ಚಾಮರಾಜನಗರ: ಸುತ್ತಲೂ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ರಾಷ್ಟ್ರೀಯ ಹೆದ್ದಾರಿ ಇದು-ಏನಿದರ ವಿಶೇಷತೆ?
ಚಾಮರಾಜನಗರ, ಏಪ್ರಿಲ್, 11: ಇದೊಂದು ರೀತಿ ರಸ್ತೆ ಭಾರೀ ಡಿಫೆರೆಂಟ್ ಅಂದರೂ ತಪ್ಪಿಲ್ಲ. ಏಕೆಂದರೆ, ಈ ರಸ್ತೆಯಲ್ಲಿ ನಿಂತು ಯಾವ ಕಡೆಗೂ ಹೋದರೂ ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಹೋಗಬಹುದು. ಹಾಗಾದರೆ ಆ ರಸ್ತೆ ಯಾವುದು, ಎಲ್ಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಸ್ತೆಗಳು ಒಂದು ಇಲ್ಲವೇ ಎರಡು ವಿಧಾನಸಭಾ ಕ್ಷೇತ್ರಗಳ ಗಡಿ ಹಂಚಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ, ಈ ರಸ್ತೆ ಮಾತ್ರ ಎಲ್ಲದಕ್ಕೂ ಸ್ಪೆಷಲ್ ಆಗಿದ್ದು, ರಸ್ತೆ ನಾಲ್ಕು ದಿಕ್ಕಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಕ್ರಾಸ್ ಎಂಬ ರಸ್ತೆಯು ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯನ್ನು ಹಾದು ಹೋಗಿದ್ದು, ತನ್ನ 4 ಪಾರ್ಶ್ವಕ್ಕೆ 4 ಕ್ಷೇತ್ರಗಳನ್ನು ಹೊಂದಿರುವುದೇ ವಿಶೇಷ.
ಹೆಗ್ಗವಾಡಿ ಕ್ರಾಸ್ ಚಾಮರಾಜನಗರ ಹಾಗೂ ಮೈಸೂರಿನ ಗಡಿಯಾಗಿದ್ದು, ಮುಂದಕ್ಕೆ ಚಲಿಸಿದರೇ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಸಿಗಲಿದೆ. ಹಿಂದಕ್ಕೆ ಹೊರಳಿದರೆ ನಂಜನಗೂಡು, ಎಡಕ್ಕೆ ತಿರುಗಿದರೇ ವರುಣ ಹಾಗೂ ಬಲಭಾಗಕ್ಕೆ 4 ಹೆಜ್ಜೆ ಇಟ್ಟರೇ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಎಂಟ್ರಿ ಪಡೆಯುತ್ತೇವೆ.
ವರುಣ ಕ್ಷೇತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿಲಿದ್ದು, ನಂಜನಗೂಡು ಕ್ಷೇತ್ರವನ್ನು ದರ್ಶನ್ ಧ್ರುವನಾರಾಯಣ, ಗುಂಡ್ಲುಪೇಟೆಯನ್ನು ಗಣೇಶ್ ಪ್ರಸಾದ್ ಹಾಗೂ ಚಾಮರಾಜನಗರ ಕ್ಷೇತ್ರವನ್ನು ಸಿ.ಪುಟ್ಟರಂಗಶೆಟ್ಟಿ ಪ್ರತಿನಿಧಿಸುತ್ತಿದ್ದಾರೆ.
ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಎಲ್ಲಾ ಪಕ್ಷಗಳ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ.
ಇದೀಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹತಾಶೆಗೊಂಡು ಗೂಂಡಾ ವರ್ತನೆ ತೋರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಕೊಳ್ಳೇಗಾಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಾ.ಸಿ.ಎನ್.ಮಂಜುನಾಥ್ ಅಭ್ಯರ್ಥಿ ಆಗಿರುವುದನ್ನು ತಡೆಯಲಾರದೇ ಕಾಂಗ್ರೆಸ್ ಪಕ್ಷದ ಮುಖಂಡರು ಹತಾಶೆಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಮನಿ ಪವರ್, ಮಸಲ್ ಪವರ್‌ನಿಂದ ಚುನಾವಣೆ ಗೆಲ್ಲಬಹುದು ಎಂದುಕೊಂಡಿದ್ದು, ಇದಕ್ಕೆ ಮತದಾರರು ತಕ್ಕ ಉತ್ತರ ಕೊಡಲಿದ್ದಾರೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಎನ್‌ಡಿಎ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ. ಯಾರ ಫೋಟೋ ಹಾಕಬೇಕು, ಹಾಕಬಾರದು ಎಂಬುದನ್ನು ನಾವು ತೀರ್ಮಾನ ಮಾಡುತ್ತೇವೆ. ಯಾರಿಂದಲೂ ಪಾಠ ಕೇಳುವ ಅವಶ್ಯಕತೆ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ಫೋಟೋ ಹೇಳಿಕೆಗೆ ತಿರುಗೇಟು ಕೊಟ್ಟರು.
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎಂದು ಜನರೇ ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಯಾರೇ ಬಂದರೂ ತಡೆಯಲು ಆಗುವುದಿಲ್ಲ. ಇನ್ನು, ಚಾಮರಾಜನಗರದಲ್ಲಿ ಬಾಲರಾಜು ಅವರು ಸಜ್ಜನ ರಾಜಕಾರಣಿ ಆಗಿದ್ದು, ಗೆದ್ದೇ ಗೆಲ್ಲುತ್ತಾರೆ. ವಿ.ಶ್ರೀನಿವಾಸ ಪ್ರಸಾದ್ ಅವರು ಕೂಡ ನಮ್ಮ ಜೊತೆ ಇದ್ದಾರೆ ಎಂದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications