ಗುಂಡ್ಲುಪೇಟೆ: ಕಳೆ ನಾಶಕ ಸಿಂಪಡಿಸಿ ಒಂದೂವರೇ ಹೆಕ್ಟೇರ್ ಬೆಳ್ಳುಳ್ಳಿ ಬೆಳೆ ನಾಶ ಮಾಡಿದ ಕಿಡಿಗೇಡಿಗಳು
ಚಾಮರಾಜನಗರ, ಆಗಸ್ಟ್, 29: ಹೊಟ್ಟೆಕಿಚ್ಚಿನಿಂದಲೋ, ದ್ವೇಷದಿಂದಲೋ ರೈತನ ಬಾಳನ್ನೇ ಹಾಳುಗೆಡವಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಲಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಲ್ಲಿಗೌಡನಹಳ್ಳಿ ಗ್ರಾಮದ ಸಂತೋಷ್ ಎಂಬ ರೈತ ಸುಮಾರು ಒಂದೂವರೆ ಹೆಕ್ಟೇರ್‌ನಲ್ಲಿ ಬೆಳ್ಳುಳ್ಳಿ ಬೆಳೆ ಬೆಳಿದಿದ್ದರು. ಬೆಳೆ ಕೂಡ ಉತ್ತಮವಾಗಿ ಬಂದು ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ ಕಿಡಿಗೇಡಿಗಳು ಜಮೀನಿನಲ್ಲಿ ನಿರ್ಮಾಣ ಮಾಡಿದ್ದ ಕೃಷಿ ಹೊಂಡಕ್ಕೆ ಕಳೆ ನಾಶಕ ಔಷಧಿ ಸುರಿದಿದ್ದಾರೆ. ಇದರ ಅರಿವಿಲ್ಲದೆ ರೈತ ಸಂತೋಷ್ ಬೆಳ್ಳುಳ್ಳಿ ಬೆಳೆಗೆ ಕಳೆದ 3 ದಿನಗಳಿಂದಲೂ ನೀರು ಹಾಯಿಸಿದ ಪರಿಣಾಮ ಒಂದೂವರೆ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳ್ಳುಳ್ಳಿ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿದೆ.

ಜೊತೆಗೆ ಕೃಷಿ ಹೊಂಡದಲ್ಲಿ ಸಾಕಿದ್ದ 50ಕ್ಕೂ ಹೆಚ್ಚು ಮೀನುಗಳು ಕೂಡ ಸಾವನ್ನಪ್ಪಿವೆ. ಕಳೆದ ಮೂರು ದಿನಗಳ ಹಿಂದೆ ಕಿಡಿಗೇಡಿಗಳು ಕೃಷಿ ಹೊಂಡಕ್ಕೆ ಕಳೆ ನಾಶಕ ಸುರಿದಿರುವ ಅನುಮಾನ ವ್ಯಕ್ತವಾಗಿದೆ. ಸುಮಾರು 5 ಲಕ್ಷ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬೆಳ್ಳುಳ್ಳಿ ಬೆಳೆಯನ್ನು ಯಾರೋ ಕಿಡಿಗೇಡಿಗಳು ನಾಶ ಮಾಡಿದ್ದು, ಇದರಿಂದ ಸಂತೋಷ್ ತೀವ್ರ ನಷ್ಟದ ಸುಳಿಗೆ ಸಿಲುಕುವಂತಾಗಿದೆ.
ಗಿಳಿಗಳ ಕಾಟದಿಂದ ಬೇಸತ್ತ ಅನ್ನದಾತ
ಮತ್ತೊಂದೆಡೆ ಮಳೆ ಇಲ್ಲದಿದ್ದರೂ ಕೂಡ ದಾವಣಗೆರೆ ಜಿಲ್ಲೆಯ ಹಲವೆಡೆ ಪಾಪ್ ಕಾರ್ನ್ ಮಕ್ಕೆಜೋಳದ ಫಸಲು ಚೆನ್ನಾಗಿಯೇ ಬಂದಿವೆ. ಆದರೆ ಗಿಳಿಗಳ ಕಾಟದಿಂದ ಇವುಗಳನ್ನು ಉಳಿಸಿಕೊಳ್ಳುವುದೇ ಇಲ್ಲಿನ ರೈತರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಮೊದಲೇ ಬೆಳೆ ಇಲ್ಲ. ಮಳೆ ಬಾರದೇ ಬೆಳೆ ಒಣಗಿ ಹೋಗಿತ್ತು. ಮತ್ತೆ ಮೆಕ್ಕೆಜೋಳ ಬಿತ್ತನೆ ಮಾಡಿದ್ದ ರೈತರು ಬೆಳೆಯು ಚೆನ್ನಾಗಿ ಬರಬಹುದು ಎಂದುಕೊಂಡಿದ್ದರು. ಜುಲೈ ತಿಂಗಳಿನಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದ ಪರಿಣಾಮ ಶೇಕಡಾ 50ರಷ್ಟು ಬೆಳೆ ನಷ್ಟವಾಗಿದೆ. ಈಗ ಗಿಳಿಗಳ ಹಿಂಡು ಬಂದು ಜೋಳ ತಿನ್ನುತ್ತಿವೆ. ಎಲ್ಲಿ ಹೋಗಿ ನೋಡಿದರೂ ಮೆಕ್ಕೆಜೋಳ ತೆನೆ ಕಾಣುತ್ತದೆ. ಆದರೆ ಮೆಕ್ಕೆಜೋಳ ಮಾತ್ರ ಕಾಣ ಸಿಗುವುದೇ ಇಲ್ಲ. ಅಲ್ಲೇನಿದ್ದರೂ ಖಾಲಿ ಖಾಲಿಯಾಗಿರುವ ದಿಂಡು ಕಣ್ಣಿಗೆ ಬೀಳುತ್ತವೆ.
