ಪೋಷಕರಿಗೆ ಆತಂಕ ತಂದ ಚಾಮರಾಜನಗರ ವೈದ್ಯಕೀಯ ಕಾಲೇಜು
ಚಾಮರಾಜನಗರ, ನವೆಂಬರ್ 19 : ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ 2020-21ನೇ ಸಾಲಿನ ವೈದ್ಯಕೀಯ ಕೋರ್ಸ್ ಆರಂಭಿಸಲು ಎನ್ಎಂಸಿ ಅನುಮತಿ ನೀಡಿಲ್ಲ. ಕಾಲೇಜಿನಲ್ಲಿ 150 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದ್ದು, ಈಗ ಪೋಷಕರು ಆತಂಕಗೊಂಡಿದ್ದಾರೆ.
ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಎಂಬಿಬಿಎಸ್ ಕೋರ್ಸ್ ಪ್ರವೇಶಕ್ಕಾಗಿ 52 ಕಾಲೇಜುಗಳನ್ನು ಪಟ್ಟಿ ಮಾಡಿದೆ. ಆದರೆ, ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹೆಸರು ಈ ಪಟ್ಟಿಯಲ್ಲಿಲ್ಲ.
ಹಾವೇರಿ: 450 ಕೋಟಿ ರೂ. ವೆಚ್ಚದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಿಎಂ ಚಾಲನೆ
ಎನ್ಎಂಸಿ ವಿರುದ್ಧ ಕಾಲೇಜಿನ ಆಡಳಿತ ಮಂಡಳಿ ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದೆ. ಈ ವಾರದಲ್ಲಿ ಗೊಂದಲ ಬಗೆಹರಿಯುವ ನಿರೀಕ್ಷೆ ಇದೆ. ತಾಂತ್ರಿಕ ಕಾರಣದಿಂದಾಗಿ ಈ ರೀತಿ ಆಗಿರಬಹುದು ಎಂದು ಕಾಲೇಜಿನ ಆಡಳಿತ ಮಂಡಳಿ ಹೇಳಿದೆ.
ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಜೊತೆಗೆ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆ
ರಾಷ್ಟ್ರೀಯ ವೈದ್ಯಕೀಯ ಆಯೋಗ ರೂಪಿಸಿರುವ 19 ಮಾನದಂಡಗಳನ್ನು ಪೂರೈಸಿದರೆ ಮಾತ್ರ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್ ಆರಂಭಿಸಲು ಅನುಮತಿ ನೀಡಲಾಗುತ್ತದೆ. ಕಾಲೇಜು ಆಡಳಿತ ಮಂಡಳಿ ಈ ಕುರಿತು ಎನ್ಎಂಸಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿದೆ.
ಮೈಸೂರು ಮೆಡಿಕಲ್ ಕಾಲೇಜು ನ್ಯೂನತೆಗೆ ಶೀಘ್ರದಲ್ಲೇ ಪರಿಹಾರ: ವೈದ್ಯಕೀಯ ಶಿಕ್ಷಣ ಸಚಿವ
ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೋರ್ಸ್ ಆರಂಭಿಸಲು ಅಗತ್ಯ ಸೌಕರ್ಯಗಳಿವೆ. 150 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದೆ. ಈಗ ಕೋರ್ಸ್ ಆರಂಭಿಸಲು ಅವಕಾಶ ಸಿಗದ ಕಾರಣ ಪೋಷಕರಿಗೆ ಆತಂಕ ಎದುರಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. "ತಾಂತ್ರಿಕ ಕಾರಣಗಳಿಂದಾಗಿ ಅನುಮತಿ ಸಿಕ್ಕಿಲ್ಲ. ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, 2ನೇ ಸುತ್ತಿನಲ್ಲಿ ಚಾಮರಾಜನಗರ ಕಾಲೇಜಿಗೂ ಅವಕಾಶ ಸಿಗಲಿದೆ" ಎಂದು ಹೇಳಿದ್ದಾರೆ.