ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೋ ವ್ಯಾಕ್ಸಿನ್, ನೋ ರೇಷನ್; ಜಿಲ್ಲಾಡಳಿತದ ಸ್ಪಷ್ಟನೆ

|
Google Oneindia Kannada News

ಚಾಮರಾಜನಗರ, ಸೆಪ್ಟೆಂಬರ್ 01; ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಇಲ್ಲ ಎಂದು ಚಾಮರಾಜನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹಲವರು ಈ ಆದೇಶಕ್ಕೆ ವಿರೋಧ ಸಹ ವ್ಯಕ್ತಪಡಿಸಿದ್ದರು.

Recommended Video

ಆಕ್ಸಿಜನ್‌ ಪೂರೈಕೆ ಮಾಡಲಾಗದವರು ಈಗ ರೇಶನ್‌,ಪೆನ್ಷನ್‌ ಕೊಡಲ್ಲ ಅಂತಿದ್ದಾರೆ | D K Shivakumar | Oneindia Kannada

ನೋ ವ್ಯಾಕ್ಸಿನೇಷನ್, ನೋ ರೇಷನ್, ನೋ ಪೆನ್ಷನ್ ಎಂಬ ಶೀರ್ಷಿಕೆಯಡಿ ಕೆಲವು ಮಾಧ್ಯಮಗಳಲ್ಲಿ ಸಹ ಸುದ್ದಿಗಳು ಪ್ರಕಟವಾಗಿತ್ತು. ಬುಧವಾರ ಈ ಕುರಿತು ಚಾಮರಾಜನಗರ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಜನರಲ್ಲಿ ಉಂಟಾಗಿದ್ದ ಗೊಂದಲಗಳಿಗೆ ತೆರೆ ಎಳೆದಿದೆ.

ಚಾಮರಾಜನಗರ: ಸಾಂಬಾರ್ ಈರುಳ್ಳಿ ಬೆಳೆದ ರೈತನಿಗೆ ಸಂಕಷ್ಟ!ಚಾಮರಾಜನಗರ: ಸಾಂಬಾರ್ ಈರುಳ್ಳಿ ಬೆಳೆದ ರೈತನಿಗೆ ಸಂಕಷ್ಟ!

ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಈ ಕುರಿತು ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಇಲ್ಲ ಎಂಬ ಶೀರ್ಷಿಕೆಯಡಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ವರದಿಯಾಗಿರುವುದನ್ನು ಗಮನಿಸಲಾಗಿದೆ.

ಕೊರೊನಾ ಲಸಿಕೆ ವಿತರಣೆಯಲ್ಲಿ ಮತ್ತೊಂದು ದಾಖಲೆ ಬರೆದ ಭಾರತಕೊರೊನಾ ಲಸಿಕೆ ವಿತರಣೆಯಲ್ಲಿ ಮತ್ತೊಂದು ದಾಖಲೆ ಬರೆದ ಭಾರತ

No Covid Vaccine No Ration Clarification By Chamarajanagar DC

ಜಿಲ್ಲಾಡಳಿತದಿಂದ ಈ ಸಂಬಂಧ ಯಾವುದೇ ಅಧಿಕೃತ ಆದೇಶ ಹೊರಡಿಸಲಾಗಿಲ್ಲ. ಹೀಗಾಗಿ ಪಡಿತರದಾರರಿಗೆ ಹಾಗೂ ಪಿಂಚಣಿದಾರರಿಗೆ ಸೌಲಭ್ಯ ನಿರಾರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಈ ಮೂಲಕ ಸ್ಪಷ್ಟನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಒಂದೇ ದಿನ 1 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆಭಾರತದಲ್ಲಿ ಒಂದೇ ದಿನ 1 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

ಈ ಸುದ್ದಿಯ ಬಗ್ಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಹ ಪ್ರತಿಕ್ರಿಯೆ ನೀಡಿದ್ದರು. "ನೋ ವ್ಯಾಕ್ಸಿನ್, ನೋ ಪೆನ್ಷನ್, ನೋ ರೇಷನ್ ವಿಚಾರ ಸರ್ಕಾರದ ತೀರ್ಮಾನವಲ್ಲ. ಈ ರೀತಿಯಾಗಿ ಹೇಳಿದ್ದರೆ ಅದನ್ನು ಸರ್ಕಾರ ಸಹ ಒಪ್ಪುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದರು.

"ಚಾಮರಾಜನಗರ ಜಿಲ್ಲಾಧಿಕಾರಿಗಳು ಲಸಿಕೆ ಹಾಕಿಸಿಕೊಳ್ಳಿ ಎಂದು ಜಾಗೃತಿ ಮೂಡಿಸುವಾಗ ಈ ರೀತಿ ಹೇಳಿರಬಹುದು. ಈ ಬಗ್ಗೆ ಅವರ ಜೊತೆ ಮಾತನಾಡುತ್ತೇನೆ. ಲಸಿಕೆ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವಿ ಮಾಡುತ್ತೇನೆ" ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದ್ದರು.

ಸುದ್ದಿ ಏನಾಗಿತ್ತು?; ಜನರ ಆರೋಗ್ಯದ ಹಿತದೃಷ್ಟಿಯಿಂದ ಚಾಮರಾಜನಗರ ಜಿಲ್ಲಾಡಳಿತ ಸೆಪ್ಟೆಂಬರ್ 1ರಿಂದ ನೋ ವ್ಯಾಕ್ಸಿನ್, ನೋ ರೇಷನ್, ನೋ ಪೆನ್ಷನ್ ಎಂಬ ಕಾರ್ಯಕ್ರಮ ಜಾರಿಗೆ ತರಲಿದೆ. ಲಸಿಕೆ ಪಡೆಯದೇ ನಿರ್ಲಕ್ಷ್ಯ ವಹಿಸುವ ಜನರಿಗೆ ಬಿಸಿ ಮುಟ್ಟಿಸಲು ಈ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂಬ ಸುದ್ದಿ ಹಬ್ಬಿತ್ತು.

ಚಾಮರಾಜನಗರ ಜಿಲ್ಲೆಯಲ್ಲಿ ಆಗಸ್ಟ್ 27ರಿಂದ ಕೋವಿಡ್ ಲಸಿಕೆ ನೀಡುವ ಮಹಾಮೇಳ ನಡೆಯುತ್ತಿದೆ. 238 ತಂಡ, 27 ಮೊಬೈಲ್ ತಂಡಗಳು ಲಸಿಕೆ ನೀಡುವ ಕಾರ್ಯದಲ್ಲಿ ತೊಡಗಿವೆ. ಈಗಾಗಲೇ ಜಿಲ್ಲೆಯಲ್ಲಿ ಶೇ 75ರಷ್ಟು ಲಸಿಕೆ ನೀಡಲಾಗಿದೆ.

ಆದರೂ ಸಹ ಜಿಲ್ಲೆಯಲ್ಲಿ ಇನ್ನೂ ಕೆಲವು ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಆದ್ದರಿಂದ ನೋ ವ್ಯಾಕ್ಸಿನ್, ನೋ ರೇಷನ್, ನೋ ಪೆನ್ಷನ್ ಯೋಜನೆ ಜಾರಿಗೊಳಿಸಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು.

ಚಾಮರಾಜನಗರ ಜಿಲ್ಲಾಡಳಿತ ಆದೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಪರ-ವಿರೋಧ ಚರ್ಚೆ ನಡೆದಿತ್ತು.

English summary
Dr. M. R. Ravi deputy commissioner of Chamarajanagar clarification on no Covid vaccine and no ration order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X