ಒಂದು ಕಡೆ ಮಳೆ ಅಭಾವದ ನಡುವೆಯೂ ರೈತರು ಸಾಲ ಸೋಲ ಮಾಡಿ ಪಾಪ್ ಕಾರ್ನ್ ಮೆಕ್ಕೆಜೋಳ ಬೆಳೆ ಬೆಳೆಯುತ್ತಿದ್ದರೆ, ಮತ್ತೊಂದೆಡೆಡೆ ಗಿಳಿಗಳಿಗೆ ಆಹಾರ ಸಿಗದೇ ರೈತರ ಜಮೀನುಗಳಿಗೆ ಹಿಂಡು ಹಿಂಡಾಗಿ ಲಗ್ಗೆ ಇಟ್ಟು ಸಂಪೂರ್ಣ ಬೆಳೆಗಳನ್ನು ನಾಶ ಮಾಡುತ್ತಿವೆ. ಚನ್ನಗಿರಿ ತಾಲೂಕಿನ ಸಂತೆಬೆನ್ನೂರು, ದೊಡ್ಡಬ್ಬಿಗೆರೆ, ಚಿಕ್ಕಬ್ಬಿಗೆರೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಪರಿಸ್ಥಿತಿ ತಲೆದೋರಿದೆ.
ಇನ್ನು ಬೇರೆ ಕಡೆಗಳಲ್ಲಿ ಮೆಕ್ಕೆಜೋಳ ಬರುವುದಕ್ಕಿಂತ ಮುಂಚೆ ಇಲ್ಲಿ ಬೆಳೆ ಬರುವುದರಿಂದ ಗಿಳಿಗಳು ಇಲ್ಲಿಗೆ ಲಗ್ಗೆ ಇಡುತ್ತವೆ. ಆಹಾರ ಅರಸಿ ಬರುವ ಗಿಳಿಗಳ ಹಿಂಡುಗಳ ಕಾಟಕ್ಕೆ ರೈತರು ಬೇಸತ್ತು ಹೋಗಿದ್ದಾರೆ. ಬೆಳಗ್ಗೆ ಮತ್ತು ಸಂಜೆಯ ಹೊತ್ತಲ್ಲಿ ಬರುವ ಗಿಳಿಗಳ ಹಿಂಡು ಪಾಪ್ ಕಾರ್ನ್ ಮೆಕ್ಕೆಜೋಳ ತಿಂದು ಹೋಗುತ್ತಿವೆ. ರೈತರು ಇವುಗಳನ್ನು ಓಡಿಸಲು ಪಡುತ್ತಿರುವ ಕಷ್ಟ ಮಾತ್ರ ಅಷ್ಟಿಷ್ಟಲ್ಲ.
ಕಳೆದ ವರ್ಷಗಳಲ್ಲಿ ಗಿಳಿಗಳ ಹಿಂಡು ಬರುತ್ತಿದ್ದವು. ಆದರೆ ಇಷ್ಟೊಂದು ಪ್ರಮಾಣದಲ್ಲಿ ಪಾಪ್ ಕಾರ್ನ್ ಮೆಕ್ಕೆಜೋಳವನ್ನು ತಿಂದು ಹೋಗುತ್ತಿರಲಿಲ್ಲ. ಆದರೆ ಈ ಬಾರಿಯಂತೂ ಬರುತ್ತಿರುವ ಗಿಳಿಗಳ ಸಂಖ್ಯೆ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯ ಜಗಳೂರು ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆಯಲಾಗುತ್ತದೆ.
ಅದರಲ್ಲೂ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು, ದೊಡ್ಡಬ್ಬಿಗೆರೆ, ಚಿಕ್ಕಬ್ಬಿಗೆರೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೇರೆ ಕಡೆಗಳಿಂತ ಬೇಗನೇ ಮೆಕ್ಕೆಜೋಳ ಬಿತ್ತನೆ ಮಾಡಲಾಗುತ್ತದೆ. ಫಸಲೂ ಸಹ ಬೇಗನೇ ಬರುತ್ತದೆ. ಈ ಕಾರಣಕ್ಕಾಗಿ ಆಹಾರ ಅರಸಿ ಗಿಳಿಗಳು ಇಲ್ಲಿಗೆ ಬರುತ್ತಿವೆ.
ರೈತರಿಗೆ ಗಿಳಿಗಳು ಉಳಿಯಬೇಕು ಎಂಬ ಅಪೇಕ್ಷೆಯಿದೆ. ಆದರೆ ಸಾಲ ಮಾಡಿ ಬೆಳೆದ ಬೆಳೆಗಳೆಲ್ಲ ಗಿಳಿಗಳ ಪಾಲಾಗುತ್ತಿರುವುದು ಬೇಸರ ತರಿಸಿದೆ. ಅರಣ್ಯ ಇಲಾಖೆ, ಕೃಷಿ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ರೈತರಿಗೆ ಗಿಳಿಗಳನ್ನು ಸಾಯಿಸಲು ಮನಸ್ಸು ಆಗುತ್ತಿಲ್ಲ. ಇತ್ತ ಬೆಳೆ ಹಾಳಾಗುತ್ತಿರುವುದನ್ನು ನೋಡಿ ತಡೆದುಕೊಳ್ಳಲೂ ಆಗುತ್ತಿಲ್ಲ. ಹೀಗೆ ಅಡ್ಡಕತ್ತರಿಯಲ್ಲಿ ಸಿಲುಕಿ ಹಾಕಿಕೊಂಡಿರುವ ರೈತರು ನಿತ್ಯವೂ ಯಾತನೆ ಅನುಭವಿಸುವಂತಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications