ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ: ಮಾದಪ್ಪನ ಭಕ್ತರ ಆಕ್ರೋಶಕ್ಕೆ ಒಳಗಾದ Rapper Star ಚಂದನ್ ಶೆಟ್ಟಿ!

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಆಗಸ್ಟ್ 25: ಈ ಹಿಂದೆ ಮೈಸೂರು ದಸರಾ ಯುವ ವೇದಿಕೆಯಲ್ಲಿ ತನ್ನ ಪ್ರೇಯಸಿ ನಿವೇದಿತಾ ಗೌಡ ಅವರಿಗೆ ರಿಂಗ್ ತೊಡಿಸಿ ಪ್ರೇಮ ನಿವೇದನೆ ಮಾಡುವ ಮೂಲಕ ವಿವಾದ ಸೃಷ್ಟಿಸಿಕೊಂಡಿದ್ದ ಕನ್ನಡದ Rapper Star ಚಂದನ್ ಶೆಟ್ಟಿ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.

Recommended Video

ಕೋವಿಡ್, ನೆರೆ ಹೊರೆ ವಿದ್ಯಾರ್ಥಿಗಳ ಲ್ಯಾಪ್‌ಟ್ಯಾಪ್ ಗೆ ಸರ್ಕಾರ ಬರೆ | Oneindia Kannada

"ಕೋಲುಮಂಡೆ ಜಂಗಮದೇವಾ..." ಹಾಡನ್ನು ತನ್ನದೇ ಶೈಲಿಯಲ್ಲಿ ಹಾಡಿರುವ ಚಂದನ್ ಶೆಟ್ಟಿಯ ಹೊಸ ಹಾಡಿಗೆ ಚಾಮರಾಜನಗರ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಕೋಲುಮಂಡೆ... ಹಾಡನ್ನು ಅಶ್ಲೀಲವಾಗಿ ಚಿತ್ರೀಕರಿಸಿ, ಮಾದಪ್ಪನ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ. ಮಲೈಮಹದೇಶ್ವರ ಸ್ವಾಮಿಯ ಇತಿಹಾಸವನ್ನೇ ತಿರುಚಿ ಹಾಡು ರಚಿಸಿರುವ ಆರೋಪ ಕೇಳಿ ಬಂದಿದ್ದು, ಹಳೆ ಮೈಸೂರು ಮತ್ತು ಚಾಮರಾಜನಗರ ಭಾಗದ ಜನರು ಚಂದನ್ ಶೆಟ್ಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 Chamarajanagara: Male Madaseshwar Devotees Opposed To Chandan Shettys Kolumande Jangamadeva Song

ಇತಿಹಾಸವನ್ನು ತಿರುಚಿ ಹಾಡು ಚಿತ್ರಿಕರಿಸಲಾಗಿದ್ದು, ಶರಣೆ ಸಂಕಮ್ಮನವರನ್ನು ಅಶ್ಲೀಲವಾಗಿ ಪ್ರದರ್ಶಿಸಲಾಗಿದೆ. ಆ ಮೂಲಕ ಶರಣೆ ಸಂಕಮ್ಮನವರನ್ನು ಅವಮಾನಿಸಲಾಗಿದೆ. ಹಳೆಯ ಜಾನಪದ ಹಾಡೊಂದನ್ನು ತನ್ನ ಲಾಭಕ್ಕಾಗಿ ಬಳಸಿಕೊಂಡು ವಿಕೃತಿ ಮೆರೆದಿದ್ದಾರೆ ಎಂದು ಸಾಮಾಜಿಕ ಜಾಲತಣಗಳಲ್ಲಿ ಚಂದನ್ ಶೆಟ್ಟಿ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಈ ಕೂಡಲೇ ಚಂದನ್ ಶೆಟ್ಟಿ ಹಾಡಿರುವ "ಕೋಲುಮಂಡೆ' ಹಾಡನ್ನು ಯೂಟ್ಯೂಬ್ ನಿಂದ ತೆಗೆಯಬೇಕು. ಇಲ್ಲವಾದಲ್ಲಿ ಚಂದನ್ ಮನೆ ಮುಂದೆ ಧರಣಿ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಅವರ ಕಾರ್ಯಕ್ರಮ ಬಹಿಷ್ಕರಿಸಬೇಕಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Chamarajanagar: Male Madaseshwar Devotees Opposed to Chandan Shetty's New song Kolumande Jangamadeva song, it disturbs religious beliefs. Know more..
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X