Loksabha election 2024: ನನಗೆ ವಯಸ್ಸಾಗಿದೆ ಪಾರ್ಲಿಮೆಂಟ್‌ಗೆ ಹೋಗಲ್ಲ, ನಾನು ಆಕಾಂಕ್ಷಿನೂ ಅಲ್ಲ: ಸಚಿವ ಕೆ.ವೆಂಕಟೇಶ್
ಚಾಮರಾಜನಗರ, ನವೆಂಬರ್, 28: ನನಗೆ ವಯಸ್ಸಾಗಿದೆ, ನಾನು ಪಾರ್ಲಿಮೆಂಟ್‌ಗೆ ಹೋಗುವುದಿಲ್ಲ, ನಾನು ಆಕಾಂಕ್ಷಿನೂ ಅಲ್ಲ ಎಂದು ಸಚಿವ ವೆಂಕಟೇಶ್ ಚಾಮರಾಜನಗರದಲ್ಲಿ ಹೇಳಿದರು.
ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿದ ಅವರು, ನಾನು ಲೋಕಸಭೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲೂ ಹೇಳಿಲ್ಲ, ಅದು ಮಾಧ್ಯದವರ ಸೃಷ್ಟಿ. ನಾನು ಲೋಕಸಭಾ ಚುನಾವಣೆಯ ಸ್ಪರ್ಧೆಯ ಆಕಾಂಕ್ಷಿಯೂ ಅಲ್ಲ ಎಂದರು.

ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಮೂಡಿರುವ ಭಿನ್ನಾಭಿಪ್ರಾಯದ ಬಗ್ಗೆ ಮಾತನಾಡಿದ ಅವರ , ಆ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ, ಶಾಸಕರು ಮತ್ತು ಕಾರ್ಯಕರ್ತರಿಗೆ ಕೊಡಬೇಕು ಎಂದು ತೀರ್ಮಾನ ಮಾಡಲಾಗಿದೆ. ನಮ್ಮಲ್ಲಿ ಯಾವುದೇ ಬಣಗಳಿಲ್ಲ, ಅಭಿಪ್ರಾಯಗಳು ಹೇಳುವುದು ತಪ್ಪಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು, ವರ್ಗಾವಣೆ ದಂಧೆ ಹಾಗೂ ಉಮಾಪತಿ ಆಡಿಯೋ ವೈರಲ್ ಬಗ್ಗೆ ಪ್ರತಿಕ್ರಿಯಿಸಿ, ವಿರೋಧ ಪಕ್ಷಗಳು ಸಣ್ಣ ವಿಚಾರವನ್ನು ದೊಡ್ಡದು ಮಾಡುತ್ತಿದ್ದು, ಅದಕ್ಕೆ ಮಾಧ್ಯಮ ಅವರಿಗೆ ಬೆಂಬಲ ಕೊಡುತ್ತಿದೆ. ಸಣ್ಣ ವಿಚಾರಗಳನ್ನು ದೊಡ್ಡದು ಮಾಡಿ ಜನರಿಗೆ ತಪ್ಪು ಸಂದೇಶ ಕೊಡಲಾಗುತ್ತಿದೆ ಎಂದು ಕಿಡಿಕಾರಿದರು.
ಡಿಕೆಶಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆದಿತ್ತು. ಈ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇದೀಗ ಬಿಜೆಪಿ ಶಾಸಕ ಹಿಂದೂ ಫೈಯರ್ ಬ್ರಾಂಡ್ ಅಂತಲೇ ಕರೆಸಿಕೊಳ್ಳುವ ಬಸನಗೌಡ ಪಾಟೀಲ್ ಯತ್ನಾಳ್ ಡಿಸಿಎಂ ಡಿ.ಕೆ.ಶಿ. ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈಗಾಗಲೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಪ್ರಕರಣ ಸಂಬಂಧ ತೆಗೆದುಕೊಂಡ ನಿರ್ಧಾರದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದರು. ಅಲ್ಲದೇ ತಾವು ಸರ್ಕಾರದ ಕ್ರಮವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದರು.
ಇದೀಗ ಅದರಂತೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ನಿರ್ಧಾರ ಕ್ರಮವಾಗಿಲ್ಲ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ನೀಡಲಾಗಿದ್ದಂತಹ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮದ ಬಗ್ಗೆ ಸೂಕ್ತ ನಿರ್ದೇಶವನ್ನು ಸರ್ಕಾರಕ್ಕೆ ನೀಡುವಂತೆ ಕೋರಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications