15 ದಿನದೊಳಗೆ ಕರ್ನಾಟಕದಲ್ಲಿ ಹೊಸ ಮರಳು ನೀತಿ ಜಾರಿ

ಚಾಮರಾಜನಗರ, ಮೇ 23; "ರಾಜ್ಯದಲ್ಲಿ ಇನ್ನು ಹದಿನೈದು ದಿನದೊಳಗಾಗಿ ಹೊಸ ಮರಳು ನೀತಿ ಹಾಗೂ ಗಣಿ ನೀತಿಯನ್ನು ಜಾರಿಗೆ ತರಲಾಗುವುದು" ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಮುರುಗೇಶ ಆರ್. ನಿರಾಣಿ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, "ಹೊಸ ಮರಳು ಹಾಗೂ ಗಣಿ ನೀತಿ ಜಾರಿಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಪ್ರತಿಯನ್ನು ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟವರಿಗೆ ಕಳುಹಿಸಲಾಗಿದ್ದು, ಈ ಕುರಿತು ವ್ಯಕ್ತವಾಗುವ ಅನಿಸಿಕೆ, ಅಭಿಪ್ರಾಯಗಳನ್ನು ಪಡೆದು ನೂತನ ಮರಳು ನೀತಿ ಹಾಗೂ ಗಣಿ ನೀತಿಯನ್ನು ಜಾರಿಗೆ ತರಲಾಗುವುದೆಂದು" ತಿಳಿಸಿದರು.

"ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಆಡಳಿತದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗುತ್ತಿದೆ. ಹೊಸ ಗಣಿ ನೀತಿಯನ್ನು ತರಲಾಗುತ್ತಿದ್ದು, ತ್ವರಿತ ಕಾರ್ಯನಿರ್ವಹಣೆ ಹಾಗೂ ಸರಳೀಕರಣಕ್ಕಾಗಿ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತಿದೆ. ಇಲಾಖೆಯ ಅಧಿಕಾರಿಗಳಿಗೆ ಪೊಲೀಸರಂತೆ ಸಮವಸ್ತ್ರ, ಪ್ರತ್ಯೇಕ ವಾಹನ, ಮೈನಿಂಗ್‌ಗಳಿಗೆ ತೆರಳುವಾಗ ಸೆಕ್ಯೂರಿಟಿ ಗಾರ್ಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ" ಎಂದರು.

New Sand Policy Will Implement In Karnataka In 15 Days

"ಮರಳನ್ನು ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಎತ್ತಿನ ಗಾಡಿಯಲ್ಲಿ ಸಣ್ಣ ಪ್ರಮಾಣದಲ್ಲಿ ಸ್ವಂತ ಬಳಕೆಗೆ ಸಾಗಿಸುವವರ ವಿರುದ್ಧ ಎಫ್ಐಆರ್ ದಾಖಲು ಮಾಡಬಾರದೆಂದು ಸೂಚಿಸಲಾಗಿದೆ" ಎಂದು ಸಚಿವರು ಸ್ಪಷ್ಟಪಡಿಸಿದರು.

"ಕೊಳ್ಳೇಗಾಲ ಭಾಗದಲ್ಲಿ ಇಂತಹ ಪ್ರಕರಣಗಳು ದಾಖಲಾಗಿರುವ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಸ್ವಂತ ಬಳಕೆಗಾಗಿ ಮನೆ, ಅಭಿವೃದ್ಧಿ ನಿರ್ಮಾಣ ಕೆಲಸಗಳಿಗೆ ಸಣ್ಣ ಪ್ರಮಾಣದಲ್ಲಿ ಮರಳು ಸಾಗಿಸುವವರ ವಿರುದ್ಧ ಕ್ರಮ ಕೈಗೊಳ್ಳದಂತೆ" ತಿಳಿಸಲಾಗಿದೆ ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+