ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

ಚಾಮರಾಜನಗರ, ಮೇ 7: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ (ಸೋಮವಾರ, ಮೇ 8) ಬಹಿರಂಗ ಪ್ರಚಾರ ತೆರೆ ಬೀಳಲಿದ್ದು, ಅದಕ್ಕೂ ಮುನ್ನ ನಂಜನಗೂಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಕೊನೆಯ ಪ್ರಚಾರ ಸಮಾವೇಶ ನಡೆಸಿದರು. ಈ ಬಾರಿ ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರ್ಕಾರವನ್ನು ಚುನಾಯಿಸಲು ಜನತೆಗೆ ವಿಶೇಷ ಮನವಿ ಮಾಡಿದರು.

ಚುನಾವಣಾ ಪ್ರಚಾರದ ಸಮಾವೇಶ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಗೆ ತೆರಳಬೇಕಿತ್ತು. ಆದರೆ ಭಾಷಣದ ವೇಳೆ ನರೇಂದ್ರ ಮೋದಿ ಅವರು, ನಂಜನಗೂಡು ಕ್ಷೇತ್ರಕ್ಕೆ ಆಗಮಿಸಿರುವ ಹಿನ್ನಲೆ ದಕ್ಷಿಣ ಕಾಶಿ ಶ್ರೀಕಂಠೇಶ್ವರನ ದರ್ಶನ ಪಡೆಯುವುದಾಗಿ ಹೇಳಿದ್ದರು.

PM Narendra Modi Visites Dakshina Kashi Srikantheshwar Temple at Nanjangud

ಅದರಂತೆ ತಮ್ಮ ವೇಳಾಪಟ್ಟಿಯಲ್ಲಿ ದೇವಸ್ಥಾನ ಭೇಟಿ ಕಾರ್ಯಕ್ರಮವಿಲ್ಲದಿದ್ದರೂ, ಪ್ರಧಾನಿ ನರೇಂದ್ರ ಮೋದಿ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು ಮತ್ತು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ ಪ್ರವೇಶಿಸಿದ ಪ್ರಧಾನಿ ನರೇಂದ್ರ ಮೋದಿ, ಮಹಾಗಣಪತಿಗೆ ಮೊದಲ ಪೂಜೆ ನೆರವೇರಿಸಿದರು. ಬಳಿಕ ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಈ ವೇಳೆ ಬಿಲ್ವಪತ್ರೆ ಹಿಡಿದು ಪ್ರಧಾನಿ ಮೋದಿ ಲೋಕಕಲ್ಯಾಣಕ್ಕಾಗಿ ವಿಶೇಷ ಸಂಕಲ್ಪ ಮಾಡಿದರು.

ದೇವಸ್ಥಾನ ಅರ್ಚಕರು ಪ್ರಧಾನಿ ನರೇಂದ್ರ ಮೋದಿ ಹಣೆಗೆ ವಿಭೂತಿ ಇಟ್ಟು, ಶಾಲು ಹೊದಿಸಿ ಹೂವಿನ ಹಾರ ಹಾಕಿದರು. ಬಳಿಕ ದೇಗುಲದ ಪ್ರಧಾನ ಅರ್ಚಕ ನೀಲಕಂಠ ದೀಕ್ಷಿತ್ ಪೂಜೆ ನೆರವೇರಿಸಿದರು. ಲೋಕಕಲ್ಯಾಣಕ್ಕಾಗಿ ಪೂಜೆ ನಡೆಸಿದ ನರೇಂದ್ರ ಮೋದಿಗೆ ಪ್ರಸಾದ ವಿತರಿಸಲಾಯಿತು.

PM Narendra Modi Visites Dakshina Kashi Srikantheshwar Temple at Nanjangud

ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡು ಚುನಾವಣಾ ಪ್ರಚಾರ ಭಾಷಣದ ಮಧ್ಯೆ ಶ್ರೀಕಂಠೇಶ್ವರ ದೇಗುಲ ದರ್ಶನ ಮಾಡುವುದಾಗಿ ಹೇಳಿದ ಬೆನ್ನಲ್ಲೇ ದೇವಸ್ಥಾನದ ಆವರಣದಲ್ಲಿ ಭದ್ರತಾ ಪಡೆ ಮತ್ತು ಪೊಲೀಸರಿಂದ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಇದಕ್ಕೂ ಮೊದಲು ನಂಜನಗೂಡಿನ ಎಲಚಗೆರೆ ಗ್ರಾಮದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತ್ ಮಾತಾಕೀ, ಭಜರಂಗ ಬಲಿಕೀ ಎನ್ನುತ್ತಲೇ ಮಾತು ಶುರು ಮಾಡಿದರು. ದಕ್ಷಿಣ ಕಾಶಿ ನಂಜನಗೂಡು ಜನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದರು.

ತಾಯಿ ಚಾಮುಂಡೇಶ್ವರಿ, ನಂಜುಂಡೇಶ್ವರ ಸ್ವಾಮಿ, ಮಲೆ ಮಹದೇಶ್ವರ ಸ್ವಾಮಿ, ಸುತ್ತೂರು ಮಠದ ಸ್ವಾಮೀಜಿ ಮತ್ತು ಆದಿಚುಂಚನಗಿರಿ ಸ್ವಾಮೀಜಿಗೆ ನನ್ನ ನಮನಗಳು ಎಂದು ಹೇಳಿದರು.

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಭಾಗವಾಗಿ 224 ಕ್ಷೇತ್ರಗಳಿಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಯಾವ ಪಕ್ಷ ನೂತನ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+