ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಸೀಲ್ ಡೌನ್

ಚಾಮರಾಜನಗರ, ಜುಲೈ.20: ಕೊರೊನಾವೈರಸ್ ಸೋಂಕು ಹರಡುವಿಕೆಯಿಂದ ಅಂತರ ಕಾಯ್ದುಕೊಂಡಿದ್ದ ಜಿಲ್ಲೆಯಲ್ಲೂ ಇದೀಗ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಇತ್ತೀಚಿಗೆ ಚಾಮರಾಜನಗರ ಜಿಲ್ಲೆಯಲ್ಲೂ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

Recommended Video

      Drone Prathap Warned by German Company BillzEye | Oneindia Kannada

      ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ಸಿಬ್ಬಂದಿಗೂ ಕೊರೊನಾವೈರಸ್ ಸೋಂಕು ತಗಲಿರುವುದು ಆತಂಕ ಸೃಷ್ಟಿಸಿದೆ. ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

      ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ಸೋಂಕಿತ ಸಿಬ್ಬಂದಿಯ ಜೊತೆಗೆ 15ಕ್ಕೂ ಹೆಚ್ಚು ಮಂದಿ ಪ್ರಾಥಮಿಕ ಸಂಪರ್ಕವನ್ನು ಹೊಂದಿದ್ದರು ಎಂದು ತಿಳಿದು ಬಂದಿದೆ. ಹೀಗೆ ಪ್ರಾಥಮಿಕ ಹಂತದ ಸಂಪರ್ಕವನ್ನು ಹೊಂದಿರುವ ಜನರನ್ನು ಹೋಮ್ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ.

      Chamarajanagar: Male Mahadeshwar Betta Police Station Sealed Down

      ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾವೈರಸ್:

      ಕೊರೊನಾವೈರಸ್ ಸೋಂಕು ಹರಡುವಿಕೆಗೆ ಜಿಲ್ಲೆಯಲ್ಲಿ ಮೊದಲಿನಿಂದಲೂ ಕಡಿವಾಣ ಹಾಕಿಕೊಂಡು ಬರಲಾಗುತ್ತಿದೆ. ಆದರೆ ಭಾನುವಾರದ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲೇ ಜಿಲ್ಲೆಯಲ್ಲಿ 25 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 281ಕ್ಕೆ ಏರಿಕೆಯಾಗಿದೆ. ಇನ್ನು, ಜಿಲ್ಲೆಯಲ್ಲಿ ಇದುವರೆಗೂ ಮಹಾಮಾರಿಗೆ ಮೂವರು ಪ್ರಾಣ ಬಿಟ್ಟಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+