ಕೇವಲ ನಾಲ್ಕೇ ದಿನಗಳಲ್ಲಿ ಮಲೆ ಮಾದಪ್ಪನಿಗೆ ಹರಿದುಬಂತು ಕೋಟಿ.. ಕೋಟಿ ಕಾಂಚಾಣ- ಹೇಗೆ?

ಚಾಮರಾಜನಗರ, ಡಿಸೆಂಬರ್‌, 14: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಡೆ ಕಾರ್ತಿಕ ಮಾಸ ಹಾಗೂ ಅಮಾವಾಸ್ಯೆಯ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಕೇವಲ ನಾಲ್ಕು ದಿನಗಳ ಅವಧಿಯಲ್ಲಿ 1.38 ಕೋಟಿ ಆದಾಯ ಹರಿದುಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎರಡನೇ ಶನಿವಾರ, ಭಾನುವಾರ, ಕೊನೆಯ ಕಾರ್ತಿಕ ಸೋಮವಾರ ಹಾಗೂ ಅಮಾವಾಸ್ಯೆ ದಿನಗಳಲ್ಲಿ ಹೆಚ್ಚಿನ ಭಕ್ತಾದಿಗಳು ಆಗಮಿಸಿ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹುಲಿ ವಾಹನ, ರುದ್ರಾಕ್ಷಿ ವಾಹನ ಬಸವ ಮಂಟಪ, ಲಾಡು ಮಾರಾಟ, ವಿವಿಧ ಸೇವೆಗಳು ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು, ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟ ಭವನಗಳಿಂದ, ಪಾರ್ಕಿಂಗ್, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ 1,38,50,311 ರೂಪಾಯಿ ಆದಾಯ ಹರಿದುಬಂದಿದೆ.

Male Mahadeshwara Temple: 1.38 crores revenue collected in just four days, how?

ನಾಲ್ಕು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ 1,162 ಚಿನ್ನದ ರಥೋತ್ಸವ, 42 ಬೆಳ್ಳಿ ರಥೋತ್ಸವ, 555 ಬಸವ ವಾಹನ, 3,771 ಹುಲಿ ವಾಹನ, 234 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಕೆ ಮೂಲಕ 49,63,203 ರೂಪಾಯಿ ಆದಾಯ ಬಂದಿದೆ. ಇನ್ನು ನವೆಂಬರ್ 20ರಿಂದ ಡಿಸೆಂಬರ್ 11ರವರೆಗೆ ನಡೆದ ಕಾರ್ತಿಕ ಮಾಸದ ವಿಶೇಷ ಪೂಜೆಗಳು ಯಾವುದೇ ತೊಂದರೆಯಾಗದಂತೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಕಡೆಯ ಕಾರ್ತಿಕ ಸೋಮವಾರ ಹಾಗೂ ಅಮಾವಾಸ್ಯೆ ಪೂಜೆ ಹಿನ್ನೆಲೆ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದ ಹಿನ್ನೆಲೆ, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಲೆಮಾದೇಶ್ವರ ಬೆಟ್ಟದಲ್ಲಿ ಮೊಕ್ಕಂ ಹೂಡಿ ಭಕ್ತರಿಗೆ ಬೇಕಾದ ಕುಡಿಯುವ ನೀರು, ವಿಶೇಷ ದಾಸೋಹ, ನೆರಳಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿದ್ದರು.

ಈ‌‌ ಸಂಬಂಧ ಪ್ರತಿಕ್ರಿಯಿಸಿದ ಅವರು, ಕಾರ್ತಿಕ ಮಾಸ ಪೂಜಾ ಮಹೋತ್ಸವ ಮುಗಿದಿದ್ದು, ಡಿಸೆಂಬರ್ 17ರಿಂದ ಧನುರ್ಮಾಸ ಪೂಜಾ ಪ್ರಾರಂಭ ಆಗುರುವುದರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಓಂ ಶಕ್ತಿ, ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಕಡೆಯ ಕಾರ್ತಿಕ ಸೋಮವಾರ ಹಾಗೂ ಅಮಾವಾಸ್ಯೆ ಪೂಜೆಗೆ ಲಕ್ಷಾಂತರ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರು. ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಮುಂಜಾಗ್ರತ ಕ್ರಮವಾಗಿ ಕಲ್ಪಿಸಿದ್ದ ಹಿನ್ನೆಲೆ ಕಾರ್ತಿಕ ಮಾಸ ಹಾಗೂ ಅಮಾವಾಸ್ಯೆ ಪೂಜೆ ಯಶಸ್ವಿಯಾಗಿ ಜರುಗಿದೆ ಎಂದು "ಒನ್‌ ಇಂಡಿಯಾ ಕನ್ನಡ"ಕ್ಕೆ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+