ಮಲೆ ಮಾದಪ್ಪನ ಸನ್ನಿಧಿಯಲ್ಲಿ 37 ಜೋಡಿಗಳ ಸಾಮೂಹಿಕ ವಿವಾಹ, ಶುಭಹಾರೈಸಿ ಉತ್ತಮ ಸಂದೇಶ ಸಾರಿದ ಸಿಎಂ

ಚಾಮರಾಜನಗರ, ಸೆಪ್ಟೆಂಬರ್‌, 27: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, 37 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

39 ಮಂದಿ ನವ ಜೋಡಿಗಳು ಸಾಮೂಹಿಕ ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ, 37 ಮಂದಿ ಇಂದು ನವಜೀವನಕ್ಕೆ ಕಾಲಿಟ್ಟರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳಸೂತ್ರವನ್ನು ವಿತರಿಸಿ ನವಜೋಡಿಗಳಿಗೆ ಶುಭ ಹಾರೈಸಿದರು‌. ಅಲ್ಲದೆ ವರನೊಬ್ಬನ ಪೇಟ ಸರಿ ಇಲ್ಲದ್ದನ್ನು ಗಮನಿಸಿ ಅದನ್ನು ತಾವೇ ಸರಿಪಡಿಸಿ ಗಮನ ಸೆಳೆದರು.

Mass marriage program in Male Mahadeshwara Hill, CM Siddaramaiah wished to 37 couples

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ

ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು. ಇನ್ನು ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಆದ್ದರಿಂದ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದರು.

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ಮಹತ್ವದ ಘೋಷಣೆ ಮಾಡಿದರು. ಹಾಗೆಯೇ ಇದೇ ವೇಳೆ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಇನ್ಮುಂದೆ ತಪೋಭವನ

ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಹದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು, ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+