ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಸಿಎಂ ಆಗೋಕೆ ಸಾಧ್ಯ ಇಲ್ಲ: ಸಚಿವ ಮಹೇಶ್‌ ಟಾಂಗ್

By Nayana
|
Google Oneindia Kannada News

Recommended Video

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲವಂತೆ ? | Oneindia Kannada

ಬೆಂಗಳೂರು, ಆಗಸ್ಟ್ 31: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಸಮ್ಮಿಶ್ರ ಸರ್ಕಾರದಲ್ಲಿ ಐದು ವರ್ಷವನ್ನು ಪೂರ್ಣಗೊಳಸಲಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ ಎಂದು ಶಿಕ್ಷಣ ಸಚಿವ ಎನ್.ಮಹೇಶ್ ತಿರುಗೇಟು ನೀಡಿದ್ದಾರೆ.

ಮತ್ತೆ ಮುಖ್ಯಮಂತ್ರಿಯಾಗ್ತೀನಿ : ಸಿದ್ದರಾಮಯ್ಯ ಮಾತಿನ ಒಳಾರ್ಥವೇನು? ಮತ್ತೆ ಮುಖ್ಯಮಂತ್ರಿಯಾಗ್ತೀನಿ : ಸಿದ್ದರಾಮಯ್ಯ ಮಾತಿನ ಒಳಾರ್ಥವೇನು?

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್‌ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ, ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರು ಅವರಿಗೆ ಬೆಂಬಲ ನೀಡಬೇಕು ಆದರೆ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ನೀಡುತ್ತಿರುವ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದೆ.

ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ

ಒಳ್ಳೆಯ ಕೆಲಸ ಮಾಡುತ್ತಿರುವ ಕುಮಾರಸ್ವಾಮಿ ಅವರಿಗೂ ಅಡ್ಡಿ ಉಂಟಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ, ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಲು ಎಚ್‌ಡಿ ಕುಮಾರಸ್ವಾಮಿಯವರನ್ನು ಕಾಂಗ್ರೆಸ್ ಕೂಡ ಒಪ್ಪಿಕೊಂಡಿದೆ.

Minister Mahesh says Siddaramaiah will not become CM again

ಪಕ್ಷದ ಎಲ್ಲಾ ಶಾಸಕರು ಕೂಡ ಒಪ್ಪಿಕೊಂಡಿದ್ದಾರೆ, ಹೀಗಾಗಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ, ಕೇವಲ ಮಾಧ್ಯಮಗಳಿಗೆ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸುವುದನ್ನು ನಿಲ್ಲಿಸಿದರೆ ಎರಡು ಪಕ್ಷಗಳಿಗೆ ಒಳ್ಳೆಯದು ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಸಮನ್ವಯ ಸಮಿತಿ ಅಸ್ತು ಅಂದ್ರೆ ಸಿದ್ದರಾಮಯ್ಯ ಸಿಎಂ:ಶಿವಶಂಕರ ರೆಡ್ಡಿ ಸಮನ್ವಯ ಸಮಿತಿ ಅಸ್ತು ಅಂದ್ರೆ ಸಿದ್ದರಾಮಯ್ಯ ಸಿಎಂ:ಶಿವಶಂಕರ ರೆಡ್ಡಿ

ಇದೇ ವೇಳೆ ರಾಜ್ಯ ಸರ್ಕಾರಕ್ಕೆ ನೂರು ದಿನಗಳು ತುಂಬಿರುವ ಹಿನ್ನೆಲೆಯಲ್ಲಿ ತಮ್ಮ ಸರ್ಕಾರಕ್ಕೆ ನೂರಕ್ಕೆ ನೂರರಷ್ಟು ತೃಪ್ತಿಯನ್ನು ವ್ಯಕ್ತಪಡಿಸಿದ ಮಹೇಶ್ ಯಾವುದೇ ಕಾರಣಕ್ಕೂ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ವಿಶ್ವಾಸದಿಂದ ನುಡಿದರು.

English summary
Education minister N.Mahesh has opined that Siddaramaiah will not become chief minister of the state again as Congress party has accepted H.D.Kumaraswamy for next five years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X