ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲೆ ಮಹದೇಶ್ವರ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ: ಭಕ್ತರ ಅಸಮಾಧಾನ

|
Google Oneindia Kannada News

ಚಾಮರಾಜನಗರ, ಜೂನ್ 20: ಶನಿವಾರ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಭೇಟಿ ನೀಡಿದ್ದಾರೆ. ಆದರೆ, ಇದಕ್ಕೆ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Recommended Video

ಕಳೆದ 2 ವಾರಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ 7 ₹ ಹೆಚ್ಚಳ | Petrol Price Hiked | Oneindia Kannada

ಕೊರೊನಾ ಲಾಕ್‌ಡೌನ್ ಸಡಿಲಿಕೆಯ ನಂತರ ದೇವಸ್ಥಾನದಲ್ಲಿ ಇನ್ನೂ ಭಕ್ತರ ದರ್ಶನಕ್ಕೆ ಅವಕಾಶ ನೀಡಿಲ್ಲ. ಜೂನ್‌ 21 ನಂತರ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಡಾ ಎಂ ಆರ್ ರವಿ ಆದೇಶ ನೀಡಿದ್ದಾರೆ. ಆದರೆ, ಈಶ್ವರಪ್ಪ ಅವರಿಗೆ ಪ್ರವೇಶ ಕಲ್ಪಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಮೂರು ದಿನಗಳ ಕಾಲ ಭಕ್ತರಿಗಿಲ್ಲ ಮಲೆ ಮಹದೇವನ ದರ್ಶನಮೂರು ದಿನಗಳ ಕಾಲ ಭಕ್ತರಿಗಿಲ್ಲ ಮಲೆ ಮಹದೇವನ ದರ್ಶನ

ಚಾಮರಾಜನಗರ ಜಿಲ್ಲಾ ಪ್ರವಾಸದಲ್ಲಿದ್ದ ಈಶ್ವರಪ್ಪ ಅವರು ಶನಿವಾರ ಮಲೆ ಮಹದೇಶ್ವರ ಬೆಟ್ಕಕ್ಕೆ ಬಂದು ದೇವರ ದರ್ಶನ ಪಡೆದರು. ಆದರೆ, ಇದರಿಂದ ಭಕ್ತರು ಬೇಸರಗೊಂಡಿದ್ದಾರೆ. ಸಾಮಾನ್ಯ ಜನರಿಗೆ ಹಾಗೂ ಜನಪ್ರತಿನಿಧಿಗಳಿಗೆ ಬೇರೆ ಬೇರೆ ನ್ಯಾಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

Minister KS Eshwarappa Visits Male Mahadeshwara Temple Today

ಕೊರೊನಾ ಸೋಂಕು ಸಡಿಲಿಕೆ ನಂತರ ಸುರಕ್ಷಿತ ಕ್ರಮಗಳೊಂದಿಗೆ ಎಲ್ಲಾ ದೇವಸ್ಥಾನಗಳನ್ನು ತೆರೆಯಲಾಗಿತ್ತು. ಮಲೆ ಮಹದೇಶ್ವರ ದೇವಸ್ಥಾನವನ್ನು ನಾಳೆಯಿಂದ (ಜೂನ್ 21) ಭಕ್ತರ ದರ್ಶನಕ್ಕೆ ತೆರೆಯುವುದಾಗಿ ತಿಳಿಸಲಾಗಿತ್ತು.

English summary
Rural development and Panchayat Raj minister KS Eshwarappa visits Male Mahadeshwara temple today (June 20).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X