ಮಲೆ ಮಹದೇಶ್ವರ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ: ಭಕ್ತರ ಅಸಮಾಧಾನ
ಚಾಮರಾಜನಗರ, ಜೂನ್ 20: ಶನಿವಾರ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಭೇಟಿ ನೀಡಿದ್ದಾರೆ. ಆದರೆ, ಇದಕ್ಕೆ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Recommended Video
ಕೊರೊನಾ ಲಾಕ್‌ಡೌನ್ ಸಡಿಲಿಕೆಯ ನಂತರ ದೇವಸ್ಥಾನದಲ್ಲಿ ಇನ್ನೂ ಭಕ್ತರ ದರ್ಶನಕ್ಕೆ ಅವಕಾಶ ನೀಡಿಲ್ಲ. ಜೂನ್ 21 ನಂತರ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಡಾ ಎಂ ಆರ್ ರವಿ ಆದೇಶ ನೀಡಿದ್ದಾರೆ. ಆದರೆ, ಈಶ್ವರಪ್ಪ ಅವರಿಗೆ ಪ್ರವೇಶ ಕಲ್ಪಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಚಾಮರಾಜನಗರ ಜಿಲ್ಲಾ ಪ್ರವಾಸದಲ್ಲಿದ್ದ ಈಶ್ವರಪ್ಪ ಅವರು ಶನಿವಾರ ಮಲೆ ಮಹದೇಶ್ವರ ಬೆಟ್ಕಕ್ಕೆ ಬಂದು ದೇವರ ದರ್ಶನ ಪಡೆದರು. ಆದರೆ, ಇದರಿಂದ ಭಕ್ತರು ಬೇಸರಗೊಂಡಿದ್ದಾರೆ. ಸಾಮಾನ್ಯ ಜನರಿಗೆ ಹಾಗೂ ಜನಪ್ರತಿನಿಧಿಗಳಿಗೆ ಬೇರೆ ಬೇರೆ ನ್ಯಾಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಕೊರೊನಾ ಸೋಂಕು ಸಡಿಲಿಕೆ ನಂತರ ಸುರಕ್ಷಿತ ಕ್ರಮಗಳೊಂದಿಗೆ ಎಲ್ಲಾ ದೇವಸ್ಥಾನಗಳನ್ನು ತೆರೆಯಲಾಗಿತ್ತು. ಮಲೆ ಮಹದೇಶ್ವರ ದೇವಸ್ಥಾನವನ್ನು ನಾಳೆಯಿಂದ (ಜೂನ್ 21) ಭಕ್ತರ ದರ್ಶನಕ್ಕೆ ತೆರೆಯುವುದಾಗಿ ತಿಳಿಸಲಾಗಿತ್ತು.












Click it and Unblock the Notifications