ಗಾರೆ ಕೆಲಸಗಾರರ ವಾಹನ ಪಲ್ಟಿ: ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ

ಚಾಮರಾಜನಗರ, ಆಗಸ್ಟ್ 03: ಗಾರೆ ಕೆಲಸಗಾರರು ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ಉಗೇನದಹುಂಡಿ ಬಳಿ ನಡೆದಿದೆ.

ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು(27) ಅಪಘಾತದಲ್ಲಿ ಮೃತಪಟ್ಟಿದ್ದು, ರಾಚಪ್ಪ ,ಮಹೇಶ, ದರ್ಶನ್, ಮಂಟೇಲಿಂಗ, ಮಹದೇವಸ್ವಾಮಿ, ನಾಗರಾಜು ಮಹದೇವ ಪ್ರಸಾದ್, ಕುಮಾರ್ ಎಂಬವರು ಗಾಯಗೊಂಡಿದ್ದಾರೆ. ಮನೆಯೊಂದಕ್ಕೆ ತಾರಸಿ ಕೆಲಸ ಮಾಡಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

one-dies-in-tata-ace-accident

ಗಾಂಜಾ ಸಾಗಾಟ ಮಾಡುತ್ತಿದ್ದವನ ಬಂಧನ

ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ರಾಮಾಪುರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹನೂರು ತಾಲೂಕಿನ ಭದ್ರಯ್ಯನಹಳ್ಳಿ ಗ್ರಾಮದ ಮಹೇಶ್ ಅಲಿಯಾಸ್ ರವಿ ಬಂಧಿತ ಆರೋಪಿ. ಭದ್ರಯ್ಯನಹಳ್ಳಿ ಗ್ರಾಮದ ಮಹೇಶ್ ಅಲಿಯಾಸ್ ರವಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತನಿಂದ 2.4 ಕೆಜಿ ಒಣ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ಚಿತ್ತಾಪುರ ಗ್ರಾಮದ ಫರ್ದಿನ್ ಖಾನ್ (26)ಬಂಧಿತ ಆರೋಪಿ.

ಚಿತ್ತಾಪುರ ಗ್ರಾಮದ ಫರ್ದಿನ್ ಖಾನ್ ಎಂಬುವವನು ಕೌದಳ್ಳಿ ಮಾರ್ಗವಾಗಿ ಹನೂರು ಪಟ್ಟಣದತ್ತ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಪಡೆದ ರಾಮಾಪುರ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ‌. ಬಂಧಿತನಿಂದ 1 ಕೆಜಿಯಷ್ಟು ಒಣಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಟ್ಯಾಂಕರ್ ವಾಹನ ಹರಿದು ಪಾದಾಚಾರಿಗಳು ಸಾವು

ಬೆಂಗಳೂರು: ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿರುವ ಘಟನೆ ನಗರದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲೇ ಚಾಲಕ ಟ್ಯಾಂಕರ್ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಬಯೋಕಾನ್ ಕಂಪನಿ ಮುಂಭಾಗದಲ್ಲಿ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಅಪಘಾತದಲ್ಲಿ ಆಶಿಕ್ (28), ಮನೋಜ್ ಕುಮಾರ್(30) ಮೃತ ದುರ್ದೈವಿಗಳು. ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ ನಂತರ ಟ್ಯಾಂಕರ್, ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+