ಸಾಮೂಹಿಕ ವಿವಾಹ: ಮಲೆ ಮಾದಪ್ಪನ ಬೆಟ್ಟದಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟ 63 ಜೋಡಿಗಳು

ಚಾಮರಾಜನಗರ, ಆಗಸ್ಟ್‌, 21: ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 63 ನವಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟರು. ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದಿಂದ ವಿಜೃಂಭಣೆಯಿಂದ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ಈ ಜೋಡಿಗಳು ಸತಿ-ಪತಿಗಳಾದರು.

ಸುತ್ತೂರು ಶ್ರೀ ಮತ್ತು ಸಾಲೂರು ಮಠದ ಸ್ವಾಮೀಜಿ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೂತನ ದಂಪತಿಗಳಿಗೆ ಮಾಂಗಲ್ಯ ವಿತರಿಸಿ ಶುಭ ಹಾರೈಸಿದರು. ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದಿಂದ ಪ್ರತಿ ವರ್ಷ ಸಾಮೂಹಿಕ ವಿವಾಹ ನಡೆಯಲಿದ್ದು, ಮಾದಪ್ಪನ ಸನ್ನಿಧಿಯಲ್ಲಿ ಸತಿಪತಿಗಳಾಗುವುದು ಪುಣ್ಯವೆಂದೇ ಭಕ್ತರ ನಂಬಿಕೆಯಾಗಿದೆ.

Mass marriage in Male Mahadeshwara Hill today

ಸಾಮೂಹಿಕ ವಿವಾಹದಲ್ಲಿ ಭಾಗಿಯಾದ ನವಜೋಡಿಗಳಿಗೆ 4 ಮಾಂಗಲ್ಯ, ರೇಷ್ಮೆ ಸೀರೆ, ಪಂಚೆ-ಶಲ್ಯ, ಬೆಳ್ಳಿ ಕಾಲುಂಗರವನ್ನು ಪ್ರಾಧಿಕಾರ ನೀಡಲಿದೆ. ಈ ಇದೀಗ ನಡೆದ ಸಮೂಹಿಮ ವಿವಾಹ ಕಾರ್ಯಕ್ರಮದಲ್ಲಿ ಹನೂರು ಶಾಸಕ ಎಂ.ಆರ್.ಮಂಜುನಾಥ್, ಕಾಡಾ ಅಧ್ಯಕ್ಷ ಮರಿಸ್ವಾಮಿ ಇದ್ದರು.

ಸಿಎಂ ಸಿದ್ದರಾಮಯ್ಯ ಗೈರು: ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಅಧ್ಯಕ್ಷರಾಗಿರಲಿದ್ದು, ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಆದರೆ, ಈ ಬಾರಿ ಸಿದ್ದರಾಮಯ್ಯ ಬರುತ್ತಾರೆ ಎನ್ನಲಾಗುತ್ತಿದ್ದರೂ ಕೊನೆ ದಿನಗಳಲ್ಲಿ ರದ್ದಾಯಿತು. ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕೂಡ ಗಜ ಪಯಣ ಕಾರ್ಯಕ್ರಮದಲ್ಲಿ ಭಾಗಿಯಾದ್ದರಿಂದ ಸಾಮೂಹಿಕ ವಿವಾಹಕ್ಕೆ ಗೈರಾದರು ಎನ್ನಲಾಗಿದೆ.

ರಾಮಲಿಂಗಾರೆಡ್ಡಿ ಹೇಳಿದ್ದೇನು?: ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ, ಪ್ರಾಧಿಕಾರ ರಚನೆಗೆ ಬಹಳ ಹಿಂದಿನಿಂದಲೂ ಪ್ರಸ್ತಾವನೆ ಕೂಡ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಪ್ರಾಧಿಕಾರ ರಚನೆಗೆ ತುಂಬಾ ಹಿಂದಿನಿಂದಲೂ ಪ್ರಸ್ತಾವನೆ ಇದೆ. ಜನರಿಂದಲೂ ಒತ್ತಾಯ ಇದ್ದಿದ್ದರಿಂದ ಪ್ರಾಧಿಕಾರ ರಚನೆ ಮಾಡಿದ್ದೇವೆ. ಆದರೆ, ರಾಜಮನೆತನದವರು ಕೋರ್ಟ್‌ಗೆ ಹೋಗಿದ್ದು, ಈಗ ಯಥಾಸ್ಥಿತಿಯಲ್ಲಿ ಇರುವುದರಿಂದ ಹೆಚ್ಚು ಮಾತನಾಡಲ್ಲ ಎಂದರು.

ಕಾಂಗ್ರೆಸ್ ಪ್ರತಿಭಟನೆ ವೇಳೆ ಸಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರ ಭಾವಚಿತ್ರಕ್ಕೆ ಚಪ್ಪಲಿಯಿಂದ ಒಡೆದು, ದಹನ ಮಾಡಿ ಅವಮಾನ ಮಾಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಕಿಡಿಕಾರಿದ ಅವರು,
ಬಿಜೆಪಿಯವರೇ ಮಾಡಿ ನಮ್ಮ ಮೇಲೆ ಎತ್ತಿ ಹಾಕಿರಬಹುದು.
ಆರೋಪ ಮಾಡಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ನಮ್ಮವರು ಯಾರೂ ಸಹ ಅವ್ಯಾಚ ಶಬ್ದ ಬಳಸಿಲ್ಲ ಎಂದರು.

ರಾಜ್ಯಪಾಲರಿಗೆ ಅವಮಾನ ಮಾಡುವ ಕೆಲಸ ನಮ್ಮ ಮಂತ್ರಿಗಳಾಗಲಿ, ಕಾರ್ಯಕರ್ತರಾಗಲಿ ಮಾಡಿಲ್ಲ. ಬಿಜೆಪಿಯವರೇ ಮಾಡಿ ನಮ್ಮ ಮೇಲೆ ಹಾಕ್ತಿದ್ದಾರೆ. ರಾಜ್ಯಪಾಲರು ತಮ್ಮ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ, ಬಿಜೆಪಿಯವರ ಕೈಗೊಂಬೆಯಾಗಿದ್ದಾರೆ ಎಂದು ನಮ್ಮವರು ಹೇಳಿದ್ದಾರೆ ಅಷ್ಟೇ.
ರಾಜ್ಯಪಾಲರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದಿದ್ದರೆ ಅದು ತಪ್ಪು, ಈ ಕೆಲಸ ಯಾರೇ ಮಾಡಿದ್ದರೂ ತಪ್ಪು. ಭೂತ ದಹ‌ನ ಸಹಜ ಪ್ರಧಾನಮಂತ್ರಿ, ಮುಖ್ಯ ಮಂತ್ರಿ ರಾಜ್ಯಪಾಲರು ಹೀಗೆ ಎಲ್ಲರ ಭೂತದಹನ ಮಾಡುವುದು ಸಾಮಾನ್ಯ ಎಂದು ಹೇಳಿದರು. ರಾಜ್ಯಪಾಲರು ಮಾಡಿದ ತಪ್ಪನ್ನು ಎತ್ತಿತೋರಿಸುವುದರಲ್ಲಿ ತಪ್ಪೇನು ಇಲ್ಲ ಎಂದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+