ವರ್ಗಾವಣೆಗೊಂಡಿದ್ದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಏಕಕಾಲಕ್ಕೆ ಮೂರು ಕಡೆ ರೇಡ್
ಚಾಮರಾಜನಗರ, ಜನವರಿ 31: ವರ್ಗಾವಣೆಗೊಂಡು ಸ್ಥಳ ನಿರೀಕ್ಷಣೆಯಲ್ಲಿದ್ದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಆಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಂಜಿನಿಯರ್ ರವಿಕುಮಾರ್ ಅವರ ಮನೆ ಮೇಲೆ ಚಾಮರಾಜನಗರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆಸ್ತಿ ದಾಖಲೆ ಮತ್ತು ಅಕ್ರಮ ಸಂಪತ್ತಿನ ಬಗ್ಗೆ ಶೋಧ ನಡೆಸುತ್ತಿದ್ದಾರೆ. ಏಕಕಾಲಕ್ಕೆ ಇಂಜಿನಿಯರ್ ರವಿಕುಮಾರ್ ಅವರ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ರವಿಕುಮಾರ್ ಅವರು ಮೊದಲು ಚಾಮರಾಜನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಬಳಿಕ ಟಿ.ನರಸೀಪುರ ಅದಾದ ನಂತರ ಹುಣಸೂರಿಗೆ ವರ್ಗಾವಣೆಗೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಹುಣಸೂರಿನಿಂದ ವರ್ಗಾವಣೆಗೊಂಡಿದ್ದ ರವಿಕುಮಾರ್ ಅವರಿಗೆ ಯಾವುದೇ ಸ್ಥಳ ತೋರಿಸಿರಲಿಲ್ಲ. ಇನ್ನು ಮೈಸೂರಿನಲ್ಲಿರುವ ರವಿಕುಮಾರ್ ಮನೆ ಮತ್ತು ಅವರ ಬಾಮೈದುನನ ಮನೆ ಹಾಗೂ ಆಲಗಳ್ಳಿಯಲ್ಲಿರುವ ತಂದೆ ಮನೆಯಲ್ಲಿ ಏಕಕಾಲಕ್ಕೆ ಲೋಕ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ಮತ್ತು ಹಾಸನದಲ್ಲೂ ಲೋಕಾಯುಕ್ತ ದಾಳಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲನೆ ಮುಂದುವರಿದಿದೆ.
ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಅವರ ಕಡೂರು ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ಲೋಕಾಯುಕ್ತ ಇನ್ಸ್‌ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ದಾಳಿ ಮಾಡಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.












Click it and Unblock the Notifications