ಏಪ್ರಿಲ್ 9ರಂದು ಬಂಡೀಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಸ್ಥಳ ಪರಿಶೀಲನೆ ಮಾಡಿದ ಎಡಿಜಿಪಿ ಅಲೋಕ್ ಕುಮಾರ್
ಚಾಮರಾಜನಗರ, ಏಪ್ರಿಲ್, 05: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಈ ಹಿನ್ನೆಲೆ ರಾಜ್ಯ ಬಿಜೆಪಿ ನಾಯಕರು ಯಾವುದಾದರೊಂದು ಕಾರಣ ಇಟ್ಟುಕೊಂಡು ರಾಜ್ಯಕ್ಕೆ ಪ್ರಧಾನಿ ಮೋದಿಯವರನ್ನು ಪದೇ ಪದೇ ಆಹ್ವಾನ ಮಾಡುತ್ತಲೇ ಇದ್ದಾರೆ. ಇದೀಗ ಮತ್ತೆ ಪ್ರಧಾನಿ ಅವರು ಏಪ್ರಿಲ್ 9ರಂದು ಬಂಡೀಪುರಕ್ಕೆ ಭೇಟಿ ನೀಡಲಿದ್ದು, ಎಡಿಜಿಪಿ ಅಲೋಕ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರ ಬಂಡೀಪುರ ಭೇಟಿಗೆ ದಿನಗಣನೆ ಆರಂಭವಾಗಿದ್ದು, ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಕಲ ತಯಾರಿ ನಡೆಸುತ್ತಿದೆ. ಯಾವುದೇ ಅಹಿತಕರ ಹಾಗೂ ಭದ್ರತಾ ಲೋಪ ಉಂಟಾಗದ ರೀತಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳುವ ಉದ್ದೇಶದಿಂದ ಎಡಿಜಿಪಿ ಅಲೋಕ್ ಕುಮಾರ್ ಅವರು ಬಂಡೀಪುರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬಂಡೀಪುರ ಸಫಾರಿ ಕೇಂದ್ರದ ಸಮೀಪವೇ 3 ಹೆಲಿಪ್ಯಾಡ್ ನಿರ್ಮಾಣ ಆಗುತ್ತಿದ್ದು, ಸಾರ್ವಜನಿಕರು, ಅಭಿಮಾನಿಗಳನ್ನು ನಿಯಂತ್ರಿಸಲು ಸೂಕ್ತ ಬ್ಯಾರಿಕೇಡ್, ಕಾಂಪೌಂಡ್ ವ್ಯವಸ್ಥೆ ಇರಬೇಕು. ವನ್ಯಜೀವಿಗಳು ರಸ್ತೆ ದಾಟುವಾಗ ನಿಗಾವಹಿಸಬೇಕು. ಜೊತೆಗೆ ಐಜಿಪಿ ಮಧುಕರ್ ಪವಾರ್ ಹಾಗೂ ಚಾಮರಾಜನಗರ ಎಸ್‌ಪಿ ಪದ್ಮಿನಿ ಸಾಹೋ ಅವರಿಗೆ ಇತರೆ ಸೂಚನೆಗಳನ್ನು ಕೊಟ್ಟಿದ್ದಾರೆ.
ಏಪ್ರಿಲ್ 9ರಂದು ಮೋದಿ ಆಗಮನ
ಏಪ್ರಿಲ್ 9ರಂದು ಬಂಡೀಪುರಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ನರೇಂದ್ರ ಮೋದಿ ಬರಲಿದ್ದು, ಅಲ್ಲಿನ ಸಫಾರಿ, ರಾಂಪುರ ಆನೆ ಶಿಬಿರಕ್ಕೆ ಭೇಟಿ ಕೊಡಲಿದ್ದಾರೆ. ಹಾಗೆಯೇ ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ. ಬಳಿಕ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಧಾನಿ ಮೋದಿ ಅವರ ಅಧಿಕೃತ ಪ್ರವಾಸ ಪಟ್ಟಿ ಇನ್ನೂ ಕೂಡ ಬಿಡುಗಡೆ ಆಗಿಲ್ಲ. ಆದರೆ, ಪ್ರಧಾನಿ ಬಂಡೀಪುರಕ್ಕೆ ಭೇಟಿ ಕೊಡುವ ಸಾಧ್ಯತೆ ಹೆಚ್ಚಾಗಿದೆ.

