ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ ಆಕ್ಸಿಜನ್ ದುರಂತ: ಕೊಲೆ ದೂರು ದಾಖಲು

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಮೇ 6: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನ ಸೋಂಕಿತರು ಮೃತರಾದ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಹೈಕೋರ್ಟ್‌ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಜೊತೆಗೆ ರಾಜ್ಯ ಸರ್ಕಾರವು ನೇಮಿಸಿರುವ ತನಿಖಾಧಿಕಾರಿ ಶಿವಯೋಗಿ ಕಳಸದ್ ಅವರ ತನಿಖೆಯೂ ಪ್ರಗತಿಯಲ್ಲಿದೆ. ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಜಿಲ್ಲೆಯ ಇತರೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಗದೇ ಮೃತಪಟ್ಟ ಸೋಂಕಿತರ ಸಾವಿಗೆ ಕಾರಣರಾದವರ ವಿರುದ್ಧ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ ಬುಧವಾರ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಕೊಲೆ ದೂರು ನೀಡಿದ್ದಾರೆ.

 Chamarajanagar Oxygen Tragedy: Murder Case Registered

ಆಕ್ಸಿಜನ್ ದುರಂತ ಪ್ರಕರಣದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇಮಕಆಕ್ಸಿಜನ್ ದುರಂತ ಪ್ರಕರಣದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇಮಕ

Recommended Video

ದೆಹಲಿಯಲ್ಲಿ ಸೋಂಕಿತರಿಗಾಗಿ ಆಟೋ ಆಂಬ್ಯುಲೆನ್ಸ್‌ ಸೇವೆ.. | Oneindia Kannada

ಕೊರೊನಾ ಸೋಂಕಿತರು ಆಮ್ಲಜನಕ ಸಿಗದೇ ತೀವ್ರತರ ನರಳಾಟದಿಂದ ಸಾವನ್ನಪ್ಪಿದ್ದಾರೆ. ಇದಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್, ಕರ್ತವ್ಯ ನಿರತ ವೈದ್ಯರು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ, ಚಾಮರಾಜನಗರ ಮೆಡಿಕಲ್ ಕಾಲೇಜಿನ ಸಂಜೀವ್ ರೆಡ್ಡಿ, ಜಿಲ್ಲಾ ಸರ್ಜನ್‌ಗಳಾದ ಡಾ.ಮುರುಗೇಶ್, ಡಾ.ಶ್ರೀನಿವಾಸ್ ಅವರ ನೇತೃತ್ವದ ಆಡಳಿತ ಮಂಡಳಿ, ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ, ಆಕ್ಸಿಜನ್ ಪೂರೈಕೆ ಗುತ್ತಿಗೆದಾರರು ಕಾರಣ. ಇವರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ.

English summary
Puttaswamy, former president of the District Lawyers Association on Wednesday lodged a murder Case at Chamarajanagar police station against those responsible for the oxygen tragedy in the Chamarajanagar district Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X