ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನರಭಕ್ಷಕ ಹುಲಿ ಸೆರೆಗಾಗಿ ಸಾಕಾನೆಯಿಂದ ಕಾರ್ಯಾಚರಣೆ

|
Google Oneindia Kannada News

ಚಾಮರಾಜನಗರ, ಅಕ್ಟೋಬರ್ 9: ಇಬ್ಬರು ರೈತರನ್ನು ಬಲಿ ಪಡೆದ ನರಭಕ್ಷಕ ಹುಲಿಗಾಗಿ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದುವರೆಗೆ ಹುಲಿಯ ಯಾವುದೇ ಸುಳಿವು ಲಭ್ಯವಾಗಿಲ್ಲ ಎನ್ನಲಾಗಿದೆ.

ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಭಯ ಹುಟ್ಟಿಸಿರುವ ಹುಲಿ ಕಾರ್ಯಾಚರಣೆ ವೇಳೆ ಸಿಗದೆ ತಪ್ಪಿಸಿಕೊಳ್ಳುತ್ತಿದೆ. ಈ ನರಭಕ್ಷಕ ಹುಲಿಯ ಪತ್ತೆಗಾಗಿ ಬಂಡೀಪುರ ಅರಣ್ಯ ಇಲಾಖೆಯು ಕಾರ್ಯತಂತ್ರ ಆರಂಭಿಸಲಾಗಿದ್ದು, ಗುಂಡ್ಲುಪೇಟೆ ತಾಲೂಕಿನ ಹುಂಡೀಪುರ, ಚೌಡಹಳ್ಳಿ ಹಾಗೂ ಕುಂದುಕೆರೆ ವ್ಯಾಪ್ತಿಯ ಕೆಬ್ಬೇಪುರ, ಮಕ್ಕಳ ಮಲ್ಲಪ್ಪ ದೇವಸ್ಥಾನ ಹಾಗೂ ಹುಂಡೀಪುರಗಳಲ್ಲಿ ಕೂಂಬಿಂಗ್ ನಡೆಸಲಾಗುತ್ತಿದೆ.

 ನರಭಕ್ಷಕ ಹುಲಿ ಸೆರೆಯಾಗುತ್ತಾ, ಗುಂಡಿಗೆ ಬಲಿಯಾಗುತ್ತಾ...? ನರಭಕ್ಷಕ ಹುಲಿ ಸೆರೆಯಾಗುತ್ತಾ, ಗುಂಡಿಗೆ ಬಲಿಯಾಗುತ್ತಾ...?

ಈಗಾಗಲೇ ಹುಂಡೀಪುರ ಅರಣ್ಯ ವಲಯದಲ್ಲಿ ಬಿಡಾರಗಳನ್ನು ಹಾಕಿದ್ದು, ವೈಲ್ಡ್ ಲೈಫ್ ನ ಡಾ.ಪ್ರಯಾಗ್, ಡಾ.ವಸೀಂ, ಡಾ.ಅಜ್ಗರ್, ಡಾ.ಮುಜೀಬ್, ಡಾ.ಶಫಾತ್ ಅಲೀಖಾನ್, ಡಾ.ವಿನಯ್ ಸೇರಿದಂತೆ ಎಸಿಎಫ್ ರವಿಕುಮಾರ್, ವಲಯ ಅರಣ್ಯಾಧಿಕಾರಿಗಳು, ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ಇತರ ಸಿಬ್ಬಂದಿ ಹುಲಿ ಸೆರೆ ಹಿಡಿಯುವ ಸಲುವಾಗಿ ಐದು ತಂಡಗಳನ್ನು ಮಾಡಿ ಕಾರ್ಯಾಚರಣೆ ನಡೆಸುತ್ತಿದೆ.

Operation Started By Forest Department To Capture tiger

ಈ ನಡುವೆ ಚೌಡಹಳ್ಳಿಯಲ್ಲಿ ರೈತನನ್ನು ಬಲಿ ಪಡೆದ ಹುಲಿಯನ್ನು ಯಾವುದೇ ಕಾರಣಕ್ಕೂ ಕೊಲ್ಲುವುದಿಲ್ಲ ಎಂದು ಅರಣ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಗುಂಡ್ಲುಪೇಟೆ ನರಭಕ್ಷಕ ಹುಲಿಯನ್ನು 2 ದಿನದಲ್ಲಿ ಸೆರೆ ಅಥವಾ ಕೊಲ್ಲುತ್ತೇವೆ: ಅರಣ್ಯ ಇಲಾಖೆ ಗುಂಡ್ಲುಪೇಟೆ ನರಭಕ್ಷಕ ಹುಲಿಯನ್ನು 2 ದಿನದಲ್ಲಿ ಸೆರೆ ಅಥವಾ ಕೊಲ್ಲುತ್ತೇವೆ: ಅರಣ್ಯ ಇಲಾಖೆ

ಈ ಕುರಿತಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ ವಿಭಾಗ) ಸಂಜಯ್ ಮೋಹನ್ ಮಾತನಾಡಿ, "ಬಂಡಿಪುರ ವ್ಯಾಪ್ತಿಯಲ್ಲಿ 120 ಹುಲಿಗಳಿವೆ. ಒಂದೆರಡು ಹುಲಿಗಳ ಸಮಸ್ಯೆಯಿದೆ. ಕಳೆದ ಬಾರಿ 60 ವರ್ಷದ ವೃದ್ಧನ ಮೇಲೆ ಹುಲಿ ದಾಳಿ ನಡೆಸಿತ್ತು. ಅದೇ ಹುಲಿನೇ ಇರಬಹುದು ಎನ್ನುವ ಸಂಶಯವಿದೆ. ಮೊದಲಿಗೆ ಯಾವ ಹುಲಿ ಎನ್ನುವುದನ್ನು ದೃಢಪಡಿಸಿಕೊಂಡು ಬಳಿಕ ಅದನ್ನು ಸೆರೆಹಿಡಿಯಲಾಗುತ್ತದೆ" ಎಂದು ಹೇಳಿದ್ದಾರೆ.

Operation Started By Forest Department To Capture tiger

"ನರಭಕ್ಷಕ ಹುಲಿಯನ್ನು ಗುಂಡಿಕ್ಕಿ ಕೊಲ್ಲುವುದಕ್ಕೆ ಯಾವುದೇ ಆದೇಶ ಮಾಡಿಲ್ಲ. ಮಾಡುವುದೂ ಇಲ್ಲ. ಜೀವಂತವಾಗಿ ಸೆರೆಹಿಡಿಯಲಾಗುತ್ತದೆ. ಪ್ರತಿ ವರ್ಷ ಎರಡೆರಡು ಬಾರಿ ಕ್ಯಾಮೆರಾ ಇಡಲಾಗುತ್ತದೆ. ಕ್ಯಾಮೆರಾ ಮೂಲಕ ಪ್ರತಿಯೊಂದು ಹುಲಿಯ ವಿವರ ತಿಳಿಯಲಾಗುತ್ತದೆ. ಆ ಪ್ರದೇಶದಲ್ಲಿ ಓಡಾಡುವ ಹುಲಿ ಯಾವುದು ಎನ್ನುವ ವಿವರ ತಿಳಿದ ಬಳಿಕ ಯಾವ ಹುಲಿ ದಾಳಿ ಮಾಡಿರಬಹುದು ಎನ್ನುವುದು ಗೊತ್ತಾಗಲಿದೆ" ಎಂದು ತಿಳಿಸಿದ್ದಾರೆ.

English summary
The operation started by forest department to capture tiger which killed two farmers in chamarajanagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X