ಕಾರ್ಯಕ್ರಮಗಳ ವಿವರ ಇಲ್ಲಿದೆ
ಭಾರತಕ್ಕೆ ಪ್ರತಿಷ್ಠಿತ ಆಸ್ಕರ್ ಗರಿ ತಂದುಕೊಟ್ಟ "ಎಲಿಫೆಂಟ್ ವಿಸ್ಪರರ್ಸ್" ಡಾಕ್ಯುಮೆಂಟರಿಯಲ್ಲಿ ಅಭಿನಯಿಸಿರುವ ಬೊಮ್ಮನ್ ಹಾಗೂ ಬೆಳ್ಳಿ ಅವರನ್ನು ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಆಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾವುತ ದಂಪತಿಗಳನ್ನು ಭೇಟಿಯಾಗಿ ಅಭಿನಂದನೆ ತಿಳಿಸಲಿದ್ದು, ಇದ್ದಕ್ಕಾಗಿ ಮೋದಿ ಪ್ರವಾಸ ಪಟ್ಟಿಯೂ ತಯಾರಾಗಿದೆ.
ಬಂಡೀಪುರ ಗಡಿ ಭಾಗದಿಂದ ಮುಧುಮಲೈ ಆನೆ ಶಿಬಿರಕ್ಕೆ 6 ಕಿಲೋ ಮೀಟರ್ ಇದೆ. ಹಾಗಾಗಿ ನರೇಂದ್ರ ಮೋದಿಯವರು ಬಂಡೀಪುರದಲ್ಲಿ ಸಾರಿ ಮುಗಿಸಿ ಮಾವುತ ದಂಪತಿಗಳನ್ನು ಭೇಟಿ ಆಗಲಿದ್ದಾರೆ. ಅಲ್ಲದೆ ಅವರೊಂದಿಗೆ ಸಂವಾದ ನಡೆಸಿ ಆಸ್ಕರ್ ಪ್ರಶಸ್ತಿ ಬಂದಿರುವುದಕ್ಕೆ ಅಭಿನಂದನೆಯನ್ನೂ ತಿಳಿಸಲಿದ್ದಾರೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಹುಲಿ ಗಣತಿ ವರದಿ ಬಿಡುಗಡೆ ಕಾರ್ಯಕ್ರಮದಲ್ಲೂ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಮೋದಿ ಅವರ ಅಧಿಕೃತ ಪ್ರವಾಸ ಪಟ್ಟಿ ಇನ್ನೂ ಬಿಡುಗಡೆ ಆಗಿಲ್ಲ. ಆದರೂ ಬಂಡೀಪುರ ಹಾಗೂ ಮೈಸೂರಿಗೆ ಪ್ರಧಾನಿಯವರ ಭೇಟಿ ಬಹುತೇಕ ಖಚಿತವಾಗಿದೆ.
ಏಪ್ರಿಲ್ 9ರಂದು ವಿಶೇಷ ಹೆಲಿಕಾಪ್ಟರ್ ಮೂಲಕ ಬಂಡೀಪುರಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿಯವರು ಸಾರಿ ನಡೆಸುವ ಮೂಲಕ ಗಮನ ಸೆಳೆಯಲಿದ್ದಾರೆ. ನಂತರ ರಾಂಪುರ ಆನೆ ಶಿಬಿರಕ್ಕೆ ಭೇಟಿ ಕೊಡಲಿದ್ದು, ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ.
ಒಟ್ಟಿನಲ್ಲಿ ಪ್ರಧಾನಿ ಅವರ ಭೇಟಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು. ಹಾಗೂ ಭದ್ರತಾ ಲೋಪ ಉಂಟಾಗದಂತೆ ನೋಡಿಕೊಳ್ಳುವುದು ಗೃಹ ಇಲಾಖೆಯ ಜವಾಬ್ದಾರಿಯೂ ಆಗಿರುತ್ತದೆ. ಆದ್ದರಿದ ಪ್ರಧಾನಿಯವರಿಗೆ ಬಿಗಿಭದ್ರತೆ ಕೈಗೊಳ್ಳುವ ಉದ್ದೇಶದಿಂದ ಎಡಿಜಿಪಿ ಅಲೋಕ್ ಕುಮಾರ್ ಬಂಡೀಪುರಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications