ಮಲೆಮಹದೇಶ್ವರ ವನ್ಯಧಾಮದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

Recommended Video

      ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ಪ್ರವೇಶ ನಿರ್ಬಂಧ | Oneindia Kannada

      ಬೆಂಗಳೂರು, ಜುಲೈ 31 : ಮಲೆಮಹದೇಶ್ವರ ವನ್ಯಧಾಮ, ಕಾವೇರಿ ವನ್ಯಧಾಮದಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ನಿಷೇಧಿಸುವ ಸಾಧ್ಯತೆ ಇದೆ. ಅರಣ್ಯ ಇಲಾಖೆ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ.

      ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಮಲೆಮಹದೇಶ್ವರ ಮತ್ತು ಅದಕ್ಕೆ ಹೊಂದಿಕೊಂಡಂತಿರುವ ಕಾವೇರಿ ವನ್ಯಧಾಮವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

      ಬಂಡೀಪುರ ಮತ್ತು ನಾಗರಹೊಳೆ ವನ್ಯಧಾಮದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ಈಗಾಗಲೇ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ. ಇದರಿಂದ ಪ್ರಾಣಿಗಳಿಗೆ ಸಹಾಯಕವಾಗಿದ್ದು, ಅಪಘಾತದಲ್ಲಿ ಕಾಡು ಪ್ರಾಣಿಗಳು ಮೃತಪಡುವ ಸಂಖ್ಯೆಯೂ ಕಡಿಮೆಯಾಗಿದೆ.

      Night traffic may ban in MM Hills Wildlife Sanctuary

      ಇದೇ ಮಾದರಿಯಲ್ಲಿ ಮಲೆಮಹದೇಶ್ವರ ಮತ್ತು ಅದಕ್ಕೆ ಹೊಂದಿಕೊಂಡಂತಿರುವ ಕಾವೇರಿ ವನ್ಯಧಾಮದಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6ಗಂಟೆಯ ತನಕ ವಾಹನ ಸಂಚಾರ ನಿಷೇಧಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಎರಡು ಮೂರು ತಿಂಗಳಿನಲ್ಲಿ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

      ರಸ್ತೆಯ ಆರಂಭದಲ್ಲಿ ವಾಹನ ಸಂಚಾರವನ್ನು ತಡೆಯಲು ಗೇಟ್ ನಿರ್ಮಿಸಲಾಗುತ್ತದೆ. ಕೊಳ್ಳೇಗಾಲ-ಸತ್ಯಮಂಗಲ ಸಂಪರ್ಕಿಸುವ ರಾಜ್ಯ ಹೆದ್ದಾರಿ 38 ಮಲೆಮಹದೇಶ್ವರ ವನ್ಯಧಾಮದ ಮೂಲಕ ಹಾದು ಹೋಗುತ್ತದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+