ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ಪಡೆಯಲು ಹಣ ವಿತರಣೆ!

By ಮೈಸೂರು ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜನವರಿ 26: ಗ್ರಾಮ ಪಂಚಾಯತಿ ಚುನಾವಣೆ ಮುಗಿದಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟವಾಗುತ್ತಿದೆ. ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳ ಮುಖಂಡರು ನಾನಾ ರೀತಿಯ ಕಸರತ್ತುಗಳನ್ನು ನಡೆಸುತಿದ್ದಾರೆ.

ಗ್ರಾಮ ಪಂಚಾಯಿತಿ ಅಧಿಕಾರಕ್ಕಾಗಿ ಧರ್ಮಸ್ಥಳದ ಮಂಜುನಾಥ ದೇವಾಲಯದ ಮುಂದೆ ಆಣೆ ಪ್ರಮಾಣ ಮಾಡಿದ ವಿಡಿಯೋ ವೈರಲ್ ಆಗಿತ್ತು. ಈಗ ದೇವಾಲಯದ ಮುಂಭಾಗ ಹಣದ ಕಂತೆಗಳನ್ನು ನೀಡುತ್ತಿರುವ ಚಿತ್ರಗಳು ವೈರಲ್ ಆಗಿದ್ದು, ಹಣ ವಿತರಣೆ ಮಾಡುತ್ತಿರುವುದು ಖಚಿತವಾಗಿದೆ.

ವಿಡಿಯೋ; ಗ್ರಾಮ ಪಂಚಾಯಿತಿ ಅಧಿಕಾರಕ್ಕೆ ಧರ್ಮಸ್ಥಳದಲ್ಲಿ ಪ್ರಮಾಣ ವಿಡಿಯೋ; ಗ್ರಾಮ ಪಂಚಾಯಿತಿ ಅಧಿಕಾರಕ್ಕೆ ಧರ್ಮಸ್ಥಳದಲ್ಲಿ ಪ್ರಮಾಣ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ನಾಯಕರ ಬಡಾವಣೆಯ ಹುಚ್ಚಪ್ಪನ ದೇವಾಲಯದ ಮುಂಭಾಗ ಗ್ರಾಮ ಪಂಚಾಯಿತಿಯ ನೂತನ ಸದಸ್ಯರಿಗೆ ಹಣ ಹಂಚಿಕೆ ಮಾಡಲಾಗಿದೆ. ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ಹಣದ ಕಂತೆಗಳನ್ನು ವಿತರಿಸುತ್ತಿರುವ ಚಿತ್ರಗಳು ಹರಿದಾಡುತ್ತಿವೆ.

ಪಂಚಾಯಿತಿ ಚುನಾವಣೆ; ಹರಕೆ ಹೊತ್ತ ಅಭ್ಯರ್ಥಿಯಿಂದ ಪಾದಯಾತ್ರೆ! ಪಂಚಾಯಿತಿ ಚುನಾವಣೆ; ಹರಕೆ ಹೊತ್ತ ಅಭ್ಯರ್ಥಿಯಿಂದ ಪಾದಯಾತ್ರೆ!

Money Distribution For Gram Panchayat President And Vise President Post

ಕೌದಳ್ಳಿ ಗ್ರಾಮ ಪಂಚಾಯಿತಿ 23 ಸದಸ್ಯ ಬಲಹೊಂದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 15, ಬಿಜೆಪಿ ಬೆಂಬಲಿತ 6 ಮತ್ತು ಜೆಡಿಎಸ್ ಬೆಂಬಲಿತ ಇಬ್ಬರು ಗೆಲುವು ಸಾಧಿಸಿದ್ದಾರೆ. ಪಂಚಾಯಿತಿಗೆ ಅಧ್ಯಕ್ಷ ಹುದ್ದೆ ಸಾಮಾನ್ಯ ವರ್ಗಕ್ಕೂ ಉಪಾಧ್ಯಕ್ಷ ಹುದ್ದೆ ಪರಿಶಿಷ್ಠ ಜಾತಿ ಮಹಿಳೆಗೂ ಮೀಸಲಾಗಿದೆ. ಜನವರಿ 28ರಂದು ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಿಗದಿಯಾಗಿದೆ.

72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ

ಈ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಬಹುಮತ ಲಭಿಸಿದೆ. ಆದರೂ ಕೂಡ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಹಠಕ್ಕೆ ಬಿದ್ದಿರುವ ಮಂಜುನಾಥ್, ಮಲ್ಲಯ್ಯನಪುರ ರವಿ, ಪುದುನಗರ ಟಿ.ಎಂ.ನಾರಾಯಣ, ಎಂ.ಟಿ.ದೊಡ್ಡಿ ವಾರ್ಡ್ ನಿಂದ ಗೆದ್ದಿರುವ ಗ್ರಾಮ ಪಂಚಾಯಿತಿ ಸದಸ್ಯೆಯ ಪುತ್ರ ಅನಿಲ್ ಕುಮಾರ್ ಸೇರಿದಂತೆ ಕೆಲ ಸದಸ್ಯರಿಗೆ ಹಣವನ್ನು ನೀಡಿದ್ದಾರೆ.

Money Distribution For Gram Panchayat President And Vise President Post

ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಬಹುಮತಕ್ಕೆ ಬೇಕಾದ ಇನ್ನಷ್ಟು ಸದಸ್ಯರನ್ನು ಮೈತ್ರಿ ಪಕ್ಷಕ್ಕೆ ಕರೆತರುವಂತೆ ಸೂಚನೆ ನೀಡಿ ನೂತನ ಸದಸ್ಯರುಗಳಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

ಜೊತೆಯಾಗಿ ಗ್ರಾಮ ಪಂಚಾಯತಿ ಪ್ರವೇಶ ಮಾಡಿದ ಅತ್ತೆ-ಸೊಸೆ ಜೊತೆಯಾಗಿ ಗ್ರಾಮ ಪಂಚಾಯತಿ ಪ್ರವೇಶ ಮಾಡಿದ ಅತ್ತೆ-ಸೊಸೆ

ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಮತ್ತು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಭಾಗವಹಿಸಲು 2 ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ ಅವರ ಗಮನಕ್ಕೂ ಈ ಚಿತ್ರಗಳು ಬಂದಿವೆ.

Recommended Video

ಬೆಂಗಳೂರು: ನೆಲಮಂಗಲದಲ್ಲಿ ಅನ್ನದಾತರ ಬೃಹತ್ ಪ್ರೊಟೆಸ್ಟ್..! | Oneindia Kannada

ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಇದೆ.

English summary
JD(S) Chamarajanagar district president distributing money for gram panchayat members for the president and vice-president post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X