• search
 • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಸೇರಲಿದ್ದಾರೆ ಬಿಎಸ್‌ಪಿ ಶಾಸಕ ಎನ್. ಮಹೇಶ್?

|

ಚಾಮರಾಜನಗರ, ಡಿಸೆಂಬರ್ 02: ಮಾಜಿ ಸಚಿವ, ಬಿಎಸ್ ಶಾಸಕ ಎನ್. ಮಹೇಶ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಬಿಎಸ್‌ಪಿ ಪಕ್ಷದಿಂದ ಉಚ್ಛಾಟನೆಗೊಂಡಿರುವ ಮಹೇಶ್ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಬಿಜೆಪಿಯತ್ತ ಮುಖ ಮಾಡಿದ್ದಾರೆ.

2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಎಸ್‌ಪಿಯಿಂದ ಗೆದ್ದ ಏಕೈಕ ಶಾಸಕ ಎನ್. ಮಹೇಶ್. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದಿಂದ ಅವರು ಗೆದ್ದು, ವಿಧಾನಸಭೆ ಪ್ರವೇಶಿಸಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾದಾಗ ಸಚಿವರು ಸಹ ಆಗಿದ್ದರು.

ಸಚಿವ ಎನ್.ಮಹೇಶ್ ರಾಜೀನಾಮೆ : ಯಾರು, ಏನು ಹೇಳಿದರು?

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬಿಜೆಪಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ದಿನ ವಿಧಾನಸಭೆ ಕಲಾಪಕ್ಕೆ ಗೈರಾಗುವ ಮೂಲಕ ಬಿಜೆಪಿಗೆ ಅವರು ಪರೋಕ್ಷವಾಗಿ ಬೆಂಬಲವನ್ನು ನೀಡಿದ್ದರು.

ಎನ್‌.ಮಹೇಶ್‌ ರಾಜೀನಾಮೆ, ಮೈತ್ರಿ ಸರ್ಕಾರಕ್ಕೆ ಪೆಟ್ಟು

ಬಿಎಸ್‌ಪಿ ಪಕ್ಷ ಜೆಡಿಎಸ್ ಬೆಂಬಲಿಸುವಂತೆ ಜಾರಿ ಮಾಡಿದ್ದ ವಿಪ್ ಉಲ್ಲಂಘನೆ ಮಾಡಿದ ಕಾರಣಕ್ಕೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಎನ್. ಮಹೇಶ್ ಈಗ ತಮ್ಮ, ಬೆಂಬಲಿಗರ ಹಿತದೃಷ್ಟಿಯಿಂದ ಮುಂದಿನ ರಾಜಕೀಯ ನಡೆ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

ವಿಶ್ವಾಸಮತಕ್ಕೆ ಗೈರು: ಬಿಎಸ್‌ಪಿ ಶಾಸಕ ಮಹೇಶ್ ಪಕ್ಷದಿಂದ ಉಚ್ಛಾಟನೆ

ಸಂಕ್ರಾಂತಿ ಬಳಿಕ ಸೇರ್ಪಡೆ

ಸಂಕ್ರಾಂತಿ ಬಳಿಕ ಸೇರ್ಪಡೆ

2021ರ ಜನವರಿ 14ರ ಬಳಿಕ ಶಾಸಕ ಎನ್. ಮಹೇಶ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಚಾಮರಾಜನಗರ ಭಾಗದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಮಹೇಶ್ ಪಕ್ಷ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಚಿವರ ಜೊತೆ ಮಾತುಕತೆ

ಸಚಿವರ ಜೊತೆ ಮಾತುಕತೆ

ಎನ್. ಮಹೇಶ್ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಸಚಿವರಾದ ಕೆ. ಗೋಪಾಲಯ್ಯ, ಎಸ್. ಟಿ. ಸೋಮಶೇಖರ್ ಅವರ ಜೊತೆ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. 2021ರಲ್ಲಿ ಅವರು ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ.

ದಲಿತಮತಗಳ ಮೇಲೆ ಕಣ್ಣು

ದಲಿತಮತಗಳ ಮೇಲೆ ಕಣ್ಣು

ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಗ್ಗೆ ಬಿ. ವೈ. ವಿಜಯೇಂದ್ರ ಹೆಚ್ಚು ಗಮನಹರಿಸಿದ್ದಾರೆ. ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸಹ ಎನ್. ಮಹೇಶ್ ಪಕ್ಷ ಸೇರ್ಪಡೆಗೆ ಒಪ್ಪಿಗೆ ನೀಡಿದೆ ಎಂಬ ಸುದ್ದಿಗಳು ಹಬ್ಬಿವೆ. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಎನ್. ಮಹೇಶ್ ಮತ್ತು ಅವರ ಬೆಂಬಲಿಗರು ಬಿಜೆಪಿ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

  Kerala Rains : ವರುಣನ ಅಬ್ಬರಕೆ ಬೆಚ್ಚಿಬಿದ್ದ ದೇವರ ನಾಡು | Oneindia Kannada
  ಶಿಕ್ಷಣ ಸಚಿವರಾಗಿದ್ದರು

  ಶಿಕ್ಷಣ ಸಚಿವರಾಗಿದ್ದರು

  2018ರ ಚುನಾವಣೆಯಲ್ಲಿ ಬಿಎಸ್‌ಪಿ ಮತ್ತು ಜೆಡಿಎಸ್ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದ್ದವು. ಕೊಳ್ಳೇಗಾಲ ಕ್ಷೇತ್ರದಲ್ಲಿ ಜೆಡಿಎಸ್ ಬಿಎಸ್‌ಪಿಗೆ ಬೆಂಬಲ ನೀಡಿತ್ತು. ಎನ್. ಮಹೇಶ್ 71,792 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಂದು ಕುಮಾರಸ್ವಾಮಿ ಮುಖ್ಯಮಂತ್ರಿಯಾದಾಗ ಎನ್. ಮಹೇಶ್‌ರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿದ್ದರು. ಆದರೆ, ಕೆಲವೇ ದಿನಗಳಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

  English summary
  Bharatiya Janata Party MLA from Kollegal N.Mahesh may join BJP soon. Former minister N. Mahesh expelled from the BSP for not supporting JD(S) Congress during the trust vote of H. D. Kumaraswammy government.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X