Get Updates
Get notified of breaking news, exclusive insights, and must-see stories!

Male Mahadeshwara temple ಕೇವಲ 5 ದಿನದಲ್ಲಿ ₹2.24 ಕೋಟಿ ಒಡೆಯನಾದ ಮಲೆ ಮಾದಪ್ಪ-ಹೇಗೆ ಸಾಧ್ಯ?

Male Mahadeshwara Hills: ಹನೂರು ತಾಲ್ಲೂಕಿನಲ್ಲಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಇನ್ನು ಈ ಬೆಟ್ಟಕ್ಕೆ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಕೇವಲ 5 ದಿನಗಳ ಅವಧಿಯಲ್ಲಿ 2.24 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ ಎನ್ನವ ಮಾಹಿತಿ ಲಭ್ಯವಾಗಿದೆ.

ದೀಪಾವಳಿ ಜಾತ್ರಾ ಮಹೋತ್ಸವ ದಿನಗಳಲ್ಲಿ ಹೆಚ್ಚಿನ ಭಕ್ತಾದಿಗಳು ಆಗಮಿಸಿ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹುಲಿ ವಾಹನ, ರುದ್ರಾಕ್ಷಿ ವಾಹನ ಬಸವ ಮಂಟಪ, ಲಾಡು ಮಾರಾಟ, ವಿವಿಧ ಸೇವೆಗಳು ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು, ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟ ಭವನಗಳಿಂದ, ಪಾರ್ಕಿಂಗ್, ಕಲ್ಲು ಸಕ್ಕರೆ ,ತೀರ್ಥ, ಬ್ಯಾಗ್ ಮಾರಾಟದಿಂದ 2,24,91,122 ರೂಪಾಯಿ ಆದಾಯ ಬಂದಿದೆ.

Male Mahadeshwara temple rs2 24 Crore Collected in Just 5 Days at Hundi

5 ದಿನಗಳ ಅವಧಿಯಲ್ಲಿ 7 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದು, ವಿವಿಧ ಉತ್ಸವಗಳಾದ 1,825 ಚಿನ್ನದ ರಥೋತ್ಸವ, 111 ಬೆಳ್ಳಿ ರಥೋತ್ಸವ, 1,279 ಬಸವ ವಾಹನ, 9,558 ಹುಲಿ ವಾಹನ, 427 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಕೆ ಮೂಲಕ ಹೆಚ್ಚು ಆದಾಯ ಬಂದಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ಮಂಗಳವಾರ ಮಾಹಿತಿ ನೀಡಿದ್ದಾರೆ.

ನವೆಂಬರ್ 4ರಿಂದ ಕಾರ್ತಿಕ ಮಾಸ ಪ್ರಾರಂಭವಾಗಿದ್ದು, ಅಯ್ಯಪ್ಪ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ಇನ್ನು ಹೆಚ್ಚಿನ ಆದಾಯ ನಿರೀಕ್ಷಿಸಲಾಗಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ, ಯುಗಾದಿ ಹಾಗೂ ದೀಪಾವಳಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಮಾರ್ಚ್ ತಿಂಗಳಲ್ಲಿ ನಡೆದ ಮಹಾಶಿವರಾತ್ರಿ ಜಾತ್ರೆ ಸಂದರ್ಭದಲ್ಲಿ ಆರು ದಿನಗಳ ಅವಧಿಯಲ್ಲಿ 3.24 ಕೋಟಿ ರೂಪಾಯಿ ಆದಾಯ ಹರಿದುಬಂದಿತ್ತು.

2.80 ಕೋಟಿ ರೂಪಾಯಿ ಸಂಗ್ರಹ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಅಕ್ಟೋಬರ್ 24ರಂದು ಹುಂಡಿ ಎಣಿಕೆ ಕಾರ್ಯ ನಡೆದಿದೆ. ಹಾಗಾದರೆ ಎಷ್ಟು ದಿನಗಳ ಅವಧಿಯಲ್ಲಿ ಎಷ್ಟು ಹಣ ಸಂಗ್ರವಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಂಕಿತ ಇಲ್ಲಿ ನೀಡಲಾಗಿದೆ ಗಮನಿಸಿ.

ಚಾಮರಾಜನಗೆ ಜಿಲ್ಲೆ, ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಹಾಗಾದರೆ ಮೂಲಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮಲೆ ಮಹದೇಶ್ವರ ಬೆಟ್ಟ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಿ ಸಂಜೆ 7 ಗಂಟೆಗೆ ಮುಕ್ತಾಯಗೊಂಡಿತು.

ಮಹಾನವಮಿ, ಆಯುಧ ಪೂಜೆ ವಿಜಯದಶಮಿ, ದಸರಾ ರಜಾ ದಿನಗಳು, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹರಕೆಯ ರೂಪದಲ್ಲಿ 2,00,80,844 ನಗದು 30 ಗ್ರಾಂ ಚಿನ್ನ ಹಾಗೂ 1,865 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಅಷ್ಟೇ ಅಲ್ಲದೆ ಈ ಹುಂಡಿಗೆ 2,74,204 ಒಮಾನ್‌ನ 10 ನೋಟು, ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 22 ನೋಟುಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ. ಇನ್ನು ಹುಂಡಿ ಎಣಿಕೆ ವೇಳೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಇದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+