Lok Sabha election 2024: ನನ್ನ ಅಳಿಯಂದಿರಿಬ್ಬರೂ ಚಾಮರಾಜನಗರ ಕ್ಷೇತ್ರದ ಆಕಾಂಕ್ಷಿಗಳು: ಸಂಸದ ಶ್ರೀನಿವಾಸಪ್ರಸಾದ್
ಚಾಮರಾಜನಗರ, ಫೆಬ್ರವರಿ, 26: ನನ್ನ ಅಳಿಯಂದಿರು ಇಬ್ಬರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಆಕಾಂಕ್ಷಿಗಳು, ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರುವಂತೆ ಹೇಳಿದ್ದೇನೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳಿದರು.
ಸೋಮವಾರ (ಫೆಬ್ರವರಿ 26) ಮಧ್ಯಾಹ್ನ ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಇಬ್ಬರು ಅಳಿಯಂದಿರು ಹೊಂದಾಣಿಕೆಯಿಂದ ಇದ್ದಾರೆ. ಕೇಂದ್ರ ಚುನಾವಣಾ ಸಮಿತಿ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರಿಗೆ ಬದ್ಧವಾಗಿರುವಂತೆಯೂ ಹೇಳಿದ್ದೇನೆ. ನನ್ನ ಅಭಿಪ್ರಾಯವನ್ನು ನಾನು ವರಿಷ್ಠರಿಗೆ ಹೇಳಲಿದ್ದು, ಬಹಿರಂಗವಾಗಿ ಹೇಳುವುದಿಲ್ಲ ಎಂದರು.

ಸುದೀರ್ಘ ಕಾಲ ರಾಜಕಾರಣದಲ್ಲಿದ್ದು, ಮಾರ್ಚ್ 17ಕ್ಕೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಅಂದು ಮೈಸೂರಿನ ಕರಾಮುವಿ ಘಟಿಕೋತ್ಸವ ಸಭಾಂಗಣದಲ್ಲಿ ಸ್ವಾಭಿಮಾನಿ ನೆನಪುಗಳು ಎಂಬ ಪುಸ್ತಕ ಹೊರತರಲಿದ್ದು, ನನ್ನ ರಾಜಕೀಯ ಜೀವನವನ್ನು ಬರೆದಿದ್ದೇನೆ. ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ವೀರಪ್ಪ ಮೊಯ್ಲಿ, ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ್ ಕಂಬಾರ್ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ನನ್ನ ಕೊನೆಯ ಅವಧಿಯ ಸಂಸತ್ ದಿನಗಳು ತೃಪ್ತಿಕರವಾಗಿದೆ. ನಾನು ಸಂಸತ್ತಿನಲ್ಲಿ ಹೆಚ್ಚು ಕ್ರೀಯಾಶೀಲನಾಗಿ ಭಾಗಿಯಾಗದಿದ್ದರೂ ಸಂಸದನಾಗಿ ಮಾಡಬೇಕಾದ ಕೆಲಸವನ್ನು ಮಾಡಿದ್ದೇನೆ. ಸೋಮಾರಿಯಾಗಿ ಕುಳಿತಿರಲಿಲ್ಲ, 17.5 ಕೋಟಿ ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ಬಳಸಿದ್ದೇನೆ, ಸಾವಿರಾರು ಮಂದಿಯ ಕಷ್ಟ ಸುಖಗಳಿಗಳಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದರು.
ಹೆಂಡ್ತಿಗೆ 2,000-ಗಂಡನ ತಲೆಗೆ ₹95,000 ಸಾಲದ ಹೊರೆ: ಚಾಮರಾಜನಗರ, ಫೆಬ್ರವರಿ, 23: ಸಿದ್ದರಾಮಯ್ಯ ಸರ್ಕಾರ ಎಡವಟ್ಟಿನ, ಮೋಸಗಾರ ಸರ್ಕಾರ ಎಂದು ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಇನ್ನೂ ಏನೆಲ್ಲ ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಾಮರಾಜನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆ ಮೂಲಕ ಸಿದ್ದಮ್ಮನಿಗೆ 2 ಸಾವಿರ ಹಣ ಕೊಟ್ಟು, ಗಂಡ ಸಿದ್ದಪ್ಪನ ತಲೆ ಮೇಲೆ 95,000 ರೂಪಾಯಿ ಸಾಲದ ಹೊರೆ ಇಟ್ಟಿದ್ದಾರೆ. ಈಗಾಗಲೇ ಸಿದ್ದರಾಮಯ್ಯ 96,000 ಕೋಟಿ ರೂಪಾಯಿ ಸಾಲ ಮಾಡಿದ್ದಾರೆ ಎಂದು ಅವರು ಆರೋಪ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು.
ಪರಿಶಿಷ್ಠ ಜಾತಿ ಹಾಗೂ ಪಂಗಡಕ್ಕೆ 36,000 ಕೋಟಿ ರೂಪಾಯಿ ಅನುದಾನ ಕೊಟ್ಟು, ಅದರಲ್ಲಿ ಗ್ಯಾರಂಟಿ ಯೋಜನೆಗಾಗಿ 14,000 ಕೋಟಿ ರೂಪಾಯಿ ಬಳಸಿಕೊಂಡಿದ್ದಾರೆ. ಇದೊಂದು ಮಾರಕ ಕ್ರಮ, ಸಿದ್ದರಾಮಯ್ಯ ಸರ್ಕಾರ ದಲಿತ ವಿರೋಧಿ, ಮೋಸಗಾರ ಸರ್ಕಾರ ಎಂದು ದೂರಿದರು.
ಇನ್ನು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಅವರು ಮಾತನಾಡಿ, ಸದನದ ಒಳಗೆ ಆರ್.ಅಶೋಕ್ ಮತ್ತು ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು, ಬಿಜೆಪಿ ಕಾರ್ಯಕರ್ತರು ರಾಜ್ಯದ ಎಲ್ಲೆಡೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ. ನುಡಿದಂತೆ ನಡೆದುಕೊಳ್ಳಿ ಎಂದು ಕಾಂಗ್ರೆಸ್‌ನವರಿಗೆ ಮನವರಿಕೆ ಮಾಡಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ಳಬೇಡಿ ಎಂದು ಒತ್ತಾಯಿಸುತ್ತಿದ್ದೇವೆ ಎಂದರು.












Click it and Unblock the Notifications