Male Mahadeshwara Temple: ಕೇವಲ 25 ದಿನಗಳಲ್ಲಿ ಹುಂಡಿಯಲ್ಲಿ ದಾಖಲೆ ಮಟ್ಟದ ಹಣ ಸಂಗ್ರಹ, ಎಷ್ಟು?-ಮಾಹಿತಿ, ವಿವರ
ಚಾಮರಾಜನಗರ, ಮಾರ್ಚ್, 27: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ (ಮಾರ್ಚ್ 27) ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ ಕೇವಲ 25 ದಿನಗಳ ಅವಧಿಯಲ್ಲಿ ದಾಖಲೆ ಮಟ್ಟದಲ್ಲಿ ಹಣ ಸಂಗ್ರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಷ್ಟು ಎನ್ನುವ ಅಂಕಿಅಂಶಗ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಲೆ ಮಹದೇಶ್ವರನಿಗೆ ಕೇವಲ 25 ದಿನಗಳ ಅವದಿಯಲ್ಲಿ ದಾಖಲೆಯ 3.13 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮಲೆ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ (ಮಾರ್ಚ್ 27) ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 10:30ರ ವರೆಗೂ ನಡೆಯಿತು.

ಈ ಬಾರಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 3,13,00,931 ರೂಪಾಯಿ ಸಂಗ್ರಹವಾಗಿದೆ. ಹಾಗೂ ಚಿನ್ನ 47 ಗ್ರಾಂ ಮತ್ತು ಬೆಳ್ಳಿ 2 ಕೆಜಿ 309 ಗ್ರಾಂ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲದೆ, ಯುಎಸ್‌ಎ, ಬಾಂಗ್ಲಾದೇಶ, ನೇಪಾಳ, ಮಲೇಶಿಯಾ ಸೇರಿದಂತೆ 7 ವಿದೇಶಿ ನೋಟುಗಳು, ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 26 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
2.28 ಕೋಟಿ ರೂಪಾಯಿ ಸಂಗ್ರಹ: ಹಾಗೆಯೇ ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ 2.28 ಕೋಟಿ ರೂಪಾಯಿ ಸಂಗ್ರಹ ಆಗಿತ್ತು. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ 12 ತಾಸಿನಷ್ಟು ನಡೆದಿದ್ದು, 39 ದಿನಗಳಲ್ಲಿ ಬರೋಬ್ಬರಿ 2,28,63,914 ರೂಪಾಯಿ ಹಣ ಸಂಗ್ರಹ ಆಗಿತ್ತು.
ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಹಾಗೂ ಸರ್ಕಾರಿ ರಜೆ ದಿನಗಳು, ಸಾಮೂಹಿಕ ವಿವಾಹ, ಕಾರ್ಯಕ್ರಮಕ್ಕೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು. ಈ ಮೂಲಕ 2.28 ಕೋಟಿ ರೂಪಾಯಿ ನಗದು, 92.5 ಗ್ರಾಂ ಚಿನ್ನ ಹಾಗೂ 2.7 ಕೆ.ಜಿ. ಬೆಳ್ಳಿ ಸಂಗ್ರಹವಾಗಿತ್ತು.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಹಾಗೂ ಸರ್ಕಾರಿ ರಜೆ ದಿನಗಳು, ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,10,78,014 ರೂಪಾಯಿ ಸಂಗ್ರಹವಾಗಿದೆ. ಚಿನ್ನ ಮತ್ತು ಬೆಳ್ಳಿ ಮೌಲ್ಯಮಾಪಕರಿಗೆ ಅನಾರೋಗ್ಯದ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿಯನ್ನು ಶೇಖರಿಸಿ ಇಡಲಾಗಿದೆ. ಇನ್ನು ಪ್ರಾಧಿಕಾರದ ವತಿಯಿಂದ ಭಕ್ತಾದಿಗಳಿಗೆ ಎಷ್ಟೇ ಅರಿವು ಮೂಡಿಸಿದರೂ ಸಹ ಚಲಾವಣೆಯಲ್ಲಿಲ್ಲದ 2 ಸಾವಿರ ಮುಖಬೆಲೆಯ 32 ನೋಟ್‌ಗಳನ್ನು ಹುಂಡಿಗೆ ಹಾಕಿದ್ದಾರೆ.












Click it and Unblock the Notifications