ಸುವರ್ಣಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಧ್ರುವನಾರಾಯಣ್

Posted By:
Subscribe to Oneindia Kannada

ಚಾಮರಾಜನಗರ, ಅಕ್ಟೋಬರ್ 13: ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರವಾಗಿ ಮಳೆಯಾಗುತ್ತಿದ್ದ ಹಿನ್ನಲೆಯಲ್ಲಿ ಸುವರ್ಣಾವತಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ.

ಚಾಮರಾಜನಗರದ ಅಟ್ಟುಗುಳಿಪುರದ ಬಳಿಯಿರುವ ಸುವರ್ಣಾವತಿ ಜಲಾಶಯಕ್ಕೆ ಶುಕ್ರವಾರ ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ್, ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಕಾಡಾ ಅಧ್ಯಕ್ಷ ಹೆಚ್.ಎಸ್. ನಂಜಪ್ಪ ಸೇರಿದಂತೆ ಅನೇಕ ಜನ ಪ್ರತಿನಿಧಿಗಳು ಆಗಮಿಸಿ, ಗಂಗಾಪೂಜೆ ಸಲ್ಲಿಸಿ ಭಾಗೀನ ಅರ್ಪಣೆ ಮಾಡಿದರು.

MP Dhruvanarayana offeres ‘bagina’ to Suvarnavathi dam at Chamarajanagar

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಆರ್. ಧ್ರುವನಾರಾಯಣ್, "ಕಳೆದೇಳು ವರ್ಷಗಳಿಂದ ಸುವರ್ಣಾವತಿ ಜಲಾಶಯ ಭರ್ತಿಯಾಗಿರಲಿಲ್ಲ.

ಪ್ರಸ್ತುತ ಉತ್ತಮ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯ ಭರ್ತಿಯಾಗಿದ್ದು, 1.2 ಟಿಎಂಸಿ ಸಂಗ್ರಹವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಜಲಾಶಯ ಗರಿಷ್ಟ ಮಟ್ಟ ತಲುಪಿದ್ದರಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಹೇಳಿದ ಅವರು, 13 ಸಾವಿರ ಎಕರೆ ಪ್ರದೇಶಕ್ಕೆ ಈ ಜಲಾಶಯದಿಂದ ಅನುಕೂಲವಾಗಲಿದೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chamarajanagar MP Dhruvanarayana on Friday offered ‘bagina’ at the Suvarnavathi reservoir in Attugulipura, Chamarajanagar.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