ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಅಕ್ರಮ ಕಟ್ಟಡಗಳ ತೆರವಿಗೆ ನೋಟಿಸ್

|
Google Oneindia Kannada News

ಚಾಮರಾಜನಗರ, ಮೇ 31: ಬಂಡೀಪುರ ಹುಲಿ ಸಂರಕ್ಷಿತಾರಣ್ಯದದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವವ ಕ್ರಮಕ್ಕೆ ಜಿಲ್ಲಾಧಿಕಾರಿ ಮುಂದಾಗಿದ್ದಾರೆ.

ಎಂಟು ಮಂದಿಗೆ ಕಟ್ಟಡ ತೆರವುಗೊಳಿಸಲು ಜಿಲ್ಲಾಧಿಕಾರಿ ಡಾ. ಎಂಆರ್‌ವಿ ಅವರು ಸೂಚನೆ ನೀಡಿದ್ದಾರೆ.ಅಲ್ಲದೇ ಇನ್ನು ಉಳಿದ 7 ಅಕ್ರಮ ಕಟ್ಟಡ ಸಂಬಂಧ ಕ್ರಮಕ್ಕೆ ಜಿಲ್ಲಾಧಿಕಾರಿಯವರು ಮುಂದಾಗಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯವೆಂದು ಕೇಂದ್ರಸರ್ಕಾರ 2012ರ ಅಕ್ಟೋಬರ್ 4ರಂದು ಅಧಿಸೂಚನೆ ಹೊರಡಿಸಿತ್ತು.

ಬಂಡೀಪುರದಲ್ಲಿ ಚಿತ್ರೀಕರಣಕ್ಕೆ ವಿರೋಧ ಕೇಳಿಬಂದಿದ್ದೇಕೆ?ಬಂಡೀಪುರದಲ್ಲಿ ಚಿತ್ರೀಕರಣಕ್ಕೆ ವಿರೋಧ ಕೇಳಿಬಂದಿದ್ದೇಕೆ?

ಬಂಡೀಪುರ ರಾಷ್ಟ್ರೀಯ ಉದ್ಯಾನವನ ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಇರುವ ಒಂದು ರಾಷ್ಟ್ರೀಯ ಉದ್ಯಾನವನ. ತಮಿಳುನಾಡಿನ ಮದುಮಲೈ ರಾಷ್ಟ್ರೀಯ ಉದ್ಯಾನವನ ಮತ್ತು ಕೇರಳದ ವಾಯ್ನಾಡ್ ವನ್ಯಜೀವಿ ಅಭಯಾರಣ್ಯ ಇದಕ್ಕೆ ಹೊಂದಿಕೊಂಡಿದೆ. ಪ್ರಾಜೆಕ್ಟ್ ಟೈಗರ್ ಕ್ರಿಯೆಗೆ ಈ ಅಭಯಾರಣ್ಯ ಸಂಬಂಧವನ್ನು ಹೊಂದಿದೆ. ಹುಲಿ, ಆನೆ, ಚಿರತೆ ಇತ್ಯಾದಿ ಪ್ರಾಣಿಗಳು ಇಲ್ಲಿ ವಾಸಿಸುತ್ತವೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವು 1974 ರಲ್ಲಿ ಪ್ರಾಜೆಕ್ಟ್ ಟೈಗರ್ ಅಡಿಯಲ್ಲಿ ಹುಲಿಮೀಸಲು ಪ್ರದೇಶವಾಗಿ ಸ್ಥಾಪಿಸಲ್ಪಟ್ಟಿದೆ. ಇದು ಒಮ್ಮೆ ಮೈಸೂರು ಸಾಮ್ರಾಜ್ಯದ ಮಹಾರಾಜರಿಗೆ ಖಾಸಗಿ ಬೇಟೆಯಾಡಲು ಮೀಸಲಾಗಿತ್ತು, ಆದರೆ ಈಗ ಹುಲಿ ಸಂರಕ್ಷಣಾ ಪ್ರದೇಶವಾಗಿ ಮಾರ್ಪಾಡು ಮಾಡಲಾಗಿದೆ. ಬಂಡೀಪುರವು ತನ್ನ ವನ್ಯಜೀವಿಗಳಿಗೆ ಹೆಸರುವಾಸಿಯಾಗಿದೆ .

2010ರ ಬಳಿಕ ನಿರ್ಮಾಣವಾಗಿರುವ ಕಟ್ಟಡಗಳು

2010ರ ಬಳಿಕ ನಿರ್ಮಾಣವಾಗಿರುವ ಕಟ್ಟಡಗಳು

ಈ ಅಧಿಸೂಚನೆ ಪ್ರಕಾರ ಪ್ರಸ್ತುತ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕರಡು ಅಧಿಸೂಚನೆ ದಿನಾಂಕ- 31-08-2010ರ ನಂತರ ಕಟ್ಟಡ ನಿರ್ಮಾಣ ಮಾಡಿರುವ 3 ಪ್ರಕರಣಗಳಲ್ಲಿ ಅನ್ಯಕ್ರಾಂತವಾಗಿರುವ ಆದೇಶವನ್ನು ರದ್ದುಪಡಿಸುವ ಕ್ರಮಕ್ಕೆ ಜಿಲ್ಲಾಧಿಕಾರಿಯವರು ಮುಂದಾಗಿದ್ದಾರೆ.

ಕಾಡಂಚಿನ 123 ಗ್ರಾಮ ಸೂಕ್ಷ್ಮ ಪ್ರದೇಶ

ಕಾಡಂಚಿನ 123 ಗ್ರಾಮ ಸೂಕ್ಷ್ಮ ಪ್ರದೇಶ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯವೆಂದು ಅಧಿಸೂಚನೆ ಹೊರಡಿಸಿದ್ದು, ಇದರ ಅನುಸಾರ ಬಂಡೀಪುರ ಕಾಡಂಚಿನ ಒಟ್ಟು 123 ಗ್ರಾಮಗಳು ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಗೆ ಬರುತ್ತಿದ್ದು, ಸದರಿ ಗ್ರಾಮಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಚಟುವಟಿಕೆ ಕೈಗೊಳ್ಳಲು ಅವಕಾಶವಿರುವುದಿಲ್ಲ.

ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮತ್ತೆ ಕೇರಳ ಮನವಿಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮತ್ತೆ ಕೇರಳ ಮನವಿ

ಅಧಿಸೂಚನೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ

ಅಧಿಸೂಚನೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ

ಆದಾಗಿಯೂ ಅಧಿಸೂಚನೆ ಉಲ್ಲಂಘಿಸಿ ಬೃಹತ್ ಕಟ್ಟಡ ನಿರ್ಮಾಣ ಮಾಡಲಾಗಿದೆ. ಪೂರ್ವಾನುಮತಿ ಪಡೆಯದೇ ನಿರ್ಮಿಸಲಾಗಿರುವ ಅಕ್ರಮ ಕಟ್ಟಡಗಳ ತೆರವಿಗೆ ಕ್ರಮ ವಹಿಸುವಂತೆ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ವರದಿ ನೀಡುವಂತೆ ತಹಶೀಲ್ದಾರರಿಗೆ ಪತ್ರ ಬರೆದಿದ್ದರು. ತಹಶೀಲ್ದಾರರು ನೀಡಿದ ವರದಿ ಅನ್ವಯ ಜಿಲ್ಲಾಧಿಕಾರಿಯವರು ಕ್ರಮಕ್ಕೆ ಮುಂದಾಗಿದ್ದಾರೆ.

ಮೂರು ಹೋಂಸ್ಟೇಗಳ ಅನುಮತಿ ಹಿಂದಕ್ಕೆ

ಮೂರು ಹೋಂಸ್ಟೇಗಳ ಅನುಮತಿ ಹಿಂದಕ್ಕೆ

ಪ್ರವಾಸೋದ್ಯಮ ಇಲಾಖೆಯವರು ಅನುಮತಿಸಿರುವ ಯಾವುದೇ ಅನ್ಯಕ್ರಾಂತವಾಗದೇ ನಿರ್ಮಿಸಿರುವ 3 ಹೋಮ್‍ಸ್ಟೇ ಕಟ್ಟಡಗಳಿಗೆ ನೀಡಿರುವ ಅನುಮತಿಯನ್ನು ಹಿಂಪಡೆಯುವ ಆದೇಶಕ್ಕೆ ಜಿಲ್ಲಾಧಿಕಾರಿಯವರು ಕ್ರಮ ತೆಗೆದುಕೊಂಡಿದ್ದಾರೆ. ಅನುಮತಿ ಪಡೆಯದ ಇನ್ನೊಂದು ಹೋಮ್ ಸ್ಟೇ ನಡೆಸದಂತೆ ಬೀಗಮುದ್ರೆ ಹಾಕಲಾಗಿತ್ತು. ಆದರೂ ಸಹ ಬೀಗಮುದ್ರೆ ಆದೇಶ ಉಲ್ಲಂಘಿಸಿ ಹೋಮ್ ಸ್ಟೇ ತೆರೆದು ಕಟ್ಟಡ ದುರಸ್ತಿ ಕಾರ್ಯ ಕೈಗೊಂಡಿದ್ದ ಈಗಿರುವ ಹೋಮ್ ಸ್ಟೇ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.

English summary
The District Collector has taken action to build unauthorized buildings in the Bandipur Tiger Reserve Forest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X