ಮಧುವನಹಳ್ಳಿ: ಎಣ್ಣೆ ಜೊತೆ ವಿಷ ಸೇವಿಸಿದ ಕುಚುಕುಗಳು, ಓರ್ವ ಸಾವು, ಕಾರಣ ಏನು?
ಚಾಮರಾಜನಗರ, ಜೂನ್, 09: ಇಬ್ಬರು ಆತ್ಮೀಯ ಸ್ನೇಹಿತರು ಮದ್ಯದ ಜೊತೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಗುರುವಾರ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನು(19) ಹಾಗೂ ಇತ್ತಲದೊಡ್ಡಿ ಗ್ರಾಮದ ಆನಂದ್ ಅಲಿಯಾಸ್ ನಾಗೇಂದ್ರ (19) ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ನಾಗೇಂದ್ರ ಎಂಬಾತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇನ್ನು ಮನು ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಮೃತ ನಾಗೇಂದ್ರ ಹಾಗೂ ಮನು ಇವರಿಬ್ಬರೂ ಸಹ ಪ್ರಾಣ ಸ್ನೇಹಿತರಾಗಿ ಜೊತೆಯಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದರು. ನಾಗೇಂದ್ರನ ಕೈಯಲ್ಲಿ ಮನು ಎಂಬ ಹೆಸರು ಹಾಗೂ ಮನು ಕೈಯಲ್ಲಿ ನಾಗೇಂದ್ರ ಎಂಬ ಹೆಸರನ್ನು ಇಬ್ಬರು ಸಹ ಅಚ್ಚೆ ಹಾಕಿಸಿಕೊಂಡಿದ್ದರು. ಇವರಿಬ್ಬರ ಸ್ನೇಹವನ್ನು ನೋಡಿ ಗ್ರಾಮದವರೇ ಆಪ್ತಮಿತ್ರರು ಎಂದು ಕರೆಯುತ್ತಿದ್ದರು.
ನಾಗೇಂದ್ರ ಅವರ ತಂದೆ, ತಾಯಿ ಕೆಲ ದಿನಗಳ ಹಿಂದೆ ಇಬ್ಬರು ಸಹ ಸಾವನ್ನಪ್ಪಿದ್ದರು. ಇದರಿಂದ ಬೇಸತ್ತ ನಾಗೇಂದ್ರ, ನನಗೆ ಅಪ್ಪ ಅಮ್ಮ ಯಾರು ಇಲ್ಲ, ನಾನು ಜೀವನದಲ್ಲಿ ಬದುಕಿದ್ದರೂ ಸಹ ಪ್ರಯೋಜನವಿಲ್ಲ. ಹಾಗಾಗಿ ನಾನು ಬದುಕುವುದು ವ್ಯರ್ಥ ಎಂದು ಆಗಾಗ ಹೇಳುತ್ತಿದ್ದನಂತೆ.
ಇದರಿಂದ ಬೇಸತ್ತು ಇವರಿಬ್ಬರೂ ಸಹ ಕೊಳ್ಳೇಗಾಲ ತಾಲೂಕಿನ ಲಕ್ಕರಸನ ಪಾಳ್ಯ ಗ್ರಾಮದ ರಸ್ತೆಯಲ್ಲಿ ಮಧ್ಯದ ಜೊತೆಗೆ ವಿಷ ಸೇವಿಸಿ ರಸ್ತೆಯಲ್ಲಿ ಒದ್ದಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ಇವರಿಬ್ಬರನ್ನು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಾಗೇಂದ್ರ ಸಾವನ್ನಪ್ಪಿದ್ದು, ಮತ್ತೊಂದೆಡೆ ಮನು ಚಿಂತಾ ಜನಕ ಸ್ಥಿತಿಯಲ್ಲಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
40 ಜನರಿಗೆ ವಾಂತಿ, ಭೇದಿ
ಇನ್ನು ಖಾಸಗಿ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ್ದ 40 ಜನರಿಗೆ ವಾಂತಿ, ಭೇದಿಯಾಗಿರುವ ಘಟನೆ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ ಇತ್ತೀಚಗಷ್ಟೇ ನಡೆದಿತ್ತು.
ಗ್ರಾಮದ ಕುಟುಂಬವೊಂದರ ಖಾಸಗಿ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ್ದ ಹಿರೇಹಡಗಲಿಯ 27 ಜನ, ಹ್ಯಾರಡ ಗ್ರಾಮದ 13 ಜನರಿಗೆ ಹೊಟ್ಟೆ ನೋವು ಆರಂಭವಾಗಿ ವಾಂತಿ ಭೇದಿ ಕಾಣಿಸಿಕೊಂಡಿದೆ. ನಂತರ ಅಸ್ವಸ್ಥಗೊಂಡಿದ್ದ ಎಲ್ಲರನ್ನೂ ಹಿರೇಹಡಗಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಲೀಂ ಹಾಗೂ ವೈದ್ಯರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅವರೆಲ್ಲ ದೋಷಪೂರಿತ ಆಹಾರ ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ ಎನ್ನು ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಅವರು ಚೇತರಿಸಿಕೊಂಡಿದ್ದರು ಎಂದು ತಿಳಿದುಬಂದಿತ್ತು.
30ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ
ಹಾಗೆಯೇ ಚರಂಡಿ ನೀರು ಬೆರೆತ ನೀರನ್ನು ಕುಡಿದು ಆಸ್ಪತ್ರೆಗೆ ಸೇರಿದ್ದ ಸುಮಾರು 30ಕ್ಕೂ ಅಧಿಕ ಮಂದಿ ಪೈಕಿ ಓರ್ವ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇತ್ತೀಚೆಗಷ್ಟೇ ನಡೆದಿತ್ತು. ಕಲುಷಿತ ನೀರು ಸೇವಿಸಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ವ್ತಾಪ್ತಿಯ ಅನಪುರ ಗ್ರಾಮೀಣ ನಿವಾಸಿಯಾಗಿರುವ ಸಾವಿತ್ರಮ್ಮ (34) ಎಂಬುವವರು ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಜೀವ ಧಾರುಣ ಘಟನೆ ನಡೆದಿತ್ತು. ಅನಪುರ ಗ್ರಾಮಕ್ಕೆ ಸರಬರಾಜು ಆಗುತ್ತಿದ್ದ ಕುಡಿಯುವ ನಿರೀನ ಪೈಪ್‌ಗೆ ಚರಂಡಿ ನೀರು ಕೂಡಿಕೊಂಡು ಶುದ್ಧ ನೀರು ಕಲುಷಿತಗೊಂಡಿದೆ. ಆ ನೀರು ಕುಡಿದ ಗ್ರಾಮದ 30ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಆಗಿದೆ. ಪ್ರಕರಣ ಗೊತ್ತಾಗುತ್ತಿದ್ದಂತೆ ಅವರೆಲ್ಲರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನೀರು ಕಲುಷಿತಗೊಂಡಿದ್ದೇ ಜನರು ಅಸ್ವಸ್ಥರಾಗಲು ಪ್ರಮುಖ ಕಾರಣ ಎಂದು ಹೇಳಲಾಗಿತ್ತು.












Click it and Unblock the Notifications