Lok Sabha Election 2024: ಚಾಮರಾಜನಗರ ಕ್ಷೇತ್ರದಲ್ಲಿರುವ ಮತದಾರರ ವಿವರ-ಅಂಕಿಅಂಶಗಳ ಮಾಹಿತಿ
ಚಾಮರಾಜನಗರ, ಏಪ್ರಿಲ್, 24: ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನ ಬಾಕಿ ಇದ್ದು, ಅಂತಿಮ ಹಂತದ ಸಿದ್ಧತೆಯನ್ನು ಚಾಮರಾಜನಗರ ಜಿಲ್ಲಾಡಳಿತ ನಡೆಸಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 17,78,310 ಮಂದಿ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
ಚಾಮರಾಜನಗರದಲ್ಲಿ ಮಂಗಳವಾರ ಚುನಾವಣಾ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 8,78,702 ಪುರುಷ ಮತದಾರರು, 8,99,501 ಮಹಿಳೆಯರು ಹಾಗೂ 107 ಮಂದಿ ಲಿಂಗತ್ವ ಅಲ್ಪಸಂಖ್ಯಾತ ಮತದಾರರು, 377 ಸೇವಾ ಮತದಾರರು ಸೇರಿ ಒಟ್ಟು 17, 78, 310 ಮಂದಿ ಮತದಾರರು ಇದ್ದಾರೆ ಎಂದರು.

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,000 ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, ಇವುಗಳಲ್ಲಿ 263 ನಗರ ಪ್ರದೇಶದಲ್ಲಿ 1,737 ಮತಗಟ್ಟೆಗಳು ಗ್ರಾಮಾಂತರ ಭಾಗದಲ್ಲಿವೆ. ಮತಗಟ್ಟೆಗಳತ್ತ ಮತದಾರರನ್ನು ಸೆಳೆಯಲು ಈ ಬಾರಿ ಹಲವು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಮಹಿಳೆಯರನ್ನು ಮತಗಟ್ಟೆಗಳತ್ತ ಸೆಳೆಯಲು ಒಟ್ಟು 16 ಸಖಿ ಸೌರಭ ಮತಗಟ್ಟೆಗಳಿವೆ.
ಬುಡಕಟ್ಟು ಮತದಾರರಿಗಾಗಿ ಗುಂಡ್ಲುಪೇಟೆ ತಾಲೂಕಿನಲ್ಲಿ 2 ಸಾಂಪ್ರದಾಯಿಕ ಬುಡಕಟ್ಟು ಮತಗಟ್ಟೆ, ವಿಶೇಷ ಮತದಾರರಿಗಾಗಿ ಸಂಜ್ಞಾ ಭಾಷಾ ಅನುವಾದಕರಿರುವ ಒಟ್ಟು 4 ಮತಗಟ್ಟೆಗಳು, ಯುವ ಮತದಾರರು ಅತಿ ಹೆಚ್ಚು ಇರುವ ಕಡೆ ಒಟ್ಟು 8 ಮತಗಟ್ಟೆಗಳು, ಜಿಲ್ಲೆಯ ಸಾಂಸ್ಕೃತಿಕ ಕಲೆಗಳ ಬಗ್ಗೆ ತಿಳಿಸುವ 2 ಎಥ್ನಿಕ್ ಮತಗಟ್ಟೆಗಳು, ರೈತರ ಮಹತ್ವ ಸಾರುವ 8 ಅನ್ನದಾತ ಮತಗಟ್ಟೆಗಳು, ಅರಣ್ಯದ ಮಹತ್ವ ಸಾರುವ 6 ಹಸಿರು ಮತಗಟ್ಟೆಗಳು ಈ ಬಾರಿ ಇರಲಿವೆ.
ಜಿಲ್ಲಾ ವ್ಯಾಪ್ತಿಯಲ್ಲಿ 197 ಕ್ರಿಟಿಕಲ್ ಮತಗಟ್ಟೆ: ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ 983 ಮತಗಟ್ಟೆಗಳಲ್ಲಿ 197 ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಮೊಬೈಲ್ ನೆಟ್‌ವರ್ಕ್ ಲಭ್ಯವಿಲ್ಲದ ಒಟ್ಟು 17 ಮತಗಟ್ಟೆಗಳನ್ನು ಗುರುತಿಸಲಾಗಿದೆ. 1667 ಆರಕ್ಷಕ ಸಿಬ್ಬಂದಿ- ಚಾಮರಾಜನಗರ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕಾಗಿ 4 ಡಿವೈಎಸ್ಪಿ, 13 ಮಂದಿ ಪಿಐ, 41 ಪಿಎಸ್ಐ, 67 ಎಎಸ್ಐ, 936 ಕಾನ್ಸ್‌ಟೇಬಲ್, 600 ಹೋಂ ಗಾರ್ಡ್, 6 ಮೀಸಲು ಪಡೆ, ಗುಜರಾತ್‌ನ 2 ಮೀಸಲು ಪಡೆ ಈ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
37 ಲಕ್ಷ ಹಣ, 2.7 ಕೆಜಿ ಚಿನ್ನ ವಶ: ಅಧಿಸೂಚನೆ ಪ್ರಕಟಗೊಂಡ ಬಳಿಕ, ಲೋಕಸಭಾ ಕ್ಷೇತ್ರದಲ್ಲಿ ದಾಖಲೆ ಇಲ್ಲದ 37,59,790 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. 106.60 ಕೋಟಿ ಮೌಲ್ಯದ 1.25 ಕೋಟಿ ಲೀಟರ್ ಮದ್ಯ, 4.44 ಕೆ.ಜಿ. ಗಾಂಜಾ, 2.17 ಕೆ.ಜಿ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಎರಡು ದಿನ ಮದ್ಯ ಮಾರಾಟ ಇಲ್ಲ: ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಏಪ್ರಿಲ್ 24ರ ಬೆಳಗ್ಗೆ 6 ರಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ನಿಷೇಧಿಸಿ ಎಂದು ಘೋಷಿಸಿದೆ. ಮತದಾನದ ದಿನದಂದು ಎಲ್ಲಾ ರೀತಿಯ ಜಾತ್ರೆ, ಸಂತೆಗಳನ್ನು ನಿಷೇಧಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications