ಭಾರೀ ಮಳೆಗೆ ಮುಳುಗಿದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ

ಚಾಮರಾಜನಗರ, ಮೇ, 17: ಶುಕ್ರವಾರ (ಮೇ 17) ಸಂಜೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಭರ್ಜರಿ ಮಳೆಯಾಗಿದೆ. ಈ ಹಿನ್ನೆಲೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಕೆರೆಯಂತಾಗಿದ್ದು, ಪರಿಣಾಮ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯು ಬೇಗೂರಿನಲ್ಲಿ ಹಾದು ಹೋಗಲಿದ್ದು, ಗುಂಡ್ಲುಪೇಟೆ, ಕೇರಳ, ತಮಿಳುನಾಡಿಗೆ ತೆರಳುವವರು ಮಳೆಯ ನೀರಿನ ಮಧ್ಯೆ ವಾಹನ ಚಲಾಯಿಸಲು ಹರಸಾಹಸಪಟ್ಟರು.

Mysuru-Ooty national highway flooded due to heavy rain

ಇನ್ನು ಬೇಗೂರು, ಬೆಳಚಲವಾಡಿ ಸುತ್ತಮುತ್ತಲೂ ಕೂಡ ಭರ್ಜರಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅಂತರ್ಜಲ ಮಟ್ಟ ಹೆಚ್ಚಿ ಕೊಳವೆಬಾವಿಗಳಲ್ಲಿ ಮತ್ತೇ ನೀರಿನ ಸಿಂಚನ ಹೊಮ್ಮುವ ನಿರೀಕ್ಷೆ ಮೂಡಿಸಿದೆ.

ಬಿರು ಬಿಸಿಲಿನ ಝಳಕ್ಕೆ ಒಣಗಿದ ಬೆಳೆ: ಮತ್ತೊಂದೆಡೆ ಬಿರು ಬಿಸಿಲಿನ ಝಳದಿಂದ ಒಣಗಿ ನಾಶವಾಗಿರುವ ಬೆಳೆ ಸಮೀಕ್ಷೆ ನಡೆಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರಿಗೆ ಜಿಲ್ಲಾ ರೈತರ ಒಕ್ಕೂಟ ಮತ್ತು ಕುಕ್ಕುವಾಡ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಸಂಘದಿಂದ ಮನವಿ ಪತ್ರ ಸಲ್ಲಿಸಿದೆ.

ನೀರಿಲ್ಲದೆ ಬಿರು ಬಿಸಿಲಿನ ಝಳ ಮತ್ತು ಬಿಸಿ ಹವೆ (ಉಷ್ಣಹವೆ) ಜ್ವಾಲೆಯಿಂದಾಗಿ ದಾವಣಗೆರೆ ಜಿಲ್ಲೆಯ ಕುಕ್ಕುವಾಡ ಗ್ರಾಮದಲ್ಲಿರುವ ದಾವಣಗೆರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ವಾರ್ಷಿಕ ಬೆಳೆ ಕಬ್ಬು ಮತ್ತು ಜಿಲ್ಲೆಯಾದ್ಯಂತ ಸುಮಾರು 10-20 ವರ್ಷಗಳಿಂದ ಬೆಳೆಸಿರುವ ಅಡಿಕೆ ಮತ್ತು ತೆಂಗಿನ ತೋಟಗಳು ಸಂಪೂರ್ಣ ಒಣಗಿ ನಾಶವಾಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರೈತರು ಭೀಕರ ಬರ ಮತ್ತು ಬಿಸಿಲಿನ ಝಳಕ್ಕೆ ಸಿಲುಕಿ ಬಸವಳಿದಿದ್ದಾರೆ. ರೈತರು ಸಾಕಿದ ಜಾನುವಾರುಗಳಿಗೆ ಮೇವು ಇಲ್ಲದೆ, ಕುಡಿಸಲು ನೀರು ಇಲ್ಲದೆ ಹಾಹಾಕಾರದಿಂದ ನರಳಿದ್ದಾರೆ. ಅಲ್ಲದೆ, ಮತ್ತೊಂದೆಡೆ ಅವೈಜ್ಞಾನಿಕ ವೇಳಾಪಟ್ಟಿಯಿಂದ ಭದ್ರಾ ನೀರು ಇಲ್ಲದೆ, ಮಳೆಯೂ ಇಲ್ಲದೆ, ಕೊಳವೆಬಾವಿಗಳು ನೀರಿಲ್ಲದೆ ಬತ್ತಿ ಹೋಗಿವೆ. ಬೇಸಿಗೆಯ ಬಿರು ಬಿಸಿಲಿನ ಹೊಡೆತಕ್ಕೆ ರೈತ ತತ್ತರಿಸಿ ಹೋಗಿದ್ದಾನೆ. ಕಾದ ಹೆಂಚಿನ ಮೇಲೆ ರೈತನ ಬದುಕು ಎಂಬಂತೆ ಆಗಿದೆ.

ರೈತರ ಹೊಲಗಳಿಗೆ ಭೇಟಿ ನೀಡಿ ಬಿಸಿಲಿನ ತಾಪಮಾನಕ್ಕೆ ನೀರಿಲ್ಲದೆ ಒಣಗಿ ನಾಶವಾಗಿರುವ ಬೆಳೆ ಸಮೀಕ್ಷೆ ನಡೆಸಬೇಕು. ಭದ್ರಾ ನೀರು ಇಲ್ಲದೆ, ಬಿಸಿಲಿನ ಝಳದಿಂದ ಒಣಗಿರುವ ಕಬ್ಬು, ಅಡಿಕೆ, ತೆಂಗು, ಬಾಳೆ ಬೆಳೆಗಳ ನಾಶದ ಅಂದಾಜನ್ನು ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು ಎಂದು ಹೇಳಿದ್ದಾರೆ.

ಈ ಬೆಳೆ ನಾಶದಿಂದ ಆಗಿರುವ ನಷ್ಟದ ಅಂದಾಜು ಮಾಡುವ ಸಮೀಕ್ಷೆಯಲ್ಲಿ ರೈತರು ಸಾಲ ಸೋಲ ಮಾಡಿ ಖರೀದಿಸಿ ಬಿತ್ತಿದ ಬೀಜ, ಹಾಕಿದ ಗೊಬ್ಬರ, ಕ್ರಿಮಿನಾಶಕಗಳ ವೆಚ್ಚ ಸೇರಿದಂತೆ ಜಮೀನು ಉಳುಮೆ, ರೈತನ ಕುಟುಂಬದ ಶ್ರಮ ಮತ್ತು ಕೂಲಿ ವೆಚ್ಚ ಸೇರಿಸಬೇಕು ಎಂದು ಒತ್ತಾಯಿಸಲಾಗಿದೆ.

ಅಂತರ್ಜಲ ಮಟ್ಟ ಕುಸಿದು ಬತ್ತಿರುವ ಕೊಳವೆಬಾವಿಗಳ ಸಮೀಕ್ಷೆ ನಡೆಸಿ ಅವುಗಳ ಅಂತರ್ಜಲ ಮಟ್ಟ ಮರುಪೂರಣ ಮಾಡುವ ಮೂಲಕ ಪುನರ್ಜೀವನಗೊಳಿಸಬೇಕು. ದನ ಕರುಗಳು ಕುರಿ- ಮೇಕೆಗಳು ಬಿಸಿಲಿನ ಝಳದಿಂದ ನರಳುತ್ತಿವೆ. ಇವು ಮೇವಿಲ್ಲದೆ, ಕುಡಿಯಲು ನೀರಿಲ್ಲದೆ ಬಡಕಲಾಗಿವೆ. ಈಗಾಗಲೇ ಕೆಲವು ಜಾನುವಾರುಗಳು ಸವನ್ನಪ್ಪಿವೆ. ಕೆಲವನ್ನು ರೈತರು ಸಾಕಾಲಾಗದೆ ಕೈಗೆ ಸಿಕ್ಕ ದರಕ್ಕೆ ಮಾರಾಟ ಮಾಡಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ನಷ್ಟದ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ ನೀಡಬೇಕು.

ಎಲ್ಲಾ ನಷ್ಟದ ಸಮೀಕ್ಷೆ ನಡೆಸಲು ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಜಂಟಿ ಜವಾಬ್ದಾರಿಯಿಂದ ಕರೆದು, ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಅಧಿಕಾರಿಗಳ ಸಮಿತಿ ರಚಿಸಬೇಕು ಎಂದು ಕೇಳಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+