ಚಾಮರಾಜನಗರ: ಟಾಟಾ ಏಸ್ ಪಲ್ಟಿಯಾಗಿ 15ಕ್ಕೂ‌ ಹೆಚ್ಚು ಮಹಿಳಾ ಕಾರ್ಮಿಕರಿಗೆ ಗಾಯ

ಚಾಮರಾಜನಗರ, ಜುಲೈ, 30: ಕೂಲಿ ಕಾರ್ಮಿಕರನ್ನು ಕರೆದೊಯ್ತುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಸಮೀಪ ಮಂಗಳವಾರ (ಜುಲೈ 30) ನಡೆದಿದೆ.

ಅಮಚವಾಡಿ ಗ್ರಾಮದಿಂದ ತೆರಳುತ್ತಿದ್ದ 20-25 ಮಹಿಳೆಯರಲ್ಲಿ 15ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ‌. ಹೊನ್ನಹಳ್ಳಿ ಗ್ರಾಮ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್‌ ಪಲ್ಟಿಯಾಗಿದೆ‌ ಎಂದು ತಿಳಿದುಬಂದಿದೆ.

More than 15 women workers injured due to Tata Ace overturns near Honnahalli

ಇನ್ನು ಗಾಯಗೊಂಡ ಎಲ್ಲಾ ಮಹಿಳೆಯರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಳಿಕ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ವಾಹನ ಡಿಕ್ಕಿಯಾಗಿ ಜಾಂಬವಂತ ಸಾವು: ಚಿತ್ರದುರ್ಗ ನಗರದ ಹೊರವಲಯದಲ್ಲಿ ಹಾದುಹೋಗುವ ಕ್ಯಾದಿಗೆರೆ ಮತ್ತು ಸೀಬಾರ ರಾಷ್ಟ್ರೀಯ ಬೈಪಾಸ್ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಾಂಬವಂತ ಮೃತಪಟ್ಟ ಘಟನೆ ಇತ್ತೀಚೆಗಷ್ಟೇ ನೆಡೆದಿತ್ತು.

ತಮಟೆಕಲ್ಲು ಬಳಿ ಹೊಸದಾಗಿ ನಿರ್ಮಾಣ ಮಾಡಿರುವ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವಾಹನ ಕರಡಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಕರಡಿ ಸ್ಥಳದಲ್ಲೇ ಸಾವನ್ನಪ್ಪಿದೆ.

ಚಿತ್ರದುರ್ಗದ ಜೋಗಿಮಟ್ಟಿ ಅರಣ್ಯ ಪ್ರದೇಶ ಹೊಂದಿಕೊಂಡಂತೆ ಸುತ್ತಮುತ್ತ ಬೃಹತ್ ಕಲ್ಲು ಬಂಡೆಗಳ ಗುಡ್ಡಗಾಡು ಇರುವುದರಿಂದ ವನ್ಯಜೀವಿಗಳು ಒಂದು ಕಡೆಯಿಂದ ಮತ್ತೊಂದು ಕಡೆ ಓಡಾಡುವುದು ಸಾಮಾನ್ಯವಾಗಿದೆ. ಹೀಗಾಗಿ ಕರಡಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದಿದೆ.

ಇನ್ನು ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಹೆದ್ದಾರಿಯಲ್ಲೇ ಕೊನೆಯುಸಿರೆಳೆದಿದೆ. ಮತ್ತೊಂದು ಕಡೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಿರತೆ, ಕರಡಿ, ಹುಲಿ, ಜಿಂಕೆ ಇನ್ನಿತರ ಕಾಡುಪ್ರಾಣಿಗಳು ರಸ್ತೆ ಅಪಘಾತಕ್ಕೆ ಸಿಲುಕಿ ಮೃತಪಡುತ್ತಿರುವುದು ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸುವಂತೆ ಮಾಡಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+