ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ: ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜುಲೈ 29: ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕೆಸ್ತೂರಿನ ಹಿರಿಯ ಪ್ರಾಥಮಿಕ ಶಾಲೆ -1 ರಲ್ಲಿ ಈ ಘಟನೆ ನಡೆದಿದ್ದು ಈ ಹಿಂದೆ ಇದೇ ಗ್ರಾಮದ ಮತ್ತೊಂದು ಪ್ರಾಥಮಿಕ ಶಾಲೆಯಲ್ಲಿ ಇದೇ ರೀತಿ ಹಲ್ಲಿ ಬಿದ್ದಿದ್ದ ಬಿಸಿಯೂಟದ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದರು. ಇದೀಗ ಮತ್ತದೇ ಘಟನೆ ಮರುಕಳಿಸಿದೆ.

ಮಧ್ಯಾಹ್ನದ ಊಟ ಸೇವಿಸಿದ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ದಿಡೀರನೇ ವಾಂತಿ-ಬೇಧಿ ಶುರುವಾಗಿದ್ದು, ತಕ್ಷಣ ಎಚ್ಚೆತ್ತ ಶಿಕ್ಷಕ ವರ್ಗ ಆ್ಯಂಬುಲೆನ್ಸ್ ಮೂಲಕ ಯಳಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ, 35 ಮಕ್ಕಳಿಗೆ ಡ್ರಿಪ್ ಹಾಕಲಾಗಿದ್ದು ಇನ್ನೆಲ್ಲಾ ಮಕ್ಕಳ ಮೇಲೆ ನಿಗಾ ಇಡಲಾಗಿದೆ.

Breaking: ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ್ದ 13 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು Breaking: ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ್ದ 13 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಪದೇಪದೆ ಘಟನೆ ಮರುಕಳಿಸಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ರಸ್ತೆ ತಡೆದು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಎಸಿ, ತಹಶಿಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Over 100 School children fell ill after Eating Mid-day Meal in Chamarajanagar

ಚಾಮರಾಜನಗರದಲ್ಲಿ ಈ ರೀತಿಯ ಘಟನೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಕೆಲವು ತಿಂಗಳ ಹಿಂದೆ ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಶಾಲೆಯಲ್ಲೂ ಊಟಕ್ಕೆ ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಶ್ವಸ್ಥರಾಗಿದ್ದರು. ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮಾಪುರದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಿರಲಿಲ್ಲ.

ಸರಕಾರಿ ಶಾಲೆ ಮುಚ್ಚುವುದನ್ನು ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

ರಾಜ್ಯದಲ್ಲಿ 13,800 ಸರಕಾರಿ ಶಾಲೆಗಳನ್ನು ಮುಚ್ಚುವ ಸರಕಾರದ ಪ್ರಸ್ತಾವವನ್ನು ವಿರೋಧಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ಸಂಘಟನೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ವರ್ಷ ರಾಜ್ಯದಲ್ಲಿ 13,800 ಸರಕಾರಿ ಶಾಲೆಗಳನ್ನು ಮುಚ್ಚುತ್ತೇವೆ ಎಂದು ಸರಕಾರ ಹೇಳಿದೆ. ಈ ನಿರ್ಧಾರದಿಂದ ಲಕ್ಷಾಂತರ ಬಡ ವಿದ್ಯಾರ್ಥಿಗಳು ತೊಂದರೆ ಉಂಟಾಗಿದೆ. ಸರಕಾರದ ನಿರ್ಧಾರದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಶಾಶ್ವತವಾಗಿ ಶಿಕ್ಷಣದಿಂದ ದೂರ ಉಳಿಯುವ ಸಂಭವ ಇದೆ. ಸರ್ಕಾರ ತಕ್ಷಣವೇ ತನ್ನ ನಿಲುವಿನಿಂದ ಹಿಂದೆ ಸರಿಯಬೇಕು. 13 ಸಾವಿರ ಶಾಲೆಗಳನ್ನು ಮುಚ್ಚುವ ಬದಲು ಎಲ್ಲ ಸರಕಾರಿ ಶಾಲೆಗಳ ಬಲವರ್ಧನೆಗೆ ಕ್ರಮ ವಹಿಸಬೇಕು ಎಂದು ಎಐಡಿಎಸ್‌ಒನ ಜಿಲ್ಲಾ ಸಂಚಾಲಕಿ ಆಸಿಯಾ ಬೇಗಂ ಆಗ್ರಹಿಸಿದ್ದಾರೆ.

Over 100 School children fell ill after Eating Mid-day Meal in Chamarajanagar

ಗ್ರಾಮೀಣ ಭಾಗದಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿರುವುದರಿಂದ ದಾಖಲಾತಿ 25 ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಒಂದೇ ಸ್ಥಳದಲ್ಲಿ ಸೇರಿಸಿ ದೊಡ್ಡ ಶಾಲೆಯೊಂದಿಗೆ ವಿಲೀನಗೊಳಿಸಲಾಗುವುದು ಎಂದು ಸರಕಾರ ಹೇಳುತ್ತಿದೆ. ಇದನ್ನು ಮಾದರಿ ಶಾಲೆ ಎಂದು ಕರೆದಿದೆ. ಸರಕಾರದ ಅಂಕಿ ಅಂಶಗಳ ಪ್ರಕಾರ, ರಾಜ್ಯದ ಸರಕಾರಿ ಶಾಲೆಗಳಲ್ಲಿ 35 ಸಾವಿರ ಶಿಕ್ಷಕರ ಕೊರತೆ ಇದೆ. 4767 ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರಿದ್ದಾರೆ. ಕೆಲವು ಶಾಲೆಗಳಲ್ಲಿ 5 ,10 ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಶಾಲೆಗಳಲ್ಲಿ ಇರುವ ಕೊರತೆಗಳನ್ನು ಸರಿಪಡಿಸಿ, ಶಾಲೆಗಳ ಗುಣಮಟ್ಟ ಏರಿಸಲು ಪ್ರಯತ್ನಿಸಬೇಕೆಂದರು ಬೇಗಂ ತಿಳಿಸಿದರು.

Recommended Video

ಫಾಜಿಲ್ ಹತ್ಯೆ ನಂತರ ಮಂಗಳೂರಿನಲ್ಲಿ ಹೈ ಅಲರ್ಟ್ !! | OneIndia Kannada

English summary
More than 100 students of government hiher primary school in Yalandur tluk of Chamarajanagar district fell sick on saturday after eating mid-day meals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X