಕ್ಷೇತ್ರದಲ್ಲಿ ಒಟ್ಟು 20,41,153 ಜನಸಂಖ್ಯೆಯಿದ್ದು, ಶೇಕಡಾ 85.17%ರಷ್ಟು ಗ್ರಾಮೀಣ ಮತ್ತು ಶೇಕಡಾ 14.83% ರಷ್ಟು ನಗರ ಜನಸಂಖ್ಯೆಯಿದೆ.

ಇನ್ನು ಈ ಕ್ಷೇತ್ರದ ಬಿಜೆಪಿಯಲ್ಲಿ ಟಿಕೆಟ್‌ ಪಾಲಿಟಿಕ್ಸ್‌ ಜೋರಾಗಿಯೇ ನಡೆಯುತ್ತಿದೆ. ಇನ್ನೂ ಮತ್ತೊಂದೆಡೆ ಇತ್ತೀಚೆಗಷ್ಟೇ ನಿಧನರಾದ ಕೆ.ಶಿವರಾಂ ಪತ್ನಿಗೆ ಬಿಜೆಪಿ ಟಿಕೆಟ್‌ ನೀಡಬೇಕು ಎನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಹೈಕಮಾಂಡ್‌ ಇನ್ನೂ ಕೆಲವೇ ಕ್ಷಣಗಳಲ್ಲಿ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎನ್ನುವ ಮಾಹಿತಿ ಇದ್ದು, ಈ ಪಟ್ಟಿಯಲ್ಲಾದರೂ ರಾಜ್ಯದ ಈ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯಾಗುತ್ತಾ ಎಂದು ಕಾದುನೋಡಬೇಕಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಶಿವರಾಂ ಅವರ ನಿಧನದ ಹಿನ್ನೆಲೆ ಪತ್ನಿ ವಾಣಿ ಶಿವರಾಂ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಮುಖಂಡರು, ಬೆಂಬಲಿಗರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಛಲವಾಧಿ ಮಹಾಸಭಾ, ನಿವೃತ್ತ ಐಎಎಸ್ ಅಧಿಕಾರಿ, ದಿ.ಕೆ.ಶಿವರಾಂ ಅವರ ಪತ್ನಿ ವಾಣಿ ಕೆ.ಶಿವರಾಂ ಅವರಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದೆ.

ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಅಣಗಳ್ಳಿ ಬಸವರಾಜು, ಕಾರ್ಯಾಧ್ಯಕ್ಷ ಹಂಸರಾಜ್ ಮಾತನಾಡಿ, ಕೆ.ಶಿವರಾಂ ಅವರು ನಿವೃತ್ತಿ ನಂತರ ಕಳೆದ 10 ವರ್ಷಗಳಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿ ಪಕ್ಷದ ಎಲ್ಲಾ ಚುನಾವಣೆಗಳಲ್ಲಿ ಕೆಲಸ ಮಾಡಿದ್ದಾರೆ. ಈ ಬಾರಿ ಯಡಿಯೂರಪ್ಪ ಹಾಗೂ ಅನೇಕ ಮುಖಂಡರು ಕೂಡ ಕೆ.ಶಿವರಾಂ ಅವರಿಗೆ ಅವಕಾಶ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ಅಕಾಲಿಕ ಮರಣಕ್ಕೆ ಈಡಾದರು.

ಶಿವರಾಂ ಅವರ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ಛಲವಾದಿ ಮಹಾಸಭಾದಿಂದ ಅವರ ಕುಟುಂಬದ ನೋವಿನ ಮಧ್ಯೆಯೂ ಅವರ ಪತ್ನಿ ವಾಣಿ ಶಿವರಾಂ ಅವರನ್ನು ಭೇಟಿಯಾಗಿ, ಕೆ.ಶಿವರಾಂ ಅವರ ಸ್ಥಾನವನ್ನು ನೀವು ತುಂಬಬೇಕು. ಈ ನಿಟ್ಟಿನಲ್ಲಿ ಸಕ್ರಿಯ ರಾಜಕಾರಣ ಹಾಗೂ ಸಮಾಜಸೇವೆಗೆ ಬರುವಂತೆ ಅವರನ್ನು ಒಪ್ಪಿಸಿದ್ದೇವೆ. ಕೆ. ಶಿವರಾಂ ಅವರ ಪತ್ನಿ ವಾಣಿ ಶಿವರಾಂ ಅವರಿಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಗೆಲುವು ಖಚಿತ ಎಂದು ಆಗ್ರಹಿಸಿದರು.

ಮಾಜಿ ಸಚಿವ ದಿ.ಎಚ್.ಎಸ್.ಮಹದೇವಪ್ರಸಾದ್ ಅವರ ನಿಧನದ ಬಳಿಕ ಗೀತಾ ಮಹದೇವಪ್ರಸಾದ್, ಹಾಗೂ ದಿ.ಆರ್.ಧ್ರುವನಾರಾಯಣ್ ನಂತರ ಅವರ ಪುತ್ರ ದರ್ಶನ್ ಧ್ರುವನಾರಾಯನ್ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅದೇ, ಮಾದರಿಯಲ್ಲಿ ಕೆ.ಶಿವರಾಂ ಅವರ ಜನಪ್ರಿಯತೆಯಲ್ಲಿ ಅವರ ಪತ್ನಿ ವಾಣಿ ಶಿವರಾಂ ಅವರು ಅನುಕಂಪದ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅಣಗಳ್ಳಿ ಬಸವರಾಜು ಅಭಿಪ್ರಾಯಪಟ್ಟರು.

ಪತ್ನಿಗೆ ಟಿಕೆಟ್ ಕೊಟ್ಟರೇ ಗೆಲುವು: ಬಿಜೆಪಿ ಎಸ್‌ಟಿ ಮೋರ್ಚಾದ ಮಾಜಿ ರಾಜ್ಯ ಕಾರ್ಯದರ್ಶಿ ಕೆಲ್ಲಂಬಳ್ಳಿ ಸೋಮನಾಯಕ ಕೂಡ ವಾಣಿ ಶಿವರಾಂ ಅವರಿಗೆ ಟಿಕೆಟ್ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಶಿವರಾಂ ಅವರ ನಿಧನ ಎಸ್ಸಿ, ಎಸ್‌ಟಿ ಸಮುದಾಯಗಳಿಗೆ ತುಂಬಲಾದ ನಷ್ಟ ಉಂಟಾಗಿದೆ .

ಈಗ ಅವರ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ಅವರ ಪತ್ನಿ ವಾಣಿ ಶಿವರಾಂ ಅವರಿಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಗೆಲುವು ಖಚಿತ, ಶಿವರಾಂ ಅವರು ಮಾಡಿರುವ ಜನಪರ ಕೆಲಸಗಳು ಹಾಗೂ ಅವರ ವರ್ಚಸ್ಸು ಕ್ಷೇತ್ರದಲ್ಲಿ ಅನುಕಂಪದ ಅಲೆಯಲ್ಲಿ ವಾಣಿ ಶಿವರಾಂ ಗೆಲುವು ಸಾಧಿಸಲಿದ್ದಾರೆ. ಹೀಗಾಗಿ ಪಕ್ಷದ ವರಿಷ್ಠರು ಟಿಕೆಟ್ ಕೊಡಬೇಕೆಂದು ಒತ್ತಾಯಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+