BPL Ration Card: ರಾಜ್ಯದ ಈ ಜಿಲ್ಲೆಯಲ್ಲಿ 18,000ಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ರದ್ದು.!
ಚಾಮರಾಜನಗರ, ಸೆಪ್ಟೆಂಬರ್, 12: ರಾಜ್ಯದಲ್ಲಿ ನಕಲಿ ಪಡಿತರ ಕಾರ್ಡ್‌ಗಳನ್ನು ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲಿದೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ನಕಲಿ ದಾಖಲೆ ನೀಡಿ ಪಡೆದ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದೆ. ಹಾಗಾದರೆ ಚಾಮರಾಜನಗರ ಜಿಲ್ಲೆಯಲ್ಲಿ ಎಷ್ಟು ಕಾರ್ಡ್‌ಗಳನ್ನು ರದ್ದುಪಡಿಸಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಾಮರಾಜನಗರ ಜಿಲ್ಲೆಯಲ್ಲಿ ಆದಾಯ ಇದ್ದಾಗಲೂ, ತಾನು ಸರ್ಕಾರಿ ನೌಕರನಾಗಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದ್ದ ಬರೋಬ್ಬರಿ 18,292 ಅನರ್ಹ ಪಡಿತರ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದು ಮಾಡಿ ಬಿಸಿ ಮುಟ್ಟಿಸಿದೆ.

ವಾರ್ಷಿಕವಾಗಿ 1.20 ಲಕ್ಷ ಆದಾಯ ಹೊಂದಿರುವವರು ಬಡತನ ರೇಖೆಗಿಂತ ಕೆಳಗಿರುವವರ ಪಟ್ಟಿಯಲ್ಲಿ ಇರುವಂತಿಲ್ಲ. ಆದರೆ, ಕಣ್ತಪ್ಪಿಸಿ ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಆಹಾರ ಇಲಾಖೆ ಬಿಸಿ ಮುಟ್ಟಿಸಿದ್ದು, ಬಿಪಿಎಲ್ ಕಾರ್ಡ್ ಹೊಂದಿದ್ದವರಲ್ಲಿ ಸರ್ಕಾರಿ ನೌಕರರು ಇರುವುದು ವಿಪರ್ಯಾಸವಾಗಿದೆ.
ಎಷ್ಟು ಕಾರ್ಡ್ ರದ್ದು.?: 1.20 ಲಕ್ಷ ರೂಪಾಯಿ ವಾರ್ಷಿಕ ಆದಾಯ ಹೊಂದಿದ್ದ 11,753 ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಇನ್ನು, 69 ಮಂದಿ ಸರ್ಕಾರಿ ನೌಕರರು ಕೂಡ ಬಿಪಿಎಲ್ ಕಾರ್ಡ್ ಹೊಂದಿದ್ದರು. ಇವರ ಕಾರ್ಡ್‌ಗಳನ್ನು ಕೂಡ ರದ್ದು ಮಾಡಲಾಗಿದೆ. ಇನ್ನು 6 ತಿಂಗಳ ಕಾಲ ಪಡಿತರ ಪಡೆಯದವರಿಗೂ ಆಹಾರ ಇಲಾಖೆ ಶಾಕ್ ಕೊಟ್ಟಿದ್ದು, 2084 ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅವುಗಳನ್ನು ಎಪಿಎಲ್ ಆಗಿ ಪರಿವರ್ತನೆ ಮಾಡಲಾಗಿದೆ.
ಅಕ್ರಮವಾಗಿ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವವರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಿ ಕಾರ್ಡ್‌ಗಳನ್ನು ರದ್ದು ಮಾಡಲಾಗುವುದು. ಸರ್ಕಾರದ ಸೌಲಭ್ಯ ನೈಜ ಫಲಾನುಭವಿಗೆ ತಲುಪಬೇಕು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ಯೋಗಾನಂದ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಆದಾಯ ಇದ್ದರೂ, ಬಡವರ ಸೋಗು ಹಾಕಿಕೊಂಡು ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಸರಿಯಾಗಿಯೇ ಬಿಸಿ ಮುಟ್ಟಿದೆ.
ಚಿಕ್ಕಮಗಳೂರಿನಲ್ಲಿ ಎಷ್ಟು ಕಾರ್ಡ್ ರದ್ದು?: ಇನ್ನು ಚಿಕ್ಕಮಗಳೂರಿನಲ್ಲಿ 5,125 ನಕಲಿ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ರದ್ದಾಗ ಕಾರ್ಡ್‌ಗಳ ಪಟ್ಟಿಯನ್ನು ವೆಬ್ ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಕಾರ್ಡ್ ನಂಬರ್, ಅವುಗಳ ವಾರಸುದಾರರು, ನ್ಯಾಯಬೆಲೆ ಅಂಗಡಿಯ ಕೋಡ್ ಹಾಗೂ ಕಾರ್ಡ್‌ದಾರರ ವಿಳಾಸವನ್ನು ಉಲ್ಲೇಖ ಮಾಡಿ ಪಟ್ಟಿಯನ್ನು ಬಿಡುಗಡೆಗೊಳಿದಲಾಗಿದೆ ಎಂದು ತಿಳಿಸಿದೆ.
ನಕಲಿ ದಾಖಲೆ ನೀಡಿ ಬಿಪಿಎಲ್ ಕಗಳನ್ನು ಪಡೆದಿರುವವರ ಪತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಬಿಪಿಎಲ್ ಕಾರ್ಡುಗಳಿಗಾಗಿ ಹೊಸ ಮಾನದಂಡ ವಿಧಿಸಿ ಅವುಗಳನ್ನು ಪ್ರಕಟಿಸಿದೆ. ಜೊತೆಗೆ ನಕಲಿ ಬಿಪಿಎಲ್ ಕಾರ್ಡುದಾರರ ಪಟ್ಟಿಯನ್ನೂ ಬಿಡುಗಡೆಗೊಳಿಸಿದ್ದು, ಸದ್ಯ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕಲಿ ಬಿಪಿಎಲ್ ಕಾರ್ಡು ಹೊಂದಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಅಲ್ಲದೆ, ನಕಲಿ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ. ಬಿಪಿಎಲ್ ಕಾರ್ಡ್‌ಗಳಿಗೆ ಈಗಾಗಲೇ ಸರ್ಕಾರ ಹಲವು ನಿಬಂಧನೆಗಳನ್ನು ಅಳವಡಿಕೆ ಮಾಡಿತ್ತು. ಆ ನಿಬಂಧನೆಗಳನ್ನು ಪರಿಷ್ಕರಿಸಿ, ಕೆಲವು ಹೊಸ ನಿಯಮಗಳನ್ನು ಅಳನಡಿಕೆ ಜಾರಿ ತಂದಿದ್ದು, ಅದರನ್ವಯ ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಬಳಕೆ ಮಾಡದಂತೆ ರದ್ದುಪಡಿಸಲು ಸರ್ಕಾರ ಮುಂದಾಗಿತ್ತು. ಅದರಂತೆಯೇ ಇದೀಗ ಹೊಸ, ಪರಿಷ್ಕೃತ ನಿಬಂಧನೆಗಳನ್ನು ಬಿಡುಗಡೆ ಮಾಡಿದೆ.
ಪರಿಷ್ಕೃತ ನಿಬಂಧನೆಗಳಲ್ಲಿ ಇರುವಂತೆ, 1.20 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿರುವವರಿಗೆ ಇನ್ಮುಂದೆ ಬಿಪಿಎಲ್ ಕಾರ್ಡ್ ನೀಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಜೊತೆಗೆ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದರೆ, ಅವುಗಳನ್ನು ರದ್ದು ಮಾಡಲು ನಿರ್ಧರಿಸಿದೆ.
ಇನ್ನು ಅನರ್ಹರು ಬಿಪಿಎಲ್ ಕಾರ್ಡ್‌ಗಳ ಮೂಲಕ ಅನ್ನಭಾಗ್ಯ ಗ್ಯಾರಂಟಿ ಯೋಜನೆಯಡಿ ಅಕ್ಕಿಯನ್ನು ಪಡೆದುಕೊಂಡಿದ್ದವರಿಗೆ ದಂಡ ಹಾಕಲು ನಿರ್ಧರಿಸಿದೆ. ಅಕ್ಕಿಯನ್ನು ಪಡೆದ ದಿನದಿಂದ ಒಂದು ಕೆಜಿ ಅಕ್ಕಿಗೆ 33 ರೂಪಾಯಿಗಳಂತೆ ದಂಡ ವಿಧಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕುಟುಂಬಕ್ಕೆ ಉತ್ತಮ ಆದಾಯ ಇದ್ದರೂ ಬಿಪಿಎಲ್ ಕಾರ್ಡುಗಳನ್ನು ಪಡೆದಿರುವವರಿಗೆ ಒಂದು ಅವಕಾಶ ನೀಡಲು ನಿರ್ಧರಿಸಲಾಗಿದೆ. ಅಂತಹವರಿಗೆ ತಮ್ಮ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡುಗಳಿಗೆ ಬದಲಾಯಿಸಿಕೊಳ್ಳಲು ಒಂದು ಅವಕಾಶವನ್ನು ನೀಡಲಾಗುತ್ತದೆ. ಅದರಂತೆಯೇ ಎಪಿಎಲ್ ಕಾರ್ಡ್‌ಗಳಿಗೆ ಬದಲಾವಣೆ ಮಾಡಿಸಿದರೆ, ಆ ಕಾರ್ಡ್‌ದಾರರು ಹಣ ನೀಡಿ ಲಭ್ಯವಿರುವ ಪಡಿತರವನ್ನು ಪಡೆಯಬಹುದಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications