• search
  • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸರ್ಜಿಕಲ್ ಸ್ಟ್ರೈಕ್ ಹಿಂದಿರುವ ಬಿಜೆಪಿಯ ಷಡ್ಯಂತ್ರ ಶೀಘ್ರ ಬಯಲು: ಖರ್ಗೆ

|

ಚಾಮರಾಜನಗರ, ಮಾರ್ಚ್ 2: ಸರ್ಜಿಕಲ್ ಸ್ಟ್ರೈಕ್ ಹಿಂದಿರುವ ಬಿಜೆಪಿಯ ಷಡ್ಯಂತ್ರ ಇನ್ನು ಎರಡು ದಿನಗಳಲ್ಲಿ ಬಹಿರಂಗವಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಧರನ್ನು ಬಲಿ ನೀಡುವ ಮೂಲಕ 22 ಸೀಟುಗಳನ್ನು ಗೆಲ್ಲಲು ಬಿಜೆಪಿ ಮುಂದಾಗಿದೆ. ಯಡಿಯೂರಪ್ಪ ಅವರೇ ಈ ಕುರಿತು ಹೇಳಿಕೆ ನೀಡಿದ್ದಾರೆ.

ಯಡಿಯೂರಪ್ಪ ಅವರ ಹೇಳಿಕೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಪಕ್ಷ ಭೇಧ ಮರೆತು ಎಲ್ಲರು ಯೋಧರ ಕ್ರಮಕ್ಕೆ ಬೆಂಬಲ ವ್ಯಕ್ತಪಡಿಸುತ್ತಿರುವಾಗ, ಬಿಜೆಪಿ ಸಾವಿನಲ್ಲಿ ರಾಜಕೀಯಕ್ಕೆ ಮುಂದಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ.

ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಎಂದು ಹೇಳಿದರು.

English summary
Here is the statement of Minister Priyank kharge over Surgical strike .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X