Male Mahadeshwara Temple: ಮಾರ್ಚ್ 7ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೆ, ಕಾರ್ಯಕ್ರಮಗಳ ವಿವರ ಹೀಗಿದೆ
ಚಾಮರಾಜನಗರ, ಫೆಬ್ರವರಿ, 29: ಹನೂರು ತಾಲೂಕಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ 7ರಿಂದ 11ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಹಾಗೂ ಏಪ್ರಿಲ್ 6ರಿಂದ 9ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ.
ಈ ಕುರಿತು ಮಲೆ ಮಹದೇಶ್ವರ ಬೆಟ್ಟದ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಮಾರ್ಚ್ 7ರಂದು ಮಹಾಶಿವರಾತ್ರಿ ಜಾತ್ರೆ ಪ್ರಾರಂಭವಾಗಲಿದೆ. 8ರಂದು ಸ್ವಾಮಿಗೆ ಎಣ್ಣೆಮಜ್ಜನ, ಜಾಗರಣೆ ಉತ್ಸವ, 9ರಂದು ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು ಜರುಗಲಿದೆ. 10ರಂದು ಅಮವಾಸ್ಯೆ, ವಿಶೇಷ ಸೇವೆ ಉತ್ಸವಾದಿಗಳು ನೆರವೇರಲಿವೆ. ಮಾರ್ಚ್ 11ರಂದು ಬೆಳಗ್ಗೆ 9:40ರಿಂದ 10:10 ಗಂಟೆಯವರೆಗೆ ಮಹಾಶಿವರಾತ್ರಿ ಮಹಾರಥೋತ್ಸವ ಪ್ರಾರಂಭವಾಗಲಿದೆ. ರಾತ್ರಿ ಅಭಿಷೇಕ ಪೂಜೆ ಮುಗಿದ ನಂತರ ಕೊಂಡೋತ್ಸವ ಜರುಗಲಿದೆ.

ಏಪ್ರಿಲ್ 4ರಂದು ಯುಗಾದಿ ಜಾತ್ರೆ ಆರಂಭವಾಗಲಿದೆ. 7ರಂದು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ, ವಿಶೇಷ ಸೇವೆ ಉತ್ಸವಾದಿಗಳು ನಡೆಯಲಿದೆ. 8ರಂದು ಯುಗಾದಿ ಅಮವಾಸ್ಯೆ, ವಿಶೇಷ ಸೇವೆ ಉತ್ಸವಾದಿಗಳು ಜರುಗಲಿದೆ. ಏಪ್ರಿಲ್ 9ರಂದು ಬೆಳಗ್ಗೆ 7:30ರಿಂದ 9 ಗಂಟೆಯವರೆಗೆ ಚಾಂದ್ರಮಾನ ಯುಗಾದಿ, ಮಹಾರಥೋತ್ಸವ ಪ್ರಾರಂಭವಾಗಲಿದೆ ಎಂದು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.












Click it and Unblock the Notifications