ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ 76 ಅಭ್ಯರ್ಥಿಗಳಿಂದ ನಾಮಪತ್ರಗಳ ಸಲ್ಲಿಕೆ, ಇಲ್ಲಿದೆ ವಿವರ
ಚಾಮರಾಜನಗರ, ಏಪ್ರಿಲ್, 20: ವಿಧಾನಸಭಾ ಚುನಾವಣೆಗೆ ಮೆ 10ಕ್ಕೆ ದಿನಾಂಕ ನಿಗದಿ ಆಗಿದ್ದು, ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕಡೆಯ ದಿನವಾಗಿದ್ದು, ಇಂದು ಜಿಲ್ಲೆಯಲ್ಲಿ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಇದುವರೆಗೆ 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹರೀಶ್.ಕೆ., ಜಾತ್ಯತೀತ ಜನಾತಾದಳ ಅಭ್ಯರ್ಥಿಯಾಗಿ ಎಂ.ಆರ್.ಮಂಜುನಾಥ್, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಮಾದೇಶ.ಎಂ., ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ.ಪ್ರೀತನ್. ಕೆ.ಎನ್., ಪಕ್ಷೇತರ ಅಭ್ಯರ್ಥಿಯಾಗಿ ಸಿ. ಸಿದ್ದಾರ್ಥನ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ನಿಂಗರಾಜ್. ಜಿ., ಭಾರತೀಯ ಬೆಳಕು ಪಾರ್ಟಿ ಅಭ್ಯರ್ಥಿಯಾಗಿ ವಿನೋದ್.ಎಸ್., ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳಾಗಿ ನಾಗರಾಜು, ರೇಖಾ, ಇಂಡಿಯನ್ ಮೂವ್‍ಮೆಂಟ್ ಪಾರ್ಟಿ ಅಭ್ಯರ್ಥಿಯಾಗಿ ಕೆ.ಹೆಚ್.ಅಂಜನಮೂರ್ತಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ರಾಜೇಶ್.ಎಂ., ಮಹಾದೇವ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಡಾ. ಎನ್.ಗುರುಪ್ರಸಾದ್, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಂ. ನಾಗೇಂದ್ರ ಬಾಬು, ಕರ್ನಾಟಕ ಜನಾತದಳ (ಜಾತ್ಯತೀತ) ಅಭ್ಯರ್ಥಿಯಾಗಿ ಮಲ್ಲಿಕಾರ್ಜುನಸ್ವಾಮಿ.ಎ.ಎಂ, ಪಕ್ಷೇತರ ಅಭ್ಯರ್ಥಿಗಳಾಗಿ ಚೇತನ.ವಿ., ಎಂ.ಮೂರ್ತಿ, ವೈ.ಆರ್.ವಿಜಯ ಉಪ್ಪಾರ, ಮಹದೇವಸ್ವಾಮಿ.ಎಸ್., ಬಿ.ಎಂ.ಮಹದೇವಸ್ವಾಮಿ, ನಾಗಮಣಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸಿ.ಎಸ್. ನಿರಂಜನ್ ಕುಮಾರ್ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ಗಣೇಶ್ ಪ್ರಸಾದ್, ಪಕ್ಷೇತರ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ದೀಪಕ್ ಚಿಂಚೋರೆ
ಇನ್ನು ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆ ಅವರು ಗುರುವಾರ (ಏಪ್ರಿಲ್ 20) ಅಧಿಕೃತವಾಗಿ ತಮ್ಮ ನಾಮಪತ್ರ ಸಲ್ಲಿಸಿದರು. ಧಾರವಾಡದ ಕೆಸಿಡಿ ವೃತ್ತದ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಚಿಂಚೋರೆ, ಅಲ್ಲಿಂದ ತೆರೆದ ವಾಹನದ ಮೂಲಕ ಅದ್ಧೂರಿ ಮೆರವಣಿಗೆ ಮೂಲಕ ಪಾಲಿಕೆ ಕಚೇರಿಗೆ ಬಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಗಣಪತಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡದವರು ಪಾಲ್ಗೊಂಡಿದರು. ಹೀಗೆ ಮೆರವಣಿಗೆಯಲ್ಲಿ ಸಾವಿರಾರು ಜನ ಪಾಲ್ಗೊಂಡು ದೀಪಕ್ ಚಿಂಚೋರೆ ಅವರ ಪರವಾಗಿ ಜಯಘೋಷವನ್ನು ಮೊಳಗಿಸಿದರು. ಈ ಮೂಲಕ ಚಿಂಚೋರೆ ಅವರ ಸ್ಪರ್ಧೆಯಿಂದ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರ ತೀವ್ರ ರಂಗು ಪಡೆದುಕೊಂಡಿದೆ.
ತೆರೆದ ವಾಹನದ ಮೂಲಕ ನಡೆದ ಮೆರವಣಿಗೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಆರ್.ಕೆ.ಪಾಟೀಲ, ಹೇಮಂತ ಗುರ್ಲಹೊಸೂರ ಅವರು ಚಿಂಚೋರೆ ಅವರಿಗೆ ಸಾಥ್ ನೀಡಿದರು. ಒಟ್ಟಾರೆ ಚಿಂಚೋರೆ ಕೂಡ ಶಕ್ತಿ ಪ್ರದರ್ಶನದೊಂದಿಗೆ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.












Click it and Unblock the Notifications