ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆಯ ಪ್ಲೆಕ್ಸ್ ಹರಿದ ಕಿಡಿಗೇಡಿಗಳು
ಚಾಮರಾಜನಗರ, ಸೆಪ್ಟೆಂಬರ್ 29: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿರುವ 'ಭಾರತ್ ಜೋಡೋ ಯಾತ್ರೆ' ಸೆಪ್ಟೆಂಬರ್ 30ರಂದು ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್‌ಗಳನ್ನು ಗುರುವಾರ ಬೆಳಗಿನ ಜಾವ ಕಿಡಿಗೇಡಿಗಳು ಹರಿದಿದ್ದಾರೆ.
ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ ಹೋಟೇಲ್‌ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್ ಗಳಿಗೆ ಕಿಡಿಗೇಡಿಗಳು ಬ್ಲೇಡ್ ಹೊಡೆದಿದ್ದಾರೆ. ಎಐಸಿಸಿ ನಾಯಕ ರಾಹುಲ್ ಗಾಂಧಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಭಾವಚಿತ್ರಗಳಿರುವ ಫ್ಲೆಕ್ಸ್ ಅನ್ನು ಹರಿದಿದ್ದಾರೆ.
ಅವರು ಕೇಳಿದ ದಾಖಲೆ ಕೊಟ್ಟರೂ, ಮತ್ತೆ ಪರಿಶೀಲನೆಗೆ ಬಂದಿದ್ದಾರೆ; ಡಿಕೆ ಶಿವಕುಮಾರ್
ಸ್ಥಳೀಯ ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸುತ್ತಿದ್ದರೆ, ತಾವು ಈ ರೀತಿಯ ಹೀನ, ಹೇಡಿ ಕೆಲಸ ಮಾಡುವುದಿಲ್ಲ, ಫ್ಲೆಕ್ಸ್ ಹಾಕಿರುವ ಜಾಗಗಳಲ್ಲಿ ಸಿಸಿಟಿವಿ ಕ್ಯಾಮರಾ ಇದ್ದರೆ ಅದನ್ನು ಪರಿಶೀಲಿಸಲಿ, ತಪ್ಪಿಸ್ಥರಿಗೆ ಶಿಕ್ಷೆಯಾಗಲಿ. ಫ್ಲೆಕ್ಸ್ ಹರಿದು ಹಾಕುವುದು ಹೇಡಿಗಳು ಮಾಡೋ ಕೆಲಸ ಎಂದು ಬಿಜೆಪಿಗರು ತಿರುಗೇಟು ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಂಗ್ರೆಸ್ ಮಯ
ರಾಹುಲ್ ಗಾಂಧಿ ಮತ್ತು ತಂಡ ಈಗಾಗಲೇ ಕೇರಳದ ರಾಜ್ಯ ಪ್ರವಾಸ ಮುಗಿಸಿ ತಮಿಳುನಾಡಿನ ಗಡಿಭಾಗ ಗುಡಲೂರಿಗೆ ಆಗಮಿಸಿದ್ದು ಶುಕ್ರವಾರ ಬೆಳಗ್ಗೆ 8 ರಿಂದ 8.30ರ ಹೊತ್ತಿಗೆ ರಾಹುಲ್ ಗಾಂಧಿ ಬಂದಿಳಿಯಲಿದ್ದು 9 ರ ಸುಮಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. 5 ಸಾವಿರಕ್ಕೂ ಹೆಚ್ಚು ಮಂದಿ ಸಭಿಕರು ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ.
ಊಟಿ ವೃತ್ತದಲ್ಲಿ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಬೃಹತ್ ಕಮಾನು ನಿರ್ಮಿಸುತ್ತಿದ್ದು ಎಲ್ಲರನ್ನೂ ಹುಬ್ಬೇರಿಸುತ್ತಿದೆ. ರಾಗಾ ಹೆಜ್ಜೆ ಹಾಕುವ ಮಾರ್ಗದುದ್ದಕ್ಕೂ ರಾಹುಲ್ ಗಾಂಧಿ ಮತ್ತು ರಾಜ್ಯ ನಾಯಕರುಗಳ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಿದ್ದು ಇಡೀ ರಾಷ್ಟ್ರೀಯ ಹೆದ್ದಾರಿ ಕಾಂಗ್ರೆಸ್ ಮಯವಾಗಿದೆ.
ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಆಮ್ಲಜನಕ ದುರಂತದ ಸಂತ್ರಸ್ತರ ಜೊತೆ
ಅಂಬೇಡ್ಕರ್ ಭವನ ಕಾರ್ಯಕ್ರಮದ ಬಳಿಕ 10-11 ರ ವೇಳೆಗೆ ಪಾದಯಾತ್ರೆ ಆರಂಭಗೊಳ್ಳಲಿದ್ದು ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿರುವ ಕೆಬ್ಬೆಕಟ್ಟೆ ಶನೀಶ್ವರ ದೇವಾಲಯ ಸಮೀಪ ಬಿಳಿಗಿರಿರಂಗನ ಬೆಟ್ಟ ಸೋಲಿಗರು ಮತ್ತು ಚಾಮರಾಜನಗರ ಜಿಲ್ಲಾಸ್ಪತ್ರೆಯ ಆಮ್ಲಜನಕ ದುರಂತದ ಸಂತ್ರಸ್ತರ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ.
ಇನ್ನು, ರಾಗಾ ಯಾತ್ರೆ ಕರ್ನಾಟಕ ಪ್ರವೇಶ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರುಗಳಾದ ಸಿದ್ದರಾಮಯ್ಯ, ಡಿಕೆಶಿ, ಖರ್ಗೆ, ಬಿ.ಕೆ.ಹರಿಪ್ರಸಾದ್ ಸೇರಿದಂತೆ ರಾಜ್ಯ ನಾಯಕರುಗಳ ದಂಡೇ ಹರಿದು ಬರಲಿದೆ.

ಕಲ್ಯಾಣ ಮಂಟಪಗಳಲ್ಲಿ ಉಪಹಾರ ವ್ಯವಸ್ಥೆ
ಪಾದಯಾತ್ರೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಹೆಜ್ಜೆ ಹಾಕಲಿದ್ದು ಗುಂಡ್ಲುಪೇಟೆ ಪಟ್ಟಣದಲ್ಲಿ ಇರುವ ಎಲ್ಲಾ ಕಲ್ಯಾಣ ಮಂಟಪಗಳನ್ನು ಬಾಡಿಗೆಗೆ ಪಡೆದು ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆ ಉದ್ದಕ್ಕೂ ಕಾರ್ಯರ್ತರಿಗೆ ಮಜ್ಜಿಗೆ, ನೀರು ಮತ್ತು ತಿಂಡಿಗಳನ್ನು ನೀಡಲು ಸ್ಥಳೀಯ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ 21 ದಿನ ಸಂಚರಿಸಲಿರುವ ಪಾದಯಾತ್ರೆ
ಸೆಪ್ಟೆಂಬರ್ 30ರಂದು ರಾಜ್ಯ ಪ್ರವೇಶಿಸಲಿರುವ ಭಾರತ್ ಜೋಡೋ ಪಾದಯಾತ್ರೆ ರಾಜ್ಯದ 7 ಜಿಲ್ಲೆಗಳಲ್ಲಿ 21 ದಿನ ಸಂಚರಿಸಲಿದೆ. ಕೇರಳದ ವೈನಾಡು ಮೂಲಕ ಕರ್ನಾಟಕದ ಗಡಿ ಭಾಗ ಗುಂಡ್ಲುಪೇಟೆ ತಲುಪುವ ಭಾರತ್ ಜೋಡೋ ಯಾತ್ರೆ ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನಗಳ ಕಾಲ, 510 ಕಿಲೋ ಮೀಟರ್ ಸಾಗಲಿದೆ. ಇದಕ್ಕಾಗಿ ಕರ್ನಾಟಕ ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದು, ಕೆಲ ಸಮಿತಿಗಳನ್ನು ರಚಿಸಿದೆ. ವಿವಿಧ ಸಮಿತಿಗಳಿಗೆ ಶಾಸಕರು, ಮಾಜಿ ಶಾಸಕರನ್ನು ನೇಮಿಸಲಾಗಿದೆ. ಇದೀಗ ವಿಧಾನಪರಿಷತ್ ಸದಸ್ಯರಿಗೂ ಕೆಲ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೂಚನೆ ಮೇರೆಗೆ ಡಿ.ಕೆ. ಶಿವಕುಮಾರ್ ಅವರು 21 ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಿಗೆ ಯಾತ್ರೆಯ ಒಂದೊಂದು ದಿನದ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.