ವಿವಾಹ ವಾರ್ಷಿಕೋತ್ಸವ ದಿನದಂದೇ ಪೊಲೀಸ್ ಪೇದೆ ಸಾವು
ಚಾಮರಾಜನಗರ, ಆಗಸ್ಟ್ 27: ಪೊಲೀಸ್ ಪೇದೆಯೊಬ್ಬರು ತಮ್ಮ ವಿವಾಹ ವಾರ್ಷಿಕೋತ್ಸವ ದಿನದಂದೇ ಕೊರೊನಾ ವೈರಸ್ ನಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
Recommended Video
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಪೊಲೀಸ್ ಪೇದೆ ಮಹದೇವ ಸ್ವಾಮಿ (38) ಕೋವಿಡ್-19ಗೆ ಸಾವನ್ನಪ್ಪಿರುವವರು.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊರೊನಾ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಆಗಸ್ಟ್ 12 ರಂದು Rapid ಆ್ಯಂಟಿಜೆನ್ ಟೆಸ್ಟ್ನಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢವಾಗಿತ್ತು.

ಈ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ತೆರಳದೆ ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದರು. ಬುಧವಾರ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಪೊಲೀಸ್ ಪೇದೆ ಮಹದೇವ ಸ್ವಾಮಿ ಅವರು ಬುಧವಾರ ತಮ್ಮ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು, ಅವರ ಸಾವಿನಿಂದ ಕುಟುಂಬವು ಶೋಕ ಸಾಗರದಲ್ಲಿ ಮುಳುಗಿದೆ.












Click it and Unblock the Notifications