ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಧ್ಯಮ ದೂರವಿಟ್ಟು ಕಾಡು ಸುತ್ತಿದ ಅರಣ್ಯ ಸಚಿವ ಉಮೇಶ್ ಕತ್ತಿ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜೂನ್ 20: ಅರಣ್ಯ ಸಚಿವ ಉಮೇಶ್ ಕತ್ತಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರಾದರೂ, ಮಾಧ್ಯಮದವರಿಂದ ಅಂತರ ಕಾಯ್ದುಕೊಂಡು ಕಾಡು ಸುತ್ತಿದ್ದಾರೆ. ಜೊತೆಗೆ, ಅಧಿಕಾರಿಗಳ ಸಭೆಯನ್ನು ನಡೆಸಿದ್ದಾರೆ.

ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಿದ್ದ ಅವರು ಭಾನುವಾರ ವನ್ಯಜೀವಿ ಸಫಾರಿ ನಡೆಸಿದ್ದಲ್ಲದೇ, ಮಾನವ ವನ್ಯಜೀವಿ ಸಂಘರ್ಷ ತಡೆಗೆ ರೈಲು ಕಂಬಿಗಳು ಕೊರತೆ ಹಿನ್ನೆಲೆ ಬೇಲಿಗಳನ್ನು ಅಳವಡಿಸಲು ಮುಂದಾಗಿರುವುದಾಗಿ ತಿಳಿದುಬಂದಿದೆ.

ವಿನೂತನ ಪ್ರಯತ್ನ; ಹಾಡಿಯ ಜನರಿಗೆ 24×7 ಸಾರಿಗೆ ವಾಹನ ವಿನೂತನ ಪ್ರಯತ್ನ; ಹಾಡಿಯ ಜನರಿಗೆ 24×7 ಸಾರಿಗೆ ವಾಹನ

ಸಚಿವರ ಖಾಸಗಿ ಭೇಟಿ ಇದಲ್ಲದಿದ್ದರೂ ಮಾಧ್ಯಮದಿಂದ ಅಂತರ ಏಕೆ ಕಾಯ್ದುಕೊಂಡರು? ಎಂದು ತಿಳಿದುಬಂದಿಲ್ಲ. ಅಧಿಕಾರಿಗಳು ಕೂಡ ಈ ಸಂಬಂಧ ಹಾರಿಕೆ ಉತ್ತರ ಕೊಟ್ಟಿದ್ದಾರೆ. ಕಳೆದ ಎರಡು ಬಾರಿ ಭೇಟಿ ನೀಡಿದ ವೇಳೆ ಅತ್ಯಾಚಾರ, ಪಡಿತರ ವಿತರಣೆ ಹಾಗೂ ಬೆಳಗಾವಿ ವಿಭಜನೆ ಕುರಿತು ನೀಡಿದ್ದ ಹೇಳಿಕೆಗಳು ಭಾರೀ ಸದ್ದು ಮಾಡಿದ್ದವು. ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಸುದ್ದಿ ಇದೆ.

Minister Umesh Katti Visit BR Hills but He Maintain Distance With Media

ಏಡುಕುಂಡಲು ಎತ್ತಂಗಡಿ ಮಾಡದಂತೆ ಮನವಿ; ರೈತ ಸಂಘದ ಮುಖಂಡ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ರೈತರು ಭಾನುವಾರ ಕೆ.ಗುಡಿಯಲ್ಲಿ ಸಚಿವರನ್ನು ಭೇಟಿಯಾಗಿ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಗ್ರಾಮಗಳು ಮತ್ತು ಬಿಳಿಗಿರಿರಂಗನ ಬೆಟ್ಟದ ಪುರಾಣಿ ಪೋಡು ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಮನವಿ ಸಲ್ಲಿಸಿದರು‌‌.

ಇದರೊಟ್ಟಿಗೆ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ಡಿಸಿಎಫ್ ಏಡುಕುಂಡಲು ಅವರನ್ನು ಮೂರು ವರ್ಷಗಳವರೆಗೆ ವರ್ಗಾವಣೆ ಮಾಡದೇ ಜಿಲ್ಲೆಯಲ್ಲೇ ಉಳಿಸಿಕೊಳ್ಳಬೇಕು, ಚಂಗಡಿ ಗ್ರಾಮಸ್ಥರನ್ನು ಸ್ಥಳಾಂತರಿಸಬೇಕೆಂದು ಮನವಿ ಮಾಡಿದರು‌‌. ಚಂಗಡಿ ಸ್ಥಳಾಂತರದ ಬಗ್ಗೆ ಗುರುವಾರದಂದು ವಿಧಾನಸೌಧಕ್ಕೆ ಬನ್ನಿ ಅಲ್ಲೇ ಕೆಲಸ ಮಾಡಿಕೊಡುತ್ತೇನೆ ಎಂದ ಕತ್ತಿ, ಡಿಸಿಎಫ್‌ರನ್ನು ಜಿಲ್ಲೆಯಲ್ಲೇ ಮುಂದುವರಿಸುವ ಭರವಸೆ ನೀಡಿದ್ದಾರೆ‌.

 ದಟ್ಟ ಕಾಡಿನ ಮಧ್ಯೆ ಪುಟ್ಟ ಶಾಲೆ; ಮಕ್ಕಳಿಗೆ 14 ವರ್ಷಗಳಿಂದ ಪಾಠದ ಜೊತೆ ಪರಿಸರ ಕಾಳಜಿ ದಟ್ಟ ಕಾಡಿನ ಮಧ್ಯೆ ಪುಟ್ಟ ಶಾಲೆ; ಮಕ್ಕಳಿಗೆ 14 ವರ್ಷಗಳಿಂದ ಪಾಠದ ಜೊತೆ ಪರಿಸರ ಕಾಳಜಿ

ಬ್ಯಾರಿಕೇಡ್ ಅಳವಡಿಸಲು ಚಿಂತನೆ: ಎಚ್‌. ಡಿ. ಕೋಟೆ ತಾಲೂಕಿನ ನಾಗರಹೊಳೆಗೆ ಭೇಟಿ ನೀಡಿದ್ದ ಉಮೇಶ್ ಕತ್ತಿ, ಪ್ರಾಣಿಗಳು ಹೊರಬಾರದಂತೆ ಬ್ಯಾರೀಕೇಡ್ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ. ಅರಣ್ಯ ಇಲಾಖೆಯ ವತಿಯಿಂದ ಮಾನವ-ಪ್ರಾಣಿ ಸಂಘರ್ಷ ತಡೆಯಲು ಶ್ರಮಿಸಲಾಗುತ್ತಿದೆ. ಪ್ರಾಣಿಗಳು ಹೊರಬಾರದಂತೆ ಬ್ಯಾರೀಕೇಡ್ ಅಳವಡಿಸಲಾಗುತ್ತಿದೆ. ಪ್ರಾಣಿಗಳಿಗೆ ಉತ್ತಮ ಆಹಾರ ದೊರಕಿದರೆ ಅವು ಕಾಡಲ್ಲೆ ಉಳಿದು, ಮಾನವ ಸಂಘರ್ಷ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಮಾನವ ಮತ್ತು ಆನೆಗಳ ಸಂಘರ್ಷ ಇಂದು ನೆನ್ನೆಯದಲ್ಲ. ಅದು ಬಹಳ ಹಿಂದಿನಿಂದಲೂ ನಡೆಯುತ್ತಲೆ ಇದೆ. ಬಹುಶಃ ಪ್ರಾಣಿಗಳು ಶಾಂತವಾಗಿಯೇ ಇರುತ್ತವೆ, ಆದರೆ ನಾವು ಕ್ರೂರವಾಗಿದ್ದೇವೆ. ಇದರಿಂದ ಸಂಘರ್ಷ ಹೆಚ್ಚಾಗುತ್ತಿದೆ. ಸಾಧ್ಯವಾದಷ್ಟು ಕಾಡುಪ್ರಾಣಿಗಳಿಂದ ದೂರವಿರಲು ಪ್ರಯತ್ನ ಮಾಡಬೇಕು, ಇದನ್ನು ಅರಿತು ನಾವು ಪ್ರಾಣಿಗಳಿಂದ ದೂರವಿರುವುದು ಉತ್ತಮ ಎಂದರು.

Recommended Video

ಮೋದಿ ಆಗಮಿಸಿದ್ರೆ ಶಾಲಾ ಕಾಲೇಜುಗಳಿಗ್ಯಾಕೆ ರಜೆ? ವಿದ್ಯಾರ್ಥಿಗಳು ಭಯೋತ್ಪಾದಕರಾ?ಡಿಕೆಶಿ ಗರಂ | Oneindia Kannada

English summary
Forest Minister Umesh Katti visited Biligiriranga hills on Saturday. He was staying in K. Gudi at BR hills tiger reserve, where he conducted a wildlife safari on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X