ಮಲೆ ಮಾದೇಶ್ವರ ದೇವಾಲಯದ ಭಕ್ತರ ಗಮನಕ್ಕೆ
ಚಾಮರಾಜನಗರ, ಆಗಸ್ಟ್ 14 : ಚಾಮರಾಜನಗರ ಜಿಲ್ಲಾಡಳಿತ ಆಗಸ್ಟ್ 17 ರಿಂದ 19ರ ತನಕ ಮಲೆ ಮಾದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.
Recommended Video
ಮಲೆ ಮಾದೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದಲ್ಲಿ ಪ್ರತಿ ವರ್ಷದಂತೆ ಎಣ್ಣೆ ಮಜ್ಜನ, ಅಮಾವಾಸ್ಯೆ ವಿಶೇಷ ಪೂಜೆ, 108 ಕುಂಭಾಭಿಷೇಕ, ಸಹಸ್ರ ಅಭಿಷೇಕಗಳು ನಡೆಯಲಿವೆ.
ಈ ಸಂದರ್ಭದಲ್ಲು ದೇವಾಲಯಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದರು. ಆದರೆ, ಈ ಬಾರಿ ಕೋವಿಡ್ ಪರಿಸ್ಥಿತಿ ಕಾರಣ ಮೂರು ದಿನಗಳ ಕಾಲ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ನಿಷೇಧ ಹೇರಲಾಗಿದೆ.

ಎಣ್ಣೆ ಮಜ್ಜನ, ಅಮಾವಾಸ್ಯೆ ವಿಶೇಷ ಪೂಜೆಗಳ ಸಮಯದಲ್ಲಿ ನೂರಾರು ಭಕ್ತರು ಆಗಮಿಸಿದರೆ ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಭಕ್ತರ ಭೇಡಿಗೆ ನಿರ್ಬಂಧ ಹಾಕಲಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ವಿ. ಆರ್. ರವಿ ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಕಾಲ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಬಿಟ್ಟು ಬೇರೆ ಯಾರೂ ಸಹ ಭೇಡಿ ನೀಡುವಂತಿಲ್ಲ ಎಂದು ಹೇಳಿದ್ದಾರೆ.
ಚಾಮರಾಜನಗರದಲ್ಲಿ ಶುಕ್ರವಾರ 61 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1484ಕ್ಕೆ ಏರಿಕೆಯಾಗಿದೆ.












Click it and Unblock the Notifications