ಮಾದಪ್ಪನ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರೆ; ಹರಿದು ಬಂದ ಭಕ್ತಸಾಗರ

ಸೋಮವಾರದಿಂದ ಮೂರು ದಿನಗಳ ಕಾಲ ಮಹಾಲಯ ಅಮಾವಾಸ್ಯೆ ಜಾತ್ರೆ ನಡೆಯಲಿದ್ದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಸೋಮವಾರ ಎಣ್ಣೆ ಮಜ್ಜನ ವಿಶೇಷ ಸೇವೆ ಉತ್ಸವಾದಿಗಳು ನಡೆದರೆ, ಅ.2ರಂದು ಮಹಾಲಯ ಅಮಾವಾಸ್ಯೆ ವಿಶೇಷ ಉತ್ಸವಗಳು ಜರುಗಲಿದೆ. ಅಕ್ಟೋಬರ್ ಮೂರರಿಂದ ನವರಾತ್ರಿ ಉಯ್ಯಾಲೆ ಉತ್ಸವ ವಿಶೇಷ ಪೂಜೆಗಳು ಆರಂಭವಾಗಲಿದ್ದು ಸೋಮವಾರದಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ.

ಮಹಾಲಯ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿಶೇಷ ದಾಸೋಹ, ಅತಿಥಿ ಗಣ್ಯರಿಗೆ ನೇರದರ್ಶನ, ನೆರಳಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಹಿರಿಯ ನಾಗರಿಕರಿಗೆ ಪ್ರತ್ಯೇಕ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ.

Mahalaya Amavasye Jathre Thousands of Devotees to Visit Male Mahadeshwara

ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಬೆಂಗಳೂರು, ರಾಮನಗರ, ಕನಕಪುರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಕೋಲಾರ, ಶಿವಮೊಗ್ಗ ತಮಿಳುನಾಡು ಭಾಗಗಳಿಂದ ಲಕ್ಷಾಂತರ ಭಕ್ತಾದಿಗಳು ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಯಾವುದೇ ಅನಾನುಕೂಲವಾಗದಂತೆ ಪ್ರಾಧಿಕಾರದ ವತಿಯಿಂದ ಈಗಾಗಲೇ ಸೂಕ್ತ ಕ್ರಮ ವಹಿಸಲಾಗಿದೆ.

ವಿಶೇಷ ದಾಸೋಹ

ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ, ಪೊಲೀಸ್ ಸಿಬ್ಬಂದಿಗಳು ಗೃಹರಕ್ಷಕ ದಳದವರು ಅಧಿಕಾರಿ ವರ್ಗದವರಿಗೆ ವಿಶೇಷ ದಾಸೋಹ ತೆರೆಯಲಾಗಿದೆ. ನಿರಂತರ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಭಕ್ತಾದಿಗಳು ನೀಡಿರುವ ದವಸಧಾನ್ಯಗಳು ತರಕಾರಿಗಳ ಜೊತೆಗೆ ಪ್ರಾಧಿಕಾರದ ವತಿಯಿಂದಲೂ ಮಾರುಕಟ್ಟೆಯಿಂದ ಉತ್ತಮ ತರಕಾರಿ ಖರೀದಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಇದಲ್ಲದೆ ಬರುವಂತಹ ಭಕ್ತಾದಿಗಳಿಗೆ ಗುಣಮಟ್ಟದ ಆಹಾರ ವಿತರಿಸಲು ಈಗಾಗಲೇ ಸಿಬ್ಬಂದಿಗಳಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಸೂಚನೆ ನೀಡಿದ್ದಾರೆ.

60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ಬರುವ 60 ವರ್ಷ ಮೇಲ್ಪಟ್ಟವರಿಗೆ ನೇರದರ್ಶನ ಅವಕಾಶ ಮಾಡಿಕೊಡುವಂತೆ, ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದ ಆಲಂಬಾಡಿ ಬಸವ ದ್ವಾರದಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಅತಿಥಿ ಗಣ್ಯರು, ಅಂಗವಿಕಲರಿಗೆ ಗೇಟ್ ನಂಬರ್ ನಾಲ್ಕರಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತೋರಿಸಿ ದರ್ಶನ ಪಡೆಯಬಹುದಾಗಿದೆ.

2 ಲಕ್ಷ ಲಾಡು ತಯಾರಿ

ಮಹಾಲಯ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳು ಲಡ್ಡು ಪ್ರಸಾದಕ್ಕೆ ಹೆಚ್ಚಿನ ಆದ್ಯತೆ ನೀಡುವುದರಿಂದ ಈಗಾಗಲೇ ಪ್ರಾಧಿಕಾರದ ವತಿಯಿಂದ ಎರಡು ಲಕ್ಷ ಲಾಡು ತಯಾರಿಸಿ ಸಂಗ್ರಹ ಮಾಡಲಾಗಿದೆ.

300 ಕೆಎಸ್ಆರ್ ಟಿಸಿ ಬಸ್ ಗಳ ವ್ಯವಸ್ಥೆ

ಮೂರು ದಿನಗಳ ಕಾಲ ನಡೆಯುವ ಮೊದಲ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವುದರಿಂದ ಬೆಂಗಳೂರು, ಮೈಸೂರು ಕೊಳ್ಳೇಗಾಲ, ಮಂಡ್ಯ, ನಂಜನಗೂಡು ಸೇರಿದಂತೆ ಹಲವು ಡಿಪೋಗಳಿಂದ 300 ಬಸ್ಸುಗಳನ್ನು ಬಿಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+