Chamarajanagar Lok Sabha Constituency: ಗಡಿಜಿಲ್ಲೆಯಲ್ಲೂ ಆಪರೇಷನ್ ಹಸ್ತ ಜೋರು

ಚಾಮರಾಜನಗರ, ಏಪ್ರಿಲ್‌, 01: ಲೋಕಸಭಾ ಚುನಾವಣೆಯಲ್ಲಿ ತವರಿನ ಕ್ಷೇತ್ರಗಳನ್ನು ಗೆಲ್ಲಲ್ಲೇಬೇಕು ಎಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ರಣವ್ಯೂಹವನ್ನೇ ಮಾಡುತ್ತಿದ್ದು, ಕಮಲದ ಮುಖಂಡರಿಗೆ ಗಾಳ ಹಾಕಿದ್ದಾರೆ.

ವರುಣ ವಿಧಾನಸಭಾ ಕ್ಷೇತ್ರ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡಲಿದೆ. ಜೊತೆಗೆ, ಮೈಸೂರು ತವರಿನ ಜಿಲ್ಲೆಯಾಗಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೆ ಈ ಎರಡು ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದು, ಗೆಲ್ಲಿಸಬೇಕಿದ ಅನಿವಾರ್ಯತೆ ಎದುರಾಗಿದೆ.

Operation congress in Chamarajanagar district

ಕೈ ಹಿಡಿಯುವ ಪ್ರಸಾದ್ ಬೆಂಬಲಿಗರು: ಸಂಸದರ ಸೋದರಳಿಯ ಹಾಗೂ ಸಹೋದರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ಈಗ ಸಂಸದರ ಬೆಂಬಲಿಗರು ಕಮಲ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ ಆಗಲು ಮುಂದಾಗಿದ್ದಾರೆ. ಏಪ್ರಿಲ್‌ 3ರಂದು ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಸದರ ಬೆಂಬಲಿಗರು ಹಾಗೂ ದಲಿತ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದ್ದು, ಆಪರೇಷನ್‌ ಹಸ್ತ ಸಕ್ಸಸ್ ಆಗಿದೆ ಎನ್ನಲಾಗಿದೆ.

ಇನ್ನು, 3 ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸದಲ್ಲಿದ್ದು, ಈ ವೇಳೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿ ಬೆಂಬಲ ಕೇಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಚುನಾವಣೆ ಹೊತ್ತಲ್ಲಿ ಕಟ್ಟ ಎದುರಾಳಿಗಳು ಭೇಟಿಯಾದರೇ ಚುನಾವಣಾ ಆಖಾಡ ಮತ್ತಷ್ಟು ರಂಗೇರಲಿದೆ.

ಕಾಂಗ್ರೆಸ್ ಸಂಪರ್ಕ ಮಾಡಿದೆ: ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ.ಮೋಹನ್ ಪ್ರತಿಕ್ರಿಯಿಸಿದ್ದು, ಬಿಜೆಪಿ ಕೆಲ ತೀರ್ಮಾನಗಳಿಂದ ಬೇಸರ ಆಗಿರುವುದು ನಿಜ. ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ. ಎರಡು ದಿನಗಳಲ್ಲಿ ಎಲ್ಲಾ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಸಿಎಂ ಸಿದ್ದರಾಮಯ್ಯ ಅವರು ಪ್ರಸಾದ್ ಅವರನ್ನು ಭೇಟಿಯಾಗಲೂಬಹುದು ಎಂದಿದ್ದಾರೆ.

ಒಟ್ಟಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಬೆಂಬಲಿಗರು ಕಾಂಗ್ರೆಸ್‌ನತ್ತ ಮುಖ‌ ಮಾಡುತ್ತಿರುವುದು ರಾಜಕೀಯ ವಲಯದ ಪ್ರಮುಖ ಬೆಳವಣಿಗೆ ಆಗಿದೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮತಯಾಚನೆ ಹೇಗಿರಲಿದೆ?: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅನುದಾನ ಘೋಷಿಸಿ ಈವರೆಗೆ ಅನುದಾನ ನೀಡಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದೆ, ಆದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತವಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಚ್ಚು ಸ್ಥಾನ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಜನರು ಸಹ ಇದನ್ನು ಅರ್ಥಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.

ಅಲ್ಲದೆ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದು, ಅದೇ ದಿನ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ನಂತರ ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಚಿತ್ರದುರ್ಗ ಕಾಂಗ್ರೆಸ್ ಭದ್ರಕೋಟೆ ಆಗಿದೆ. ಮತದಾರರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಒಪ್ಪಿದ್ದಾರೆ. ಜನ ಕಲ್ಯಾಣಕ್ಕಾಗಿ ರೂಪಿಸಿದ ಐದು ಗ್ಯಾರೆಂಟಿ ಅನುಷ್ಠಾನ ಮಾಡಿ ಜನರ ನಂಬಿಕೆ ಉಳಿಸಿಕೊಂಡಿದ್ದೇವೆ. ಈ ಚುನಾವಣೆಯಲ್ಲೂ ಜನ ಕೈ ಹಿಡಿಯುವ ವಿಶ್ವಾಸ ಇದೆ. 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಾತಾವರಣ ಇದೆ ಎಂದರು.

ಭದ್ರಾ ಮೇಲ್ದಂಡೆಗೆ ಅನುದಾನ ಘೋಷಿಸಿ ಈವರೆಗೆ ಕೊಟ್ಟಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಆದರೂ ಕೇಂದ್ರ ಸ್ಪಂದಿಸಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಾಗುವುದು ಎಂದು ಹೇಳಿದ ಅವರು, ನೀಲಕಂಠೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿ ನಂತರ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದರು. ಕಾಯ್ದೆ ಪ್ರಕಾರ 12 ಸಾವಿರ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚಿದ್ದರೆ ಅದನ್ನು ರಾಷ್ಟ್ರೀಯ ಯೋಜನೆ ಆಗಬೇಕು ಆದರೂ ಮಾಡಿಲ್ಲ. ಅನುದಾನವನ್ನೂ ಕೊಟ್ಟಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸಿದ್ದರಾಮಯ್ಯ 500 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಜಿಲ್ಲೆಗೆ ಯಾವ ಕೊಡುಗೆ ನೀಡಿದೆ ಎಂದು ಪ್ರಶ್ನಿಸಿದ ಅವರು, ನಾನು ಮೂಡಿಗೆರೆಯಲ್ಲಿ ಸ್ಪರ್ಧೆ ಮಾಡಿದ್ದೆ ಅಷ್ಟೇ. ಮೂಡಿಗೆರೆ ಚಂದ್ರಪ್ಪ ಅಲ್ಲ. ಹೊಸದುರ್ಗದ ಪಕ್ಕದಲ್ಲೇ ಇರುವ ತರೀಕೆರೆ ತಾಲೂಕಿನವನು. ನಾನೇನು 500 ಕಿಲೋ ಮೀಟರ್‌ ದೂರದಿಂದ ಬಂದಿಲ್ಲ. ಕಳೆದ ಚುನಾವಣೆಯಲ್ಲಿ ಸೋತರೂ ಪಲಾಯನ ಮಾಡದೆ ಜನ ಸಂಪರ್ಕದಲ್ಲಿದ್ದೆ. ಈ ಬಾರಿ ಜನರು ಕೈ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ, ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮುಖಂಡರಾದ ಹಾಲಸ್ವಾಮಿ, ಶಿವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+