ಸೆ.16ರಿಂದ ಮೂರು ದಿನ ಭಕ್ತರಿಗೆ ಮಾದಪ್ಪನ ದರ್ಶನ ಭಾಗ್ಯವಿಲ್ಲ
ಚಾಮರಾಜನಗರ, ಸೆಪ್ಟೆಂಬರ್ 13: ಕೊರೊನಾ ವೈರಸ್ ಆರ್ಭಟ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಮಲೆಮಹದೇಶ್ವರ ಬೆಟ್ಟದ ವಾರ್ಷಿಕ ಜಾತ್ರೆಯನ್ನು ರದ್ದು ಮಾಡಿ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 17 ರಂದು ಅಮವಾಸ್ಯೆ ಇರುವುದರಿಂದ ಅಂದು ಮಲೆ ಮಹಾದೇಶ್ವರ ಬೆಟ್ಟಕ್ಕೆ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುತ್ತಾರೆ. ದೇವರಿಗೆ ಎಣ್ಣೆ ಮಜ್ಜನ, ಅಮವಾಸ್ಯೆ ವಿಶೇಷ ಪೂಜೆಯಲ್ಲಿ ತೊಡಗುತ್ತಾರೆ ಎನ್ನುವ ಕಾರಣದಿಂದಾಗಿ, ಕೊರೊನಾ ಮುನ್ನೆಚ್ಚರಿಕೆಯ ಕ್ರಮವಾಗಿ ಮಹದೇಶ್ವರಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ಬ್ರೇಕ್ ಹಾಕಲಾಗಿದೆ.
ಈ ಕುರಿತಂತೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರು ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ 16 ರಿಂದ 18 ರವರೆಗೆ ದೇವರಿಗೆ ಎಣ್ಣೆಮಜ್ಜನ, ಅಮವಾಸ್ಯೆ ವಿಶೇಷ ಪೂಜೆ ನಡೆಸುವುದಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ ಸೆ.16 ರಿಂದ ಸೆ.18 ರವರೆಗೆ ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಇದೇ ಕಾರಣದಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮಲೆ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂಬುದಾಗಿ ಸೂಚಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರು ಸೆಪ್ಟೆಂಬರ್ 16 ರಿಂದ 18ರವರೆಗೆ ಯಾರೂ ಬರಬಾರದು. ಏಕೆಂದರೆ ಅಂದು ಭಕ್ತರಿಗೆ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ.












Click it and Unblock the Notifications