ಚಾಮರಾಜನಗರ; ವಿಷಾಹಾರ ಸೇವಿಸಿ ಹತ್ತಕ್ಕೂ ಹೆಚ್ಚು ಜಾನುವಾರುಗಳು ಸಾವು

ಚಾಮರಾಜನಗರ, ಜುಲೈ 4: ವಿಷಮಿಶ್ರಿತ ಮೇವನ್ನು ಸೇವಿಸಿ 10ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ದಾರುಣ ಘಟನೆ ಹನೂರು ತಾಲ್ಲೂಕಿನ ಹುತ್ತೂರು ಗ್ರಾಮದಲ್ಲಿ ನಿನ್ನೆ ಶುಕ್ರವಾರ ನಡೆದಿದೆ.

Recommended Video

      China reacts to Modi's surprise visit to galwan valley | Oneindia Kannada

      ತಾಲೂಕಿನ ಹುತ್ತೂರು ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ್ದ 4, ಶಿವಮೂರ್ತಿ ಎಂಬುವವರಿಗೆ ಸೇರಿದ್ದ 3, ರಂಗಸ್ವಾಮಿ ಎಂಬುವವರಿಗೆ ಸೇರಿದ್ದ 1, ಕೃಷ್ಣಪ್ಪ ಎಂಬುವವರಿಗೆ ಸೇರಿದ್ದ 1 ಮತ್ತು ಶಿವಮಲ್ಲು ಎಂಬುವವರಿಗೆ ಸೇರಿದ್ದ 1 ಜಾನುವಾರು ಮೃತಪಟ್ಟಿವೆ.

      ಏನಿದು ಘಟನೆ: ತಾಲೂಕಿನ ಹುತ್ತೂರು ಗ್ರಾಮದಲ್ಲಿ ಮೇಯಲು ಹೊರಟಿದ್ದ ಕೆಲ ಜಾನುವಾರುಗಳು ರಸ್ತೆ ಬದಿಯ ಅಲ್ಲಲ್ಲಿ ಮೃತಪಟ್ಟಿವೆ. ಇನ್ನು ಕೆಲ ಜಾನುವಾರುಗಳು ಹೊಟ್ಟೆ ಉಬ್ಬಿಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಸ್ಥಿತಿಯಲ್ಲಿ ಕಂಡುಬಂದಿವೆ. ಇದನ್ನು ಗಮನಿಸಿದ ಕೂಡಲೇ ಗ್ರಾಮಸ್ಥರು ಆತಂಕಕ್ಕೀಡಾಗಿ ಪಶು ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪಿ.ಜಿ.ಪಾಳ್ಯ ಪಶು ಇಲಾಖೆ ಜಾನುವಾರು ಅಧಿಕಾರಿ ರಾಜೇಂದ್ರ ಸ್ಥಳಕ್ಕೆ ಭೇಟಿ ನೀಡಿ ನಿತ್ರಾಣವಾಗಿದ್ದ ಜಾನುವಾರುಗಳಿಗೆ ಅಗತ್ಯ ಔಷಧೋಪಚಾರ ನೀಡಿದ್ದಾರೆ.

      More Than Ten Cattles Died By Eating Poisonous Fodder At Chamarajanagar

      ಜಾನುವಾರುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಗ್ರಾಮದ ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ. ಕೆಲವರು ಜಾನುವಾರುಗಳು ಕುಡಿಯುವ ಹಳ್ಳದ ನೀರಿಗೆ ಕಿಡಿಗೇಡಿಗಳು ವಿಷ ಮಿಶ್ರಣ ಮಾಡಿದ್ದಾರೆ ಎನ್ನುತ್ತಿದ್ದು, ಇನ್ನು ಕೆಲವರು ಜಮೀನಿನಲ್ಲಿ ಬೆಳೆಗಳಿಗೆ ಸಿಂಪಡಿಸಿದ್ದ ಕ್ರಿಮಿನಾಶಕಯುಕ್ತ ಮೇವು ಸೇವಿಸಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

      ಸಾವಿಗೀಡಾಗಿರುವ ಜಾನುವಾರುಗಳ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದುಬರಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+