ನನ್ನ ಕುರ್ಚಿ ಗಟ್ಟಿಯಾಗುತ್ತಿದೆ, ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರ, ಆಗಸ್ಟ್, 10: ಕೊಳ್ಳೇಗಾಲ ತಾಲೂಕಿನ ಭರಚುಕ್ಕಿಯಲ್ಲಿ ಜಲಪಾತೋತ್ಸವ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎನ್ನುತ್ತಿದ್ದರು. ಆದರೆ, ಮೊದಲ ಸಿಎಂ ಅವಧಿಯಲ್ಲಿ 15ಕ್ಕೂ ಹೆಚ್ಚು ಬಾರಿ ಭೇಟಿ ಕೊಟ್ಟಿದ್ದೆ. ಎರಡನೇ ಅವಧಿಯಲ್ಲಿ 5ನೇ ಬಾರಿ ಭೇಟಿ ಕೊಟ್ಟಿದ್ದೇನೆ ಎಂದರು.
ಚಾಮರಾಜನಗರಕ್ಕೆ ಬಂದಾಗಲೆಲ್ಲಾ ನನ್ನ ಕುರ್ಚಿ ಗಟ್ಟಿಯಾಗುತ್ತಿದೆ. ಕೆಲವರು ಕುರ್ಚಿ ಅಲ್ಲಾಡಿಸುತ್ತಿದ್ದಾರೆ. ಅವರು ಅಲ್ಲಾಡಿಸುತ್ತಿರಲಿ, ನನ್ನನ್ನು ಏನೂ ಮಾಡುವುದಕ್ಕೆ ಆಗುವುದಿಲ್ಲ. ನನ್ನ ಕುರ್ಚಿ ಇನ್ನೂ ಗಟ್ಟಿ ಆಗುತ್ತಲೇ ಇರುತ್ತದೆ ಎಂದು ಬಿಜೆಪಿ-ಜೆಡಿಎಸ್ ವಿರುದ್ಧ ಸಿಎಂ ಲೇವಡಿ ಮಾಡಿದರು.

ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ ಎಂದರು. ಇನ್ನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರುತ್ತೇನೆ ಎಂದರು.
ಸಿದ್ದರಾಮಯ್ಯರ ಕಾಲುಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆಯಾಗಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದ್ದರಿಂದ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದರು. ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡಲಿದೆ. ಅಗತ್ಯವಿದ್ದರೆ, ಹೊಸ ಪ್ರವಾಸೋದ್ಯಮ ನೀತಿಯನ್ನೂ ರಚಿಸಲಾಗುವುದು ಎಂದು ಭರವಸೆ ನೀಡಿದರು.
ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುಬರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕವಾಗಿ ವೇಗದ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಈ ವೇಳೆ ಸಚಿವರಾದ ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್, ಶಿವರಾಜ ತಂಗಡಗಿ, ಶಾಸಕರಾದ ಹನೂರು ಮಂಜುನಾಥ್, ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಸಂಸದರಾದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.
ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿದ ಯುವಕ: ಸಿಎಂ ಸಿದ್ದರಾಮಯ್ಯಗೆ ಯುವಕೊನೊಬ್ಬ ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ಕೊಳ್ಳೇಗಾಲದ ಆನಂದ ಜ್ಯೋತಿ ಕಾಲೋನಿಯಲ್ಲಿ ಶನಿವಾರ (ಆಗಸ್ಟ್ 10) ಸಂಜೆ ನಡೆಯಿತು. ಹಾಗಾದರೆ ಮುಂದೇನಾಯ್ತು ಎನ್ನುವ ಇಂಚಿಂಚು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಲು ತೆರಳುವಾಗ ಕೊಳ್ಳೇಗಾಲದ ಆನಂದ ಜ್ಯೋತಿ ಬಡಾವಣೆ ಸಮೀಪ ಇರಸವಾಡಿ ಪ್ರಸನ್ನ ಎಂಬ ಯುವಕ ಬೆಂಗಾವಲು ವಾಹನದ ಜೊತೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು.
ದಲಿತರಿಗೆ ಮೀಸಲಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪ್ರಸನ್ನ ಧಿಕ್ಕಾರದ ಘೋಷಣೆ ಕೂಗಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಇನ್ನು ಈ ವೇಳೆ ಅಲ್ಲೇ ಸ್ಥಳದಲ್ಲೇ ಬಂದೋಬಸ್ತ್‌ನಲ್ಲಿದ್ದ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications