ಉಪೇಂದ್ರ ಪ್ರಜಾಕೀಯ ಪಕ್ಷದ ಬಗ್ಗೆ ಯದುವೀರ್ ಒಡೆಯರ್ ಹೇಳಿದ್ದೇನು?
ಚಾಮರಾಜನಗರ, ನವೆಂಬರ್ 13: ನಟ ಉಪೇಂದ್ರ ಸ್ಥಾಪಿಸಿರುವ ಪ್ರಜಾಕೀಯ ಪಕ್ಷದ ಬಗ್ಗೆ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಹಾಡಿ ಹೊಗಳಿದ್ದಾರೆ
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುರುಬರಕಟ್ಟೆ ಗ್ರಾಮದಲ್ಲಿ ಸೋಮವಾರ ಶ್ರೀಧರೆಗೆ ದೊಡ್ಡವರ ಸಂಸ್ಥಾನ ಮಠದ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಯದುವೀರ್ ಒಡೆಯರ್, 'ಉಪೇಂದ್ರ ಪ್ರಜಾಕೀಯ ಪಕ್ಷ ಕಟ್ಟಿದ್ದು ಒಳ್ಳೆದಾಯಿತು, ಹೊಸ ಆಲೋಚನೆ ಇಟ್ಟುಕೊಂಡು ಪಕ್ಷ ಸ್ಥಾಪಿಸಿದ್ದಾರೆ, ಸ್ವತಂತ್ರವಾಗಿ ಮಾಡುತ್ತಿರುವುದು ಒಳ್ಳೆಯದು' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ್ಕೆ ಇನ್ನೊಂದು ಹೊಸ ಆಲೋಚನೆ ಬೇಕಾಗಿತ್ತು, ಆ ಹೊಸ ಆಲೋಚನೆ ಉಪೇಂದ್ರ ಅವರು ಮಾಡಿದ್ದಾರೆ, ಈ ಮೂಲಕ ಕರ್ನಾಟಕಕ್ಕೆ ಒಳ್ಳೆಯದು ಮಾಡಲಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಮ್ಮ ರಾಜಕೀಯ ನಡೆಯ ಬಗ್ಗೆ ಮಾತನಾಡಿದ ಯದುವೀರ್, ನನಗೆ ಸದ್ಯಕ್ಕೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications