ಯಳಂದೂರು: ಬಸ್ ಪಲ್ಟಿಯಾಗಿ 16ಕ್ಕೂ ಅಧಿಕ ಮಂದಿಗೆ ಗಾಯ

ಚಾಮರಾಜನಗರ, ಜೂನ್‌, 01: ಪೂಜೆ ಮುಗಿಸಿ ಹಿಂತಿರುಗುವಾಗ ಬಸ್ ಪಲ್ಟಿಯಾಗಿರುವ ಘಟನೆ ಪ್ರಸಿದ್ಧ ಯಾತ್ರಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ರಸ್ತೆಯಲ್ಲಿ ಇಂದು (ಜೂನ್‌ 01) ನಡೆದಿದೆ.

ಶನಿವಾರ ಹಿನ್ನೆಲೆ ಖಾಸಗಿ ಬಸ್ ಮಾಡಿಕೊಂಡು ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಕುಟುಂಬವೊಂದು ಬಿಳಿಗಿರಿರಂಗನಬೆಟ್ಟಕ್ಕೆ ಬಂದಿದ್ದರು. ಪೂಜೆ ಎಲ್ಲಾ ಮುಗಿಸಿಕೊಂಡು ಹಿಂತಿರುಗುವಾಗ ಗವಿಬೋರೆ ಹತ್ತಿರ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆಬದಿಯ ಹಳ್ಳಕ್ಕೆ ಪಲ್ಟಿಯಾಗಿದೆ.

More than 16 people injured due to bus overturn in B R Hills road

ಘಟನೆಯಲ್ಲಿ 16ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಯಳಂದೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌. ಬಸ್ ಪಲ್ಟಿಯಾಗುತ್ತಿದ್ದಂತೆ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಇನ್ನು ಯಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳದಲ್ಲೇ ಇಬ್ಬರು ಸಾವು: ಮುಂದೆ ಚಲಿಸುತ್ತಿದ್ದ ಲಾರಿಗೆ ಕುರಿ ತುಂಬಿದ್ದ ಅಶೋಕ್ ಲೇಲಾಂಡ್ ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಹೊರವಲಯದ ಆರ್.ಕೆ.ಪವರ್ ಜಿನ್ ಬಳಿ ಘಟನೆ ನಡೆದಿದೆ.

ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಚಳ್ಳಕೆರೆಯ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಗಾಡಿಯಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನು ಅಪಘಾತದ ರಭಸಕ್ಕೆ ಅಶೋಕ್ ಲೈಲ್ಯಾಂಡ್ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